ಮನೆ ಬಾಗಿಲಿಗೇ ಕಂದಾಯ ಇಲಾಖೆ ದಾಖಲೆ
1,52,394 ಕುಟುಂಬಗಳಿಗೆ ದಾಖಲೆ ತಲುಪಿಸಲು ಕ್ರಮ
Team Udayavani, Mar 13, 2022, 11:20 AM IST
ಧಾರವಾಡ: ʼಕಂದಾಯ ದಾಖಲೆ ಮನೆ ಬಾಗಿಲಿಗೆ’ ಕಾರ್ಯಕ್ರಮವು ಮೂರ್ತ ಸ್ವರೂಪ ಪಡೆದ ಜಿಲ್ಲೆಯಲ್ಲಿ ಶನಿವಾರ ಉತ್ತಮ ಸ್ಪಂದನೆ ಲಭಿಸಿದೆ.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಮತ್ತು ಉಪವಿಭಾಗಾಧಿಕಾರಿ, ತಹಶೀಲ್ದಾರರ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಂಟು ತಾಲೂಕುಗಳ 14 ಹೋಬಳಿಗಳಲ್ಲಿ ಬೆಚಾರ (ಜನವಸತಿ ಇಲ್ಲದ) ಗ್ರಾಮಗಳು ಸೇರಿ ಒಟ್ಟು 407 ಗ್ರಾಮಗಳಲ್ಲಿ ಸುಮಾರು 1,52,394 ಕುಟುಂಬಗಳಿಗೆ ವಿವಿಧ ರೀತಿಯ ಕಂದಾಯ ದಾಖಲೆಗಳನ್ನು ಉಚಿತವಾಗಿ ಅವರ ಮನೆ ಬಾಗಿಲಿಗೆ ತಲುಪಿಸಲು ಜಿಲ್ಲಾಡಳಿತ ಕ್ರಮ ವಹಿಸಿದೆ. ಶನಿವಾರ ಬೆಳಗ್ಗೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಶಾಸಕರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಿ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರತಿ ಗ್ರಾಮಗಳಲ್ಲಿ ಅಲ್ಲಿನ ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರ ನೆರವಿನಿಂದ ಮನೆ ಮನೆಗೆ ಕಂದಾಯ ದಾಖಲೆಗಳನ್ನು ತಲುಪಿಸುತ್ತಿದ್ದು, ಕುಟುಂಬಗಳಿಗೆ ಸರ್ಕಾರವು ಉಚಿತವಾಗಿ ಅವರ ಪಹಣಿ ಪತ್ರಿಕೆ, ನಕ್ಷೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡುತ್ತಿದೆ. ಗ್ರಾಮ ಲೆಕ್ಕಾಧಿಕಾರಿಗಳಿಗೆ ಹೆಚ್ಚುವರಿ ಸಾಝಾಗಳ ಜವಾಬ್ದಾರಿ ಇರುವುದರಿಂದ ನಾಳೆಯೂ ಸಹ ದಾಖಲೆಗಳನ್ನು ವಿತರಿಸಲಿದ್ದಾರೆ. ಉಳಿದ ಕುಟುಂಬಗಳಿಗೂ ಕಂದಾಯ ದಾಖಲೆಗಳನ್ನು ಪೂರೈಸಲು ಕ್ರಮವಹಿಸಲಾಗಿದೆ.
ಶನಿವಾರ ಸಂಜೆ 5 ಗಂಟೆವರೆಗೆ ಜಿಲ್ಲೆಯ 22,903 ಕುಟುಂಬಗಳಿಗೆ ಕಂದಾಯ ದಾಖಲೆಗಳನ್ನು ತಲುಪಿಸಲಾಗಿದೆ. ಗ್ರಾಮಗಳಲ್ಲಿನ ರೈತರು ಸುಗ್ಗಿ ಸಮಯವಾಗಿರುವುದರಿಂದ ಹೆಚ್ಚಾಗಿ ತಮ್ಮ ಜಮೀನುಗಳಿಗೆ ಹೋಗಿರುವುದರಿಂದ ಸಂಜೆ ಗ್ರಾಮಕ್ಕೆ ಮರಳುತ್ತಾರೆ. ಆದ್ದರಿಂದ ಕಂದಾಯ ಇಲಾಖೆಯ ಅಧಿಕಾರಿಗಳು ಸಂಜೆ ರೈತರ ಮನೆಗಳಿಗೆ ಭೇಟಿ ನೀಡಿ, ಅವರ ಕಂದಾಯ ದಾಖಲೆಗಳನ್ನು ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.