ಅಧಿಕಾರಿಗಳಿಗೆ ಆರ್‌ವಿಡಿ ಬರ ಪಾಠ

•ಬರ ಅಧ್ಯಯನ-ನಿರ್ವಹಣೆ ಪರಿಶೀಲನಾ ಸಭೆ •ಮುಂಗಾರು ಪೂರ್ವ ಸಿದ್ಧತೆಗೆ ಸೂಚನೆ

Team Udayavani, May 29, 2019, 2:39 PM IST

hubali-tdy-3..

ಹುಬ್ಬಳ್ಳಿ: ನಗರದಲ್ಲಿ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಬರ ಅಧ್ಯಯನ, ನಿರ್ವಹಣೆ ಪರಿಶೀಲನಾ ಸಭೆ ನಡೆಯಿತು.

ಹುಬ್ಬಳ್ಳಿ: ಪರ ರಾಜ್ಯಗಳಿಗೆ ಮೇವು ಸಾಗಣೆಯನ್ನು 2019ರ ಮೇವರೆಗೆ ನಿಷೇಧಿಸಲಾಗಿತ್ತು. ಅದರೆ ನಿಷೇಧವನ್ನು ಜುಲೈವರೆಗೆ ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದರು.

ತಾಲೂಕಿನ ಶಿರಗುಪ್ಪಿಯ ಸಮುದಾಯ ಭವನದಲ್ಲಿರುವ ಮೇವು ಬ್ಯಾಂಕ್‌ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ 9 ಮೇವು ಬ್ಯಾಂಕ್‌ ಆರಂಭಿಸಲಾಗಿದ್ದು, ಅಗತ್ಯವೆನಿಸಿದರೆ ಇನ್ನಷ್ಟು ಮೇವು ಬ್ಯಾಂಕ್‌ ಆರಂಭಿಸಲಾಗುವುದು. ಜಿಲ್ಲೆಯಲ್ಲಿ ಇನ್ನೂ 7 ವಾರಕ್ಕಾಗುವಷ್ಟು ಮೇವಿನ ದಾಸ್ತಾನಿದೆ. ಪ್ರತಿ ಕೆಜಿ ಮೇವಿಗೆ 2 ರೂ.ಗಳಂತೆ ಮೇವು ನೀಡಲಾಗುವುದು. ಶಿರಗುಪ್ಪಿಯಲ್ಲಿ 27 ಟನ್‌ ಮಾರಾಟವಾಗಿದ್ದು, ಇನ್ನು 7 ಟನ್‌ ಉಳಿದಿದೆ. ಮೇವು ಬೆಳೆಯಲು ಈಗಾಗಲೇ ಜಿಲ್ಲೆಯಲ್ಲಿ 18,000 ಮಿನಿ ಕಿಟ್ ನೀಡಲಾಗಿದೆ. ಆದರೆ ಮಳೆಯಾಗದಿದ್ದರಿಂದ ಇನ್ನಷ್ಟು ಮಿನಿ ಕಿಟ್ ನೀಡಿದರೆ ಯಾವುದೇ ಪ್ರಯೋಜನವಾಗಲ್ಲ. ಬರಗಾಲ ನಿರ್ವಹಣೆ ದಿಸೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಅಗತ್ಯ ಅನುದಾನ ನೀಡಲಾಗಿದೆ. ಚುನಾವಣಾ ನೀತಿ ಸಂಹಿತೆ ಮುನ್ನವೇ ಎಲ್ಲ ಜಿಲ್ಲೆಗಳಿಗೆ ಒಟ್ಟು 780 ಕೋಟಿ ರೂ. ಅನುದಾನ ನೀಡಲಾಗಿತ್ತು ಎಂದರು.

ಮಲೆನಾಡಿನಲ್ಲೂ ಮಳೆಯ ಪ್ರಮಾಣದಲ್ಲಿ ಇಳಿಮುಖವಾಗುತ್ತಿದೆ. ಮೈಸೂರು ಭಾಗದಲ್ಲಿ ಮಳೆ ಹೆಚ್ಚಾಗುತ್ತಿದೆ. ಅನಿಶ್ಚಿತತೆಯಿಂದ ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದ ಅವರು, ಮೋಡ ಬಿತ್ತನೆಗೆ ಸಚಿವ ಸಂಪುಟದ ಅನುಮೋದನೆ ದೊರೆತಿದೆ. ಬೆಂಗಳೂರು-ಹುಬ್ಬಳ್ಳಿಯನ್ನು ಕೇಂದ್ರವಾಗಿಸಿಕೊಂಡು ಮೋಡ ಬಿತ್ತನೆ ಮಾಡಲಾಗುವುದು ಎಂದು ನುಡಿದರು.

