ಕಾರು ರ‍್ಯಾಲಿಯಿಂದ ರಸ್ತೆ ಸುರಕ್ಷಾ ಜಾಗೃತಿ
15ಕ್ಕೂ ಅಧಿಕ ಕಾರುಗಳು ಭಾಗಿ | 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ | ಬೀದಿ ನಾಟಕ ಪ್ರದರ್ಶಿಸಿ ಜನರಲ್ಲಿ ಅರಿವು
Team Udayavani, Jan 23, 2020, 3:31 PM IST
ಹುಬ್ಬಳ್ಳಿ: ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಕುರಿತು ವಿವಿಧ ಡ್ರೈವಿಂಗ್ ಸ್ಕೂಲ್‌ನಿಂದ ಆಗಮಿಸಿದ 15ಕ್ಕೂ ಅಧಿಕ ಕಾರುಗಳು ನಗರದ ಪ್ರಮುಖ ಬೀದಿಗಳಲ್ಲಿ ರ್ಯಾಲಿ ನಡೆಸುವುದರ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದವು.
ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ, ಜಿಲ್ಲಾಡಳಿತ, ಸಾರಿಗೆ, ಪೊಲೀಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹುಬ್ಬಳ್ಳಿ-ಧಾರವಾಡ ಮೋಟಾರು ವಾಹನ ತರಬೇತಿ ಶಾಲೆಗಳ ಸಹಯೋಗದಲ್ಲಿ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಕಾರು ರ್ಯಾಲಿಯಲ್ಲಿ ಭಾಗವಹಿಸಿ ಗಮನ ಸೆಳೆದವು. ರ್ಯಾಲಿಗೆ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎಸ್.ಎಂ. ಸಂದಿಗವಾಡ ಚಾಲನೆ ನೀಡಿದರು.
ಈದ್ಗಾ ಮೈದಾನದಿಂದ ಹೊರಟ ರ್ಯಾಲಿ ಚನ್ನಮ್ಮ ವೃತ್ತ, ಹಳೆ ಬಸ್ ನಿಲ್ದಾಣ,
ಹೊಸೂರ ಕ್ರಾಸ್, ವಿದ್ಯಾನಗರ, ಬಿವಿಬಿ ಇಂಜನಿಯರಿಂಗ್ ಕಾಲೇಜ್, ಟೆಂಡರ್ ಶ್ಯೂರ್ ರಸ್ತೆಯ ಮೂಲಕ ಚೇತನಾ ಕಾಲೇಜು ತಲುಪಿತು. ಸೀಟ್ ಬೆಲ್ಟ್ ಧರಿಸಿ, ಸಂಚಾರಿ ನಿಯಮ ಹಾಗೂ ಸಂಜ್ಞೆಗಳನ್ನು ಪಾಲಿಸಿ ಸಾರ್ವಜನಿಕರಿಗೆ ಮಾದರಿಯಾಗುವಂತೆ ವಾಹನ ಚಾಲಕರು ಕಾರು ಚಲಾಯಿಸಿದರು. ಈ ಸಂದರ್ಭದಲ್ಲಿ ಧಾರವಾಡ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ಅಪ್ಪಯ್ಯ ನಲ್ವತ್ವಾಡಮಠ, ಪಶ್ಚಿಮ ಸಾರಿಗೆ ಅಧಿಕಾರಿ ಸಿ.ಡಿ. ನಾಯಕ, ವಾರ್ತಾ ಇಲಾಖೆಯ
ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಮೋಟಾರು ವಾಹನ ನಿರೀಕ್ಷಕರಾದ ಅರುಣ ಕಟ್ಟಿಮನಿ, ರಫಿಕ್ ಅಹಮದ್ ಕಿತ್ತೂರ, ಸಂಚಾರಿ ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಮಹಾಂತೇಶ ಹೊಸಪೇಟೆ, ರತನ ಕುಮಾರ ಜೀರಗ್ಯಾಳ, ಪ್ರಶಾಂತ ನಾಯ್ಕ, ವಾಹನ ತರಬೇತಿ
ಶಾಲೆಗಳ ತರಬೇತುದಾರರಾದ ಪುಷ್ಪಾ, ಪ್ರತಿಭಾ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.