ಮಿನಿ ವಿಧಾನಸೌಧಕ್ಕೆ ಜನರ ಪ್ರವೇಶ ನಿರ್ಬಂಧ
Team Udayavani, Jun 30, 2020, 1:44 PM IST
ಹುಬ್ಬಳ್ಳಿ: ಕೋವಿಡ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಸೋಮವಾರ ಇಲ್ಲಿನ ಮಿನಿ ವಿಧಾನಸೌಧದಲ್ಲಿರುವ ಎಲ್ಲಾ ಕಚೇರಿಗಳಲ್ಲೂ ದ್ರಾವಣ ಸಿಂಪಡಿಸಲಾಗಿದ್ದು, ಜೂ. 30ರಂದು ಕೂಡ ಸಾರ್ವನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಹಾಗೂ ವಿವಿಧ ಕಾರ್ಯದ ನಿಮಿತ್ತ ಆಗಮಿಸಿದ್ದ ಜನರನ್ನೆಲ್ಲಾ ಹೊರಗೆ ಕಳುಹಿಸಿ ಪಾಲಿಕೆ ಸಿಬ್ಬಂದಿ ಸೋಡಿಯಂ ಹೈಪೋಕ್ಲೋರೈಡ್ ದ್ರಾವಣ ಸಿಂಪಡಿಸಿದರು. ದ್ರಾವಣ ಸಿಂಪಡಿಸಿದ ಪರಿಣಾಮ ಸಿಬ್ಬಂದಿಗೆ ರಜೆ ನೀಡಿ ಮನೆಗೆ ಕಳುಹಿಸಲಾಯಿತು. ಅಗತ್ಯ ಸೇವೆಯ ಸಿಬ್ಬಂದಿ ಮಾತ್ರ ಕಚೇರಿಯಲ್ಲಿದ್ದರು. ಇದೇ ಕಟ್ಟಡದಲ್ಲಿರುವ ಇಲಾಖೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಯೊಬ್ಬರಿಗೆ ಸೋಂಕು ತಗುಲಿದ್ದು, ಅಲ್ಲದೆ ಸೋಂಕಿತರ ಶವ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಗ್ರಾಮ ಪಂಚಾಯ್ತಿಯೊಂದರ ಕಾರ್ಯದರ್ಶಿ ಮಿನಿ ವಿಧಾನಸೌಧಕ್ಕೆ ಬಂದು ಹೋಗಿದ್ದಾರೆ ಎನ್ನುವ ಕಾರಣಕ್ಕೆ ಸ್ಯಾನಿಟೈಸ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇಡೀ ಕಟ್ಟಡ ಸ್ಯಾನಿಟೈಸ್ ಮಾಡಿದ ನಂತರ ಪ್ರವೇಶ ದ್ವಾರ ಸಂಪೂರ್ಣ ಬಂದ್ ಮಾಡಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.
ಸರ್ಕ್ನೂಟ್ ಹೌಸ್ನಲ್ಲಿ ತುರ್ತು ಕಾರ್ಯ: ಮಿನಿ ವಿಧಾನಸೌಧಕ್ಕೆ ಔಷಧಿ ಸಿಂಪರಣೆ ಹಿನ್ನೆಲೆಯಲ್ಲಿ 48 ಗಂಟೆಗಳ ಕಾಲ ಕಟ್ಟಡದಲ್ಲಿ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸೇರಿದಂತೆ ಕೆಲ ಅಧಿಕಾರಿಗಳು ತಾತ್ಕಾಲಿಕ ಕಾರ್ಯನಿರ್ವಹಣೆಯನ್ನು ಸರ್ಕ್ನೂಟ್ ಹೌಸ್ಗೆ ಸ್ಥಳಾಂತರಿಸಿಕೊಂಡಿದ್ದರು. ಜೂ. 30ರಂದು ಕಟ್ಟಡದಲ್ಲಿರುವ ತಾಪಂ, ಕಂದಾಯ, ಸಮಾಜ ಕಲ್ಯಾಣ, ಖಜಾನೆ, ಶಾಸಕರ ಕಚೇರಿಗಳು ಸೇರಿದಂತೆ ಎಲ್ಲಾ ಕಚೇರಿಗಳ ಕಾರ್ಯಗಳು ಸ್ಥಗಿತಗೊಳ್ಳಲಿವೆ. ಹೀಗಾಗಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಇನ್ನೂ ಇಲ್ಲಿರುವ ಕೆಲ ಇಲಾಖೆ ಸಿಬ್ಬಂದಿಗೆ ಕರ್ತವ್ಯಕ್ಕೆ ಆಗಮಿಸದಂತೆ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.