Heavy Rain: ಧಾರವಾಡ ಜಿಲ್ಲೆಯಾದ್ಯಂತ ಜು.25, 26 ರಂದು ಶಾಲಾ ಕಾಲೇಜುಗಳಿಗೆ ರಜೆ
Team Udayavani, Jul 24, 2024, 10:32 PM IST
ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ತಂಪುಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪೂರ್ವ ಪ್ರಾಥಮಿಕ ಶಾಲೆ, ಖಾಸಗಿ, ಅನುದಾನಿತ, ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: Honor 200 Pro 5G, Honor 200 5G ಫೋನ್ ಗಳು ಭಾರತದಲ್ಲಿ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.