ಸವಾಯಿ ಗಂಧರ್ವ ಕಲಾಭವನ ವರ್ಷದಲ್ಲಿ ಬಳಕೆಗೆ ಮುಕ್ತ
Team Udayavani, Mar 31, 2017, 1:24 PM IST
ಹುಬ್ಬಳ್ಳಿ: ಇನ್ನೊಂದು ವರ್ಷದಲ್ಲಿ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಭವನ ಸಾರ್ವಜನಿಕ ಕಾರ್ಯಕ್ರಮಗಳಿಗೆ ಮುಕ್ತವಾಗಲಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು. ಗುರುವಾರ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾ ಭವನದ ಇನ್ನುಳಿದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಸವಾಯಿ ಗಂಧರ್ವ ಕಲಾಭವನವನ್ನು ಪಾಲಿಕೆಯ 100 ಕೋಟಿ ರೂ. ವಿಶೇಷ ಅನುದಾನದಲ್ಲಿ ಕಲಾಭವನ ನವೀಕರಣಕ್ಕೆ 1.75 ಕೋಟಿ ರೂ. ಮೊದಲ ಹಂತದ ಅನುದಾನದಡಿ ನಿರ್ಮಿತಿ ಕೇಂದ್ರದಿಂದ ಕಾಮಗಾರಿ ಕೈಗೊಳ್ಳಲಾಗಿದೆ. ಪಾಲಿಕೆಯ 4ನೇ 100 ಕೋಟಿ ಅನುದಾನದಲ್ಲಿ ಇನ್ನು 1.75 ಕೋಟಿ ಬಿಡುಗಡೆಯಾಗಿದ್ದು, ಬಾಕಿ ಉಳಿದ 11ಕ್ಕೂ ಹೆಚ್ಚು ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು.
ಸದ್ಯ ಪ್ಲಾಸ್ಟರಿಂಗ್, ವೇದಿಕೆ, ನೆಲಹಾಸು, ಸಭಾವನ ಒಳಗಿನ ಕಾಮಗಾರಿ, ವಿದ್ಯುತ್ ದೀಪಗಳ ವ್ಯವಸ್ಥೆ, ಹವಾನಿಯಂತ್ರಿತ ಸೌಲಭ್ಯ ಸೇರಿದಂತೆ ಇನ್ನಿತರ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇನ್ನುಳಿದಂತೆ ಆಸನದ ವ್ಯವಸ್ಥೆ ಆಗಬೇಕು. ಅದಕ್ಕಾಗಿ 40 ಲಕ್ಷ ರೂ.ಗಳ ಅವಶ್ಯಕತೆ ಇದ್ದು, ಈಗಾಗಲೇ ಪಾಲಿಕೆ ಬಜೆಟ್‌ನಲ್ಲಿ ಕಲಾಭವನದ ಅಭಿವೃದ್ಧಿಗೆಂದು 1 ಕೋಟಿ ರೂ. ತೆಗೆದಿರಿಸಲಾಗಿದೆ.
ಅದನ್ನು ಇಲ್ಲಿಗೆ ಬಳಕೆ ಮಾಡಿಕೊಳ್ಳಲಾಗುವುದು. ಕಲಾಭವನದ ಬಳಕೆ ಶುಲ್ಕ ಕುರಿತಾಗಿ ಸಾಹಿತಿಗಳು, ಸಂಘ-ಸಂಸ್ಥೆಗಳು ಹಾಗೂ ಕಲಾಸ್ತಕರ ಸಮ್ಮುಖದಲ್ಲಿ ಪಾಲಿಕೆಯಿಂದ ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಗದೀಶ ಶೆಟ್ಟರ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಮಹಾಪೌರ ಡಿ.ಕೆ. ಚವ್ಹಾಣ, ಉಪಮಹಾಪೌರ ಲಕ್ಷ್ಮೀಬಾಯಿ ಬಿಜವಾಡ, ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಲಕ್ಷ್ಮೀ ಉಪ್ಪಾರ, ಶಿವಾನಂದ ಮುತ್ತಣ್ಣವರ, ಮುಖಂಡರಾದ ನಾಗೇಶ ಕಲುರ್ಗಿ, ಲಕ್ಷ್ಮಣ ಉಪ್ಪಾರ, ಮಲ್ಲಿಕಾರ್ಜುನ ಸಾವುಕಾರ, ಜವಳಿ, ಬಸವರಾಜ ಅಮ್ಮಿನಬಾವಿ, ಹನುಮಂತಪ್ಪ ದೊಡ್ಡಮನಿ ಸೇರಿದಂತೆ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.