ಕೇಂದ್ರ ಸರ್ಕಾರದ ವಿರುದ್ಧ ಆರ್‌ಕೆಎಸ್‌ನಿಂದ ಪ್ರತಿಭಟನೆ
Team Udayavani, Oct 23, 2019, 8:16 AM IST
ಧಾರವಾಡ: ಕೇಂದ್ರ ಸರಕಾರವು ಆರ್ ಸಿಇಪಿ ಒಪ್ಪಂದಕ್ಕೆ ಸಹಿ ಹಾಕದಂತೆ ಆಗ್ರಹಿಸಿ ಆರ್‌ಕೆಎಸ್ ಜಿಲ್ಲಾ ಸಮಿತಿ ವತಿಯಿಂದ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಭಾರತದ ರೈತರಿಗೆ ಮರಣಶಾಸನವಾದ ಆರ್‌ಸಿಇಪಿ ಒಪ್ಪಂದದಿಂದ ಹೊರಬಂದು ಹಾಲು ಉತ್ಪನ್ನಗಳ ಮುಕ್ತ ವ್ಯಾಪಾರ ಒಪ್ಪಂದ ತಿರಸ್ಕರಿಸಬೇಕು. ಇದರೊಂದಿಗೆ ಹಾಲು ಉತ್ಪಾದಕರಿಗೆ ಹೆಚ್ಚಿನ ಸಬ್ಸಿಡಿ ನೀಡಿ ದೇಶದಲ್ಲಿ ಹೈನುಗಾರಿಕೆ ಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಲಾಯಿತು. ಆರ್‌ಕೆಎಸ್ ರಾಜ್ಯ ಖಜಾಂಚಿ ವಿ. ನಾಗಮ್ಮಾಳ್ ಮಾತನಾಡಿ, ಕೃಷಿ ಉತ್ಪನ್ನಗಳನ್ನೂ ಒಳಗೊಂಡಿರುವಂತಹ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ-ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಅಂಕಿತ ಹಾಕಲು ಮುಂದಾಗಿದೆ. ಕೃಷಿ-ಹೈನುಗಾರಿಕೆ ನಂಬಿ ಜೀವನ ನಡೆಸುತ್ತಿರುವ ರೈತ-ಕೃಷಿಕಾರ್ಮಿಕರ ಪಾಲಿಗೆ ಈ ಒಪ್ಪಂದವು ಮರಣ ಶಾಸನವಾಗಲಿದೆ.
ಈ ಒಪ್ಪಂದ ಜಾರಿಯಾದರೆ ವಿದೇಶಿ ಕೃಷಿ ಹಾಗೂ ಡೈರಿ ಉತ್ಪನ್ನಗಳು ದೇಶದ ಮಾರುಕಟ್ಟೆಗೆ ಮುಕ್ತವಾಗಿ ಲಗ್ಗೆ ಹಾಕಲಿವೆ. ಇದರಿಂದ ನಮ್ಮ ದೇಶದ ಕೃಷಿ ಮಾರುಕಟ್ಟೆಯಲ್ಲಿ ನಮ್ಮರೈತರ ಉತ್ಪನ್ನಗಳ ಮಾರಾಟಕ್ಕೆ ಹೊಡೆತ ಬೀಳಲಿದೆ ಎಂದು ಆರೋಪಿಸಿದರು.
ಆರ್‌ಸಿಇಪಿ ಒಪ್ಪಂದ ತಿರಸ್ಕರಿಸಿ ಪಶುಸಂಗೋಪನಾ ಇಲಾಖೆಯನ್ನು ಬಲಪಡಿಸಬೇಕು. ಈ ಮೂಲಕ ಹಾಲು ಒತ್ಪಾದಕರಿಗೆ ಹೆಚ್ಚಿನ ಸಬ್ಸಿಡಿ ನೀಡಿ ದೇಶದಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಲಕ್ಷ್ಮಣ ಜಡಗನ್ನವರ, ಶರಣು ಗೋನವಾರ, ಅಲ್ಲಾವುದ್ದಿನ್ ಅಡ್ಲಿ, ಎ.ಎಫ್.ಪುರದನ್ನವರ, ಐ.ಬಿ. ನಾಡಿಗೇರ, ಪಿ.ಜಿ. ಕುಲಕರ್ಣಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.