ಸಸಿ ಬೆಳೆಸುವ ಕಾರ್ಯಕ್ಕೆ ಚಾಲನೆ
Team Udayavani, Mar 24, 2017, 3:08 PM IST
ಧಾರವಾಡ: ವೃಕ್ಷ (ಸಸಿ) ದಾಸೋಹದ ಅಂಗವಾಗಿ ಸಸಿ ಬೆಳೆಸುವ ಕಾರ್ಯಕ್ರಮಕ್ಕೆ ನಗರದ ತಪೋವನದಲ್ಲಿ ಬುಧವಾರ ಚಾಲನೆ ನೀಡಲಾಯಿತು. ವೃಕ್ಷ ಭಾರತ ಸೇವಾ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರು ಬೀಜ ಹಾಕುವ ಮೂಲಕ ಚಾಲನೆ ನೀಡಿದರು.
ಮಂಡಳಿಯು ಹೊಂಗೆ, ಹುಣಸೆ, ಕಾಡುಬದಾಮ, ಸಂಕೇಶ್ವರ, ಮಹಾಗನಿ ಮುಂತಾದ ತಳಿಗಳ ಮರಗಳನ್ನು ಬೆಳೆಸಲು ಮುಂದಾಗಿರುವುದಕ್ಕೆ ಶ್ರೀಗಳು ಹರ್ಷ ವ್ಯಕ್ತಪಡಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಸಿದ್ಧೇಶ್ವರ ಶ್ರೀಗಳು, ಡಾ| ಶ್ರೀಶೈಲ ಚೌಗಲಾ ಅವರು ರಚಿಸಿದ ವೃಕ್ಷಕ್ರಾಂತಿ ಕನ್ನಡ ಮತ್ತು ಹಿಂದಿ ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ಮಹೇಶಾನಂದ ಸ್ವಾಮೀಜಿ ಮಾತನಾಡಿ, ಇಂದು ಕೈಗಾರಿಕೆ ಸ್ಥಾಪನೆ, ರಸ್ತೆ, ಕಟ್ಟಡ ನಿರ್ಮಾಣ ಇನ್ನಿತರ ಉದ್ದೇಶಗಳಿಗಾಗಿ ಮರಗಳನ್ನು ನಾಶ ಮಾಡುವ ಕೆಲಸ ನಡೆಯುತ್ತಿದೆ. ಇದರಿಂದ ಶುದ್ಧ ಗಾಳಿ, ಮಳೆಯ ಅಭಾವ ಮತ್ತು ಅಂತರ್ಜಲ ಕುಸಿತದಿಂದ ಜೀವಜಲ ಸಿಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಮಾನವನ ಮೇಲೆ ಹಲವು ಬಗೆಯಲ್ಲಿ ದುಷ್ಪರಿಣಾಮ ಬೀರುತ್ತಿದೆ.
ಈ ಎಲ್ಲ ಸಮಸ್ಯೆಗಳಿಂದ ಪಾರಾಗಲು ಮರಗಳನ್ನು ಬೆಳೆಸಲು ಪ್ರತಿಯೊಬ್ಬರು ಆಸಕ್ತಿ ತೋರಿಸಬೇಕು. ಸ್ವಯಂ ಪ್ರೇರಣೆಯಿಂದ ಸಸಿಗಳನ್ನು ಬೆಳೆಸಿ ವಿತರಿಸಲು ಮುಂದಾಗಿರುವುದು ಶ್ಲಾಘನೀಯ ಎಂದರು. ಹುಬ್ಬಳ್ಳಿ ಹೊಸಮಠದ ಚಂದ್ರಶೇಖರ ಶಿವಾಚಾರ್ಯರು, ವಚನಾನಂದ ಸ್ವಾಮೀಜಿ ಇದ್ದರು. ಪೊ| ಶಂಭುಲಿಂಗಪ್ಪ ಹೆಗಡಾಳ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.