ಜನರು ಗುಳೆ ಹೋಗದಂತೆ ತಡೆಯುವುದು ನಮ್ಮ ಉದ್ದೇಶ. ಉದ್ಯೋಗ ನೀಡಲು ಸರಕಾರ ಬದ್ಧವಾಗಿದೆ. ನರೇಗಾ ಯೋಜನೆಯಡಿ ಕಳೆದ ವರ್ಷ 10 ಕೋಟಿ 47 ಲಕ್ಷ ಮಾನವ ದಿನ ಪೂರೈಸಿ ರಾಜ್ಯ ದಾಖಲೆ ನಿರ್ಮಿಸಿದೆ. ಪ್ರಸಕ್ತ ವರ್ಷ 13 ಕೋಟಿ ಮಾನವ ದಿನದ ಗುರಿಯನ್ನು ಕೇಂದ್ರ ಸರಕಾರ ನೀಡಿದೆ ಎಂದರು.

ಕುರಿ ಹಾಗೂ ಆಡುಗಳಿಗೆ ಔಷಧಿಗಾಗಿ 5 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಮಾಡಲಾಗಿದ್ದು, ಕೆರೆ ಹೂಳು ತೆಗೆಯಲು, ಕೃಷಿ ಹೊಂಡ ನಿರ್ಮಿಸಲು ಅನುದಾನ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದರು.

ಕೃಷಿ ಇಲಾಖೆ ಉಪನಿರ್ದೇಶಕ ಡಾ| ವಿಶಾಲ್ ಮಾತನಾಡಿ, ಬಳ್ಳಾರಿಯ ಕಂಪ್ಲಿಯಿಂದ ಕತ್ತರಿಸಿದ ಮೇವು ತರಿಸಲಾಗುತ್ತಿದೆ. ಜಿಲ್ಲೆಯಲ್ಲಿ 9 ಮೇವು ಬ್ಯಾಂಕ್‌ಗಳಿದ್ದು, ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಗುಡಗೇರಿಯಲ್ಲಿ ಮೇವು ಬ್ಯಾಂಕ್‌ ಆರಂಭಿಸಬೇಕೆಂದು ಅಲ್ಲಿನ ಜನರು ಮನವಿ ಮಾಡಿದ್ದಾರೆ ಎಂದರು.

ಜಿಲ್ಲೆಗೆ ಈವರೆಗೆ 431 ಟನ್‌ ಮೇವು ಬಂದಿದ್ದು, ಅದರಲ್ಲಿ 347 ಟನ್‌ ಮೇವು ಮಾರಾಟ ಮಾಡಲಾಗಿದೆ. ಮೇವಿಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂದು ವಿವರಿಸಿದರು.

ಹೊರ ರಾಜ್ಯಗಳಿಗೆ ಮೇವು ಸಾಗಣೆ ನಿಷೇಧ ಜುಲೈವರೆಗೂ ವಿಸ್ತರಣೆ:

