ವಿಜ್ಞಾನ ಮಾದರಿ ಪ್ರದರ್ಶನಕ್ಕೆ ತೆರೆ


Team Udayavani, Jan 14, 2017, 12:29 PM IST

hub2.jpg

ಹುಬ್ಬಳ್ಳಿ: ಅಗಸ್ತ್ಯ ಅಂತಾರಾಷ್ಟ್ರೀಯ ಫೌಂಡೇಶನ್‌ ನಿಂದ ನ್ಯೂ ಕಾಟನ್‌ ಮಾರ್ಕೆಟನಲ್ಲಿರುವ ಸಾಂಸ್ಕೃತಿಕ ಭವನದಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆ ಮತ್ತು ಪ್ರದರ್ಶನಕ್ಕೆ ಶುಕ್ರವಾರ ತೆರೆಬಿದ್ದಿದ್ದು, ವಿಜ್ಞಾನ ಮಾದರಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. 

6 ಮತ್ತು 7ನೇ ತರಗತಿ ಹಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ಪ್ರಥಮ ಬಹುಮಾನ ಗುಜರಾತನ ರಾಜಕೋಟಾದ ಶ್ರೀ ಜಿ.ಕೆ.ದೋಲಕೈಯಾ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ನಿರ್ಮಿಸಿದ ಅಂಧರಿಗೆ ಉಪಯೋಗವಾಗುವ ಸ್ಮಾರ್ಟ್‌ ಸ್ಟಿಕ್‌ಗೆ ಪ್ರಥಮ ಸ್ಥಾನ ಬಂದಿದ್ದು,

20 ಸಾವಿರ ನಗದು ಹಾಗೂ ಪ್ರಶಸ್ತಿ ಫ‌ಲಕ, ದ್ವಿತೀಯ ಬಹುಮಾನ ಮಹಾರಾಷ್ಟ್ರ ವರ್ಧಾ ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆ ಸಾಯಿರಪುರ ವಿದ್ಯಾರ್ಥಿಗಳು ನಿರ್ಮಿಸಿ ಸೋಲಾರ್‌ ಮೂಲಕ ಹುಲ್ಲು ಕಟಾವು ಯಂತ್ರಕ್ಕೆ 10 ಸಾವಿರ ನಗದು ಹಾಗೂ ಪ್ರಶಸ್ತಿ ಫ‌ಲಕ ನೀಡಲಾಯಿತು. 

8 ಮತ್ತು 10ನೇ ತರಗತಿ ಪ್ರೌಢಶಾಲೆ ವಿಭಾಗದಲ್ಲಿ ದಾವಣಗೆರೆಯ ಜೈನ್‌ ವಿದ್ಯಾಲಯದ ವಿದ್ಯಾರ್ಥಿಗಳು ