ಮಳೆಗೆ ಕುಸಿದ ಶಾಲಾ ಕಾಂಪೌಂಡ್
•ಸಿದ್ದೇಶ್ವರ ನಗರದಲ್ಲಿ ರವಿವಾರ ರಾತ್ರಿ ನಡೆದ ಘಟನೆ •ಕ್ಷೇತ್ರ ಶಿಕ್ಷಣಾಧಿಕಾರಿ ಸಹಿತ ಅಧಿಕಾರಿಗಳಿಂದ ಸ್ಥಳ ಭೇಟಿ-ಪರಿಶೀಲನೆ
Team Udayavani, Jul 9, 2019, 7:33 AM IST
ಧಾರವಾಡ: ಕುಸಿದು ಬಿದ್ದಿರುವ ಶಾಲಾ ಕಾಂಪೌಂಡ್ ಪರೀಕ್ಷಿಸಿದ ಶಹರ ಬಿಇಒ ಖಾಜಿ.
ಧಾರವಾಡ: ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸತತ ಮೂರು ದಿನಗಳಿಂದ ಜಿಟಿ ಜಿಟಿ ಮಳೆ ಮುಂದುವರಿದಿದ್ದು, ಸೋಮವಾರ ಧಾರಾಕಾರ ಮಳೆ ಸುರಿದಿದೆ.
ಸಿದ್ದೇಶ್ವರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗೋಡೆ ರವಿವಾರ ರಾತ್ರಿ ಕುಸಿದು ಬಿದ್ದಿದೆ. 1ರಿಂದ 7ನೇ ವರ್ಗದವರೆಗೆ ಇರುವ ಶಾಲೆಯಲ್ಲಿ 137 ಮಕ್ಕಳ ಹಾಜರಾತಿ ಇದ್ದು, ರಜೆ ದಿನ ಬಿದ್ದಿರುವ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸುದ್ದಿ ತಿಳಿದ ಕೂಡಲೇ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಖಾಜಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮಳೆಗಾಲದ ಸಮಯದಲ್ಲಿ ಕಾಂಪೌಂಡ್ ಗೋಡೆ ಹಾಗೂ ಕೊಠಡಿಗಳ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಶಾಲಾ ಪ್ರಧಾನ ಗುರುಗಳಿಗೆ ಸೂಚಿಸಿರುವ ಬಿಇಒ, ಯಾವುದೇ ಕಾರಣಕ್ಕೂ ದುರಸ್ತಿ ಇರುವ ಕೊಠಡಿಗಳ ಅಥವಾ ಗೋಡೆಗಳ ಬಳಿ ಮಕ್ಕಳನ್ನು ಕೂಡ್ರಿಸದಂತೆ ಸೂಚನೆ ನೀಡಿದ್ದಾರೆ.
ಸಂಚಾರ ಅಸ್ತವ್ಯಸ್ತ: ಸತತ ಮಳೆಯಿಂದ ನಗರದಲ್ಲಿ ಸಂಚಾರ ಅಸ್ತವ್ಯಸ್ತವಾಗುತ್ತಿದೆ. ಶಿವಾಜಿ ಸರ್ಕಲ್ನಿಂದ ಮುರುಘಾ ಮಠದ ವರೆಗೆ ಸಂಚಾರದಲ್ಲಿ ತೊಂದರೆ ಉಂಟಾಗಿದೆ. ಈ ರಸ್ತೆಯಲ್ಲಿ ತಗ್ಗು-ಗುಂಡಿ ಹುಡುಕುವ ಬದಲಾಗಿ ಗುಂಡಿಗಳ ಮಧ್ಯೆ ರಸ್ತೆ ಹುಡುಕುವಂತಾಗಿದೆ. ಮಳೆ ನೀರಿನಿಂದ ಗುಂಡಿಗಳು ತುಂಬಿವೆ. ಬಸವೇಶ್ವರ ನಗರದ ಕೊಪ್ಪದಕೇರಿ ರಸ್ತೆಗಳು ಸೇರಿ ವಿವಿಧ ಕಾಲೋನಿಗಳ ರಸ್ತೆಗಳಲ್ಲಿ ಗುಂಡಿ ಬಿದ್ದಿರುವ ಕಾರಣ ಸಂಚಾರದಲ್ಲಿ ತೊಂದರೆ ಆಗಿದೆ. ಇದರೊಂದಿಗೆ ಟೋಲ್ನಾಕಾ, ದೈವಜ್ಞ ಕಲ್ಯಾಣ ಮಂಟಪ, ಪಾಲಿಕೆ ವೃತ್ತದಲ್ಲಿಯೂ ಸಂಚಾರದಲ್ಲಿ ತೊಂದರೆ ಉಂಟಾಗುತ್ತಲಿದೆ. ಅದರಲ್ಲೂ ಟೋಲ್ನಾಕಾ ಬಳಿ ಮಳೆ ನೀರು ಕೆರೆಯಂತೆ ರಸ್ತೆಯಲ್ಲಿ ತುಂಬಿದ್ದು, ಸಂಚಾರದಲ್ಲಿ ಸಾಕಷ್ಟು ತಾಪತ್ರಯ ಉಂಟಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.