ಶಿಕ್ಷಣದಿಂದಲೇ ಸಮಾಜದ ಏಳ್ಗೆ: ಸಿಎಂ ಸಿದ್ದರಾಮಯ್ಯ

Team Udayavani, Feb 4, 2017, 12:45 PM IST

hub1.jpg

ಧಾರವಾಡ: ಸಮಾಜದ ಯಾವುದೇ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಪರಿಹಾರ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಅಂಜುಮನ್‌ ಇಸ್ಲಾಂ ಸಂಸ್ಥೆಯ ನೂತನ ವಾಣಿಜ್ಯ ಕಟ್ಟಡದ ಶಿಲಾನ್ಯಾಸ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಣದಿಂದ ಮಾತ್ರವೇ ಸಮಾನತೆ ಕಾಣಲು ಸಾಧ್ಯವಿದೆ.

14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಶಿಕ್ಷಣ ನೀಡಬೇಕು. ಇದು ಅವರ ಮೂಲಭೂತ ಹಕ್ಕಾಗಿದೆ ಎಂದರು. ಶಿಕ್ಷಣದಿಂದ ಮಾತ್ರ ಅಭಿವೃದ್ಧಿ, ಸ್ವಾಭಿಮಾನಿಗಳಾಗಲು ಸಾಧ್ಯ. ಶಿಕ್ಷಣದಿಂದಲೇ ಹಿಂದುಳಿದವರಿಗೆ ಸ್ವಾಭಿಮಾನ, ಆತ್ಮಾಭಿಮಾನ ಬರಲು ಸಾಧ್ಯ. ಹೀಗಾಗಿ ಪಾಲಕರು ಮಕ್ಕಳಿಗೆ ಶಿಕ್ಷಣ ನೀಡಿ ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕು ನಡೆಸಲು ಸಿದ್ಧರಾಗಬೇಕು ಎಂದು ತಿಳಿಸಿದರು. 

ಈ ದೇಶ ಎಲ್ಲ ಧರ್ಮ, ಜಾತಿ, ಪ್ರಾಂತದ ಜನರಿಗೆ ಸೇರಿದ್ದು, ಹೀಗಾಗಿ ಇಂದಿಗೂ ಒಟ್ಟಾಗಿ ಉಳಿಯಲು ಸಾಧ್ಯವಾಗಿದೆ. ವಿವಿಧತೆಯಲ್ಲಿ  ಏಕತೆ ಕಂಡಿದೆ. ಕೆಲವರು ಸಮಾಜ ಒಡೆಯಲು ಪ್ರಯತ್ನಿಸುತ್ತಾರೆ. ಅಂತಹ ಶಕ್ತಿಗಳ ವಿರುದ್ಧ ಎಚ್ಚರವಾಗಿರಬೇಕು. ಎಲ್ಲ ಧರ್ಮದವರು ಒಟ್ಟಾಗಿ ಇದ್ದರೆ ಅದು ಹಿಂದುಸ್ಥಾನ. ರಾಜ್ಯದಲ್ಲಿರುವ ಯಾವುದೇ ಸಮಾಜ ಅದರಲ್ಲೂ ಅಲ್ಪಸಂಖ್ಯಾತರು ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ. ನಿಮಗೆ ರಕ್ಷಣೆ ಇದೆ. 

ಕೋಮುವಾದ ಮಾಡುವವರೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುವರು ಎಂದು ಟೀಕಿಸಿದರು. ನಮ್ಮ ದೇಶದಲ್ಲಿ ಶೇ.14ರಷ್ಟು ಮುಸ್ಲಿಂ ಬಾಂಧವರಿದ್ದಾರೆ. ಆದರೆ, ಅವರಲ್ಲಿ ಶಿಕ್ಷಣದ ಮಟ್ಟ ಕಡಿಮೆ ಇದೆ. ಅವರಲ್ಲಿ ಶಿಕ್ಷಣ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅಂಜುಮನ್‌ ಸಂಸ್ಥೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಅಂಜುಮನ್‌ ಸಂಸ್ಥೆ ನೂರು ವರ್ಷಕ್ಕೂ ಅಧಿಧಿಕ ಕಾಲ ಸೇವೆ ಸಲ್ಲಿಸಿದೆ. ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆ ಮಾಡಿ ಎಲ್ಲ ವರ್ಗದ ಮಕ್ಕಳಿಗೆ ಶಿಕ್ಷಣ ಒದಗಿಸುತ್ತಿದೆ ಎಂದು ಹೇಳಿದರು. 

ಸಿಎಂ ಸೂಚನೆ: ಜಿಲ್ಲಾಡಳಿತಕ್ಕೆ ಅಂಜುಮನ್‌ ಸಂಸ್ಥೆಯಿಂದ 25 ಎಕರೆ ಭೂಮಿ ನೀಡಲು ಹಣ ನೀಡಿದ್ದರೂ ಜಿಲ್ಲಾಡಳಿತ ಭೂಮಿ ನೀಡಿಲ್ಲ ಎಂದು ಸಂಸ್ಥೆ ಅಧ್ಯಕ್ಷ ಮನವಿ ನೀಡಿದ್ದು, ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಿಂದ ಸಂಬಂಧಿಸಿದ ಕಡತ ತರಿಸಿಕೊಂಡು ವಿಚಾರಣೆ ಮಾಡಿ ಜಾಗ ನೀಡಲು ಸೂಚಿಸುತ್ತೇನೆ ಎಂದು ತಿಳಿಸಿದರು. 

ಜಿಲ್ಲಾ ಉಸ್ತುವಾರಿ  ಸಚಿವ ವಿನಯ ಕುಲಕರ್ಣಿ, ಉನ್ನತ ಶಿಕ್ಷ ಸಚಿವ ರಾಯರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್‌, ಕ್ರೀಡಾ ಸಚಿವ ಪ್ರಮೋದ ಮಧ್ವರಾಜ, ಶಾಸಕ  ಪ್ರಸಾದ ಅಬ್ಬಯ್ಯ, ಸಿ.ಎಸ್‌. ಶಿವಳ್ಳಿ, ಎನ್‌.ಎಚ್‌. ಕೋನರಡ್ಡಿ, ಮಾಜಿ ಶಾಸಕ ವೀರಣ್ಣ ಮತ್ತಿಕಟ್ಟಿ ಇದ್ದರು.  

ಟಾಪ್ ನ್ಯೂಸ್

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

6

Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

7

Kundapura: ಚೋರಾಡಿ; ಕರೆ ಬಂದರೆ ಬೆಟ್ಟ ಹತ್ತಬೇಕು!

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.