ಕುಂದಗೋಳ: ವಿಧಾನಸಭೆ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರ ಮೇ 3ರಂದು ಸಂಜೆ 4ಕ್ಕೆ ತಾಲೂಕಿನ ಸಂಶಿ ಗ್ರಾಮದಲ್ಲಿ ಬಹಿರಂಗ ಪ್ರಚಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ ಪಾಟೀಲ ಹೇಳಿದರು.
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಹಿರಂಗ ಪ್ರಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಿ.ಕೆ. ಶಿವಕುಮಾರ, ದಿನೇಶ ಗುಂಡೂರಾವ್, ಜಮೀರ ಅಹ್ಮದ, ಎಚ್.ಕೆ. ಪಾಟೀಲ, ಸತೀಶ ಜಾರಕಿಹೊಳಿ, ಆರ್.ವಿ. ದೇಶಪಾಂಡೆ, ವಿನಯ ಕುಲಕರ್ಣಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಎಂ.ಎಸ್. ಅಕ್ಕಿ, ಎನ್.ಎಚ್. ಕೋನರೆಡ್ಡಿ ಸೇರಿದಂತೆ ಅನೇಕ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಈ ಉಪಚುನಾವಣೆ ಐತಿಹಾಸಿಕ ಚುನಾವಣೆಯಾಗಿದ್ದು, ಸಮ್ಮಿಶ್ರ ಸರ್ಕಾರದ ಅಭ್ಯರ್ಥಿ ಕುಸುಮಾವತಿ ಅವರು 25-30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ. ಜಿಪಂ ಕ್ಷೇತ್ರವಾರು ಓರ್ವ ಸಚಿವರು ಹಾಗೂ ಶಾಸಕರನ್ನು ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳಲಿದ್ದು, ಅಸಮಾಧಾನದ ಮುಖಂಡರು ಎಲ್ಲರೂ ನಾಮಪತ್ರ ಹಿಂಪಡೆದು ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ತಾಲೂಕಾಧ್ಯಕ್ಷ ಜಗದೀಶ ಉಪ್ಪಿನ, ಮುಖಂಡ ಅರವಿಂದ ಕಟಗಿ, ನಗರ ಘಟಕಾಧ್ಯಕ್ಷ ಸುರೇಶ ಗಂಗಾಯಿ, ಮಲ್ಲಿಕಾರ್ಜುನ ಕುನ್ನೂರ, ರಾಯೇಸಾಬ ಕಳರ್ಳಿಮನಿ, ಮೋಹನ ಹೊಸಮನಿ ಪತ್ರಿಕಾಗೋಷ್ಠಿಯಲ್ಲಿದ್ದರು.