ಸವಾಯಿ ಗಂಧರ್ವ ನವೀಕೃತ ಕಲಾಮಂದಿರ ಜೂನ್‌ ಅಂತ್ಯಕ್ಕೆ ಲೋಕಾರ್ಪಣೆ

Team Udayavani, Mar 13, 2017, 2:54 PM IST

hub5.jpg

ಹುಬ್ಬಳ್ಳಿ: ನವೀಕರಣದ ನಾಮಫ‌ಲಕ ಹಾಕಿಕೊಂಡು ಮೂರು ವರ್ಷ ಕಳೆದಿವೆ. ಇನ್ನೇನು ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳ್ಳಲಿದೆ ಎಂಬ ಹೇಳಿಕೆಗಳು, ಹೇಳಿಕೆಗಳಾಗಿಯೇಮುಂದುವರಿದಿವೆ. ಇದೀಗ ಜೂನ್‌ ಅಂತ್ಯಕ್ಕೆ ಕಾಮಗಾರಿ ಮುಗಿಯಲಿದೆ ಎಂಬ ಹೊಸ ಹೇಳಿಕೆಯೊಂದು ಹೊರಬಿದ್ದಿದೆ. 

ಇಲ್ಲಿನ ದೇಶಪಾಂಡೆ ನಗರದಲ್ಲಿನ ಸವಾಯಿ ಗಂಧರ್ವ ಕಲಾ ಮಂದಿರದ ನವೀಕರಣದ ವೃತ್ತಾಂತವಿದು. ಕಲಾ ಮಂದಿರದ ನವೀಕರಣಕ್ಕೆ ಈಗಾಗಲೇ ಸುಮಾರು 2.05 ಕೋಟಿ ರೂ.ನಷ್ಟುಅನುದಾನ ನೀಡಲಾಗಿದ್ದು, ಕಾಮಗಾರಿ ವೇಗ ಮಾತ್ರ ನಿರೀಕ್ಷಿತ ರೀತಿಯಲ್ಲಿಲ್ಲ ಎಂಬುದು ಹಲವರ ಅಸಮಾಧಾನವಾಗಿದೆ. ಕಲಾ ಮಂದಿರ ದ್ವಾರ ಬದಲಾವಣೆ ಕುರಿತಾಗಿ ಸಣ್ಣ ವಿವಾದವೂ ಎದ್ದಿತ್ತು. 

ಇದು ಕೂಡ ಕಾಮಗಾರಿ ವಿಳಂಬಕ್ಕೆತನ್ನದೇ ಕೊಡುಗೆ ನೀಡಿದೆ ಎನ್ನಲಾಗುತ್ತಿದೆ. ನವೀಕರಣಕ್ಕಾಗಿ 2013ರಲ್ಲೇ ಸಾರ್ವಜನಿಕ ಬಳಕೆಯನ್ನು ಸ್ಥಗಿತಗೊಳಿಸಿದ್ದ ಭವನ 2017ರಲ್ಲಾದರೂ ಸೇವೆಗೆ ಲಭ್ಯವಾಗುವುದೇ ಎಂಬ ಕುತೂಹಲ ಹೆಚ್ಚಿಸಿದೆ. ಸವಾಯಿ ಗಂಧರ್ವ ಕಲಾ ಮಂದಿರ ನವೀಕರಣಕ್ಕಾಗಿ 2013 ರಲ್ಲಿಯೇ ಭವನ ಬಂದ್‌ ಮಾಡಲಾಯಿತು.

2014ರಲ್ಲಿ ಕಲಾ ಭವನ ನವೀಕರಣ ಟೆಂಡರ್‌ ಪ್ರಕ್ರಿಯೆ ನಡೆಸಲಾಯಿತು. ಅದಾದ ನಂತರ ನವೀಕರಣ ಕಾಮಗಾರಿಯನ್ನು ನಿರ್ಮಿತ ಕೇಂದ್ರ ವಹಿಸಿಕೊಂಡು ಮಂದಿರದ ಮೇಲ್ಛಾವಣೆ ತೆಗೆದು ಹೊಸ ಮೇಲ್ಛಾವಣೆ ಅಳವಡಿಕೆ, ಹಿಂಭಾಗದಲ್ಲಿರುವ ಶೌಚಾಲಯ ತೆಗೆದು ನೂತನ ಶೌಚಾಲಯ ನಿರ್ಮಾಣ, ಭಾಗದಲ್ಲಿ ಶಿಥಿಲಗೊಂಡ ಕಟ್ಟಡ ಭಾಗದ ಮರು ನಿರ್ಮಾಣ, ವೇದಿಕೆ ನವೀಕರಣ, ಆಸನ, ಹವಾ ನಿಯತ್ರಿತ ವ್ಯವಸ್ಥೆ, ವೈರಿಂಗ್‌, ಪ್ಲೋರಿಂಗ್‌ ಸೇರಿದಂತೆ ಇನ್ನು ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು.

