ಎಸ್‌ಸಿ-ಎಸ್‌ಟಿಗೆ ಮನೆ ನೀಡಲು ಇಲ್ಲ ಹಣದ ಕೊರತೆ


Team Udayavani, Aug 5, 2017, 12:55 PM IST

hub3.jpg

ಧಾರವಾಡ: ಎಸ್‌ಸಿ ಮತ್ತು ಎಸ್‌ಟಿ ಜನಾಂಗದ ಅರ್ಹ ಫಲಾನುಭವಿಗಳಿಗೆ ಮನೆ ಕಟ್ಟಿ ಕೊಡಲು ಹಣದ ಕೊರತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. ನಗರದ ಲಕ್ಕಮ್ಮನಹಳ್ಳಿ ಲಿಡಕರ್‌ ಸಂಕೀರ್ಣದಲ್ಲಿ ನಿರ್ಮಿಸಿರುವ ಸಮುದಾಯ ಭವನದ ಉದ್ಘಾಟನೆ ಮತ್ತು ಜಿ+2 ಮಾದರಿಯ ವಸತಿ ಸಹಿತ ಕಾರ್ಯಾಗಾರಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. 

ಈ ಸಮಾಜದ ಜನರಿಗೆ ಮನೆಗಳಿಲ್ಲ ಎಂಬ ಕೊರಗು ಇರದಿರಲಿ. ಮನೆಗಳು ಇಲ್ಲದವರು ಆಶ್ರಮ ಮನೆ ಪಡೆಯಲು ಬಯಸಿ ಪಟ್ಟಿ ಮಾಡಿ ಸಲ್ಲಿಸಿದರೆ ಜಮೀನು ಗುರುತಿಸಿ, ನಿವೇಶನ ಸಿದ್ಧಪಡಿಸಿ ಮನೆ ಕಟ್ಟಿಕೊಡಲಾಗುವುದು ಎಂದು ಭರವಸೆ ನೀಡಿದರು.

ಚರ್ಮೋದ್ಯಮ ಬೆಳವಣಿಗೆ ಮತ್ತು ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳ ಶ್ರೇಯೋಭಿವೃದ್ಧಿಗೆ ಸರಕಾರ ಸಾಕಷ್ಟು ಅಭಿವೃದ್ಧಿ ಯೋಜನೆ ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಬೇಕು. ಈ ಸಮಾಜದ ನಿರುದ್ಯೋಗ ಯುವಕ-ಯುವತಿಯರು ತರಬೇತಿ ಕಾರ್ಯಾಗಾರದ ಸದುಪಯೋಗ ಪಡಿಸಿಕೊಂಡು ಸ್ವಯಂ ಉದ್ಯೋಗ ಹೊಂದಬೇಕು ಎಂದು ತಿಳಿಸಿದರು. 

ಸರಕಾರ ಲಿಡಕರ್‌ ನಿಗಮದಿಂದ ಕೈಗಾರಿಕಾ ತರಬೇತಿ ಪಡೆದ ಜನರಿಗೆ ಉದ್ಯೋಗ ಒದಗಿಸಲಾಗುತ್ತಿದೆ. ಶಿಕ್ಷಣದಿಂದ ವಂಚಿತರಾಗಿ ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವ ಎಸ್‌ಸಿ-ಎಸ್‌ಟಿ ಸಮಾಜದ ಯುವಕ-ಯುವತಿಯರಿಗೆ ಸರಕಾರ 5 ಲಕ್ಷ ರೂ.ಗಳ ವರೆಗೆ ಸಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಲಿಡಕರ್‌ ಕಾಲೋನಿಯಿಂದ ನವಲೂರು ರಸ್ತೆಯ ವರೆಗೆ ಸಿಸಿ ರಸ್ತೆಯನ್ನಾಗಿಸುವ ಯೋಜನೆ ರೂಪಿಸಲಾಗಿದ್ದು, ಈಗಾಗಲೇ ಕಾಮಗಾರಿ ಆರಂಭಿಸಲಾಗಿದೆ. ಚರ್ಮಗಾರರಿಗೆ ನೀಡಿದ ವಸತಿ ನಿವೇಶನಗಳು ಸರಕಾರದ ಆದೇಶದಂತೆ 99 ವರ್ಷಗಳ ಲೀಜ್‌ ಆಧಾರದಲ್ಲಿವೆ.

ಅವುಗಳಿಗೆ ಎನ್‌ಒಸಿ ನೀಡುವಂತೆ ಸಮಾಜದ ಮುಖಂಡರು ಒತ್ತಾಯಿಸುತ್ತಿದ್ದಾರೆ. ಆದರೆ ಎನ್‌ಒಸಿ ನೀಡುವ ವಿಚಾರವನ್ನು ಸರಕಾರ ಕೈಬಿಟ್ಟಿದ್ದು, ಒಂದು ವೇಳೆ ನಿವೇಶನದಾರರಿಗೆ ಬ್ಯಾಂಕ್‌ ಸಾಲ ಸೌಲಭ್ಯ ಬೇಕಾದಲ್ಲಿ ಕಲ್ಪಿಸಿಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. 

ಇದಕ್ಕೂ ಮುನ್ನ ಲಕ್ಕಮ್ಮನಹಳ್ಳಿ ಸಂಕೀರ್ಣದಲ್ಲಿ ಜಿ+2 ಮಾದರಿಯ ವಸತಿ ಸಹಿತ ಕಾರ್ಯಾಗಾಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಯಿತು. ಡಾ| ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಓ.ಶಂಕರ, ಮಹಾಪೌರ ಡಿ.ಕೆ. ಚೌವ್ಹಾಣ, ಕರ್ನಾಟಕ ಬಾಲವಿಕಾಸ ಅಕಾಡೆಮಿ ವೇದವ್ಯಾಸ ಕೌಲಗಿ, ಪಾಲಿಕೆ ಸದಸ್ಯ ಶಂಕರ ಶಳಕೆ ಇದ್ದರು. 

ಟಾಪ್ ನ್ಯೂಸ್

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.