ಧಾರವಾಡ ಜಿಲ್ಲೆಯಲ್ಲಿ 9 ಮೇವು ಬ್ಯಾಂಕ್‌ ಆರಂಭ

ಅಗತ್ಯ ಬಿದ್ದರೆ ಇನ್ನಷ್ಟು ಮೇವು ಬ್ಯಾಂಕ್‌ಗೆ ಚಿಂತನೆ

ಜಿಲ್ಲೆಯಲ್ಲಿ 7 ವಾರಕ್ಕಾಗುವಷ್ಟು ಮೇವಿನ ದಾಸ್ತಾನಿದೆ

ಬರ ನಿರ್ವಹಣೆ ದಿಸೆಯಲ್ಲಿ ಡಿಸಿಗೆ ಅಗತ್ಯ ಅನುದಾನ

ಜಿಲ್ಲೆಯಲ್ಲಿ ಮುಂಗಾರು ಪೂರ್ವ ಸಿದ್ಧತಾ ಕಾಮಗಾರಿಯನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕೆಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಕನ್ನಡ ಭವನದಲ್ಲಿ ಮಂಗಳವಾರ ನಡೆದ ಬರ ಅಧ್ಯಯನ ಹಾಗೂ ನಿರ್ವಹಣೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅನುದಾನ ಕೊರತೆಯಿಲ್ಲ. ಸಮರ್ಪಕ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು. ನಾಲಾಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಮಳೆ ನೀರು ರಸ್ತೆ ಮೇಲೆ ಹರಿದು ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಅರಣ್ಯ ಇಲಾಖೆ ಅನುಮತಿ ಪಡೆದು ಸಂಚಾರಕ್ಕೆ ತೊಂದರೆಯಾಗುವ ಗಿಡಗಳ ಟೊಂಗೆಗಳನ್ನು ಕತ್ತರಿಸಬೇಕೆಂದು ಹೇಳಿದರು.

ಅವಶ್ಯಕತೆಯಿದ್ದಲ್ಲಿ ಕೊಳವೆ ಬಾವಿ ಕೊರೆಯಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೇವಲ ಕೊಳವೆ ಬಾವಿ ಕೊರೆಸಿದರೆ ಸಾಲದು, ಅದಕ್ಕೆ ಪಂಪ್‌ ಜೋಡಿಸಿ ನೀರು ಬಳಸಲು ಅನುಕೂಲ ಕಲ್ಪಿಸಬೇಕು. ನೀರು ಸರಬರಾಜು ಮಾಡುವ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಸಬೇಕೆಂದು ಸೂಚಿಸಿದ ಅವರು, ಶೀಘ್ರದಲ್ಲೇ ಭೇಟಿ ನೀಡಿ ಪ್ರಗತಿ ಪರಿಶೀಲಿಸುವುದಾಗಿ ತಿಳಿಸಿದರು.

ನೀರಸಾಗರದಿಂದ ನಗರಕ್ಕೆ 40 ಎಂಎಲ್ಡಿ ಪ್ರತಿದಿನ ನೀರು ಪಡೆಯಲಾಗುತ್ತಿತ್ತು. ಆದರೆ 2016ರಿಂದ ಕೆರೆ ಬತ್ತಿ ಹೋಗಿದೆ. ರೈತರು ಜಲಾನಯನ ಪ್ರದೇಶ ಒತ್ತುವರಿ ಮಾಡಿಕೊಂಡಿದ್ದರಿಂದ ನೀರು ಸಂಗ್ರಹವಾಗಲು ತೊಂದರೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ನೀರಸಾಗರ ಪುನರುಜ್ಜೀವನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಜಲಾನಯನ ಪ್ರದೇಶ ಒತ್ತುವರಿ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ತಜ್ಞರನ್ನು ಕರೆದುಕೊಂಡು ಹೋಗಿ ಸಮೀಕ್ಷೆ ಮಾಡಿ ಇನ್ನೆರಡು ವಾರಗಳಲ್ಲಿ ವರದಿ ನೀಡಬೇಕು ಎಂದರು.

ಕಾಳಿ ನದಿಯಿಂದ ಕುಂದಗೋಳ-ಕಲಘಟಗಿ ತಾಲೂಕಿನ ಕೆಲ ಭಾಗಕ್ಕೆ ಕುಡಿಯುವ ನೀರು ಪೂರೈಸುವ ಕುರಿತು ಚಿಂತನೆ ನಡೆಸಲಾಗುವುದು. ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಸಾಧನೆ ನಿರೀಕ್ಷಿತ ಮಟ್ಟದಲ್ಲಿಲ್ಲ. ಪ್ರತಿ ಗ್ರಾಮ ಪಂಚಾಯತಿಯಲ್ಲೂ ನರೇಗಾ ಯೋಜನೆಯಡಿ 3 ಕಾಮಗಾರಿ ಕೈಗೊಳ್ಳಲು ಅವಕಾಶ ನೀಡಲಾಗಿದೆ ಎಂದರು.