ಕೇವಲ ಎಂಟು ತಿಂಗಳ ಕಾಲಾವಧಿಯಲ್ಲಿ ಕಾಮಗಾರಿ ಪೂರ್ಣದ ಒಡಂಬಡಿಕೆ ಇತ್ತಾದರೂ ಅವಧಿ ವಿಸ್ತರಣೆ, ವಿಸ್ತರಣೆಯೊಂದಿಗೆ ಅಂತಿಮವಾಗಿ ನಿರ್ಮಿತಿಕೇಂದ್ರದ ಕಾಮಗಾರಿ ಮುಗಿದಿದೆ. ಕಲಾ ಮಂದಿರ ನವೀಕರಣಕ್ಕಾಗಿ ರಾಜ್ಯ ಸರಕಾರ ಪಾಲಿಕೆಗೆ ನೀಡುವ ವಿಶೇಷ ಅನುದಾನದಲ್ಲಿ 2ನೇ 100 ಕೋಟಿ ರೂ. ಅನುದಾನದಲ್ಲಿ 1.75 ಕೋಟಿ ಹಾಗೂ 3ನೇ 100 ಕೋಟಿ ರೂ. ಅನುದಾನದಲ್ಲಿ 1.5 ಕೋಟಿ ರೂ. ನೀಡಲಾಗಿದೆ.

ನಿರ್ಮಿತಿ ಕೇಂದ್ರಕ್ಕೆ ವಹಿಸಿದ್ದ ಕಾಮಗಾರಿ ಮುಗಿದ ಅನಂತವೂ ಮಂದಿರದಲ್ಲಿ ಇನ್ನೂ ಆಸನ, ಹವಾ ನಿಯಂತ್ರಿತ ವ್ಯವಸ್ಥೆ, ಪ್ಲೋರಿಂಗ್‌, ಪ್ಲಾಸ್ಟರಿಂಗ್‌ ಹಾಗೂ ವಿದ್ಯುತ್‌ ಸೌಲಭ್ಯ ಅಳವಡಿಕೆ ಕಾರ್ಯ ಆಗಬೇಕಿದೆ. ಇದಕ್ಕಾಗಿ ಮತ್ತೂಂದು ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, ಟೆಂಡರ್‌ ಪಡೆದ ಗುತ್ತಿಗೆದಾರ ಸದ್ಯದಲ್ಲೇ ಕಾಮಗಾರಿ ಆರಂಭಿಸಬೇಕಿದೆ. 

ಜಿಲ್ಲಾಧಿಕಾರಿ ಡಾ|ಎಸ್‌.ಬಿ.ಬೊಮ್ಮನಹಳ್ಳಿ, ತಹಶೀಲ್ದಾರ ಶಶಿಧರ ಮಾಡ್ಯಾಳ, ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಸವಾಯಿ ಗಂಧರ್ವ ಕಲಾ ಮಂದಿರಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಕಲಾಮಂದಿರಕಾಮಗಾರಿಗೆ ಬೇಕಾಗುವ ಅನುದಾನ ನೀಡಲಾಗಿದ್ದು, ವೇದಿಕೆ ನವೀಕರಣಕ್ಕೆ ಬೇಕಾಗುವ ಹಣವನ್ನು ಪಾಲಿಕೆ ವಿಶೇಷ ಅನುದಾನದಲ್ಲಿ ನೀಡಲು ನಿರ್ಧರಿಸಲಾಗಿದೆ.

ಕಲಾ ಮಂದಿರದ ಬಾಕಿ ಉಳಿದಿರುವ ಕಾಮಗಾರಿಯನ್ನು ಜೂನ್‌ ಅಂತ್ಯದೊಳಗೆ ಪೂರ್ಣಗೊಳಿಸುವ ಭರವಸೆಯನ್ನು ಗುತ್ತಿಗೆದಾರ ವ್ಯಕ್ತಪಡಿಸಿದ್ದು, ಅಷ್ಟರೊಳಗೆ ಕಾಮಗಾರಿ ಪೂರ್ಣಗೊಂಡು ಕಲಾ ಮಂದಿರಸಾರ್ವಜನಿಕ ಸೇವೆಗೆ ಲಭ್ಯವಾಗುವುದೇ ಎಂಬುದನ್ನು ಕಾದು ನೋಡಬೇಕಿದೆ. 

* ಬಸವರಾಜ ಹೂಗಾರ

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.