ಮಾಜಿ ಸಿಎಂ ಜಗದೀಶ ಶೆಟ್ಟರ ಮಾತನಾಡಿ, ಹುಬ್ಬಳ್ಳಿ-ಧಾರವಾಡ ಹದಗೆಟ್ಟು ಹೋಗಿದೆ. ಅಧಿಕಾರಿಗಳು ಬೇಜವಾಬ್ದಾರರಾಗಿದ್ದಾರೆ. ನನ್ನ ಕ್ಷೇತ್ರದಲ್ಲಿ ಕೊಳವೆ ಬಾವಿಗಳನ್ನು ಕೊರೆಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು 4 ತಿಂಗಳಾದರೂ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳು ಗಂಭೀರವಾಗಿ ಕೆಲಸ ಮಾಡುತ್ತಿಲ್ಲ. ಚುನಾವಣಾ ನೀತಿ ಸಂಹಿತೆ ಕಾರಣ ನೀಡಿ ಕಾಲ ಹರಣ ಮಾಡಿದರು. ಮುಂದಾಲೋಚನೆ ಇಲ್ಲದಿದ್ದರಿಂದ ಜನರು ಸಮಸ್ಯೆ ಎದುರಿಸುವಂತಾಗಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ನೀರ ಸಾಗರ ಜಲಾನಯನ ಪ್ರದೇಶ ಒತ್ತುವರಿಯಾಗಿದ್ದು, ಗಡಿ ನಿಗದಿಪಡಿಸಿ ಒತ್ತುವರಿಯಾದ ಜಾಗ ಮರಳಿ ಪಡೆದು ಕೆರೆಗೆ ಸರಾಗವಾಗಿ ನೀರು ಹರಿದು ಬರುವ ದಿಸೆಯಲ್ಲಿ ಸಮೀಕ್ಷೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಚೆಕ್‌ ಡ್ಯಾಮ್‌ ನಿರ್ಮಾಣಕ್ಕೆ ಆದ್ಯತೆ ನೀಡಬೇಕೆಂದರು.

ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಶುದ್ಧೀಕರಿಸಿದ ಕುಡಿಯುವ ನೀರಿನ ಹೆಚ್ಚಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಶುದ್ಧೀಕರಿಸಿದ ಘಟಕಗಳ ಬಗ್ಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸುತ್ತಿದ್ದಾರೆ. ಕುಂದಗೋಳ-ನವಲಗುಂದ ತಾಲೂಕಿನ ಕೆಲ ಗ್ರಾಮಗಳಲ್ಲಿ 1 ಕೊಡ ನೀರು ಸಿಕ್ಕರೆ ಬಂಗಾರ ಸಿಕ್ಕಂತೆ ಮಾಡುತ್ತಾರೆ ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಬಿಆರ್‌ಟಿಎಸ್‌ ಕಾಮಗಾರಿ ಅಪೂರ್ಣವಾಗಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಮಳೆಗಾಲದಲ್ಲಿ ಸ್ಥಿತಿ ಇನ್ನಷ್ಟು ಬಿಗಡಾಯಿಸುತ್ತದೆ. ಆದ್ದರಿಂದ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿದರು.

ಶಾಸಕ ಆಮೃತ ದೇಸಾಯಿ ಮಾತನಾಡಿ, ಧಾರವಾಡ ತಾಲೂಕಿನ 14 ಗ್ರಾಮಗಳಲ್ಲಿ ನೀರಿನ ಸಮಸ್ಯೆಯಿದೆ. ಮಲಪ್ರಭಾದಿಂದ ಕೆಐಎಡಿಬಿ ಮೂಲಕ ಕೈಗಾರಿಕಾ ವಸಾಹತುಗಳಿಗೆ ಪೂರೈಕೆಯಾಗುವ ನೀರನ್ನು ಗ್ರಾಮಗಳಿಗೆ ಪೂರೈಸಬೇಕೆಂದು ಒತ್ತಾಯಿಸಿದರು.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್‌.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದೀಪಾ ಚೋಳನ್‌, ಜಿಪಂ ಸಿಇಒ ಸತೀಶ, ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ, ಹು-ಧಾ ಪೊಲೀಸ್‌ ಆಯುಕ್ತ ನಾಗರಾಜ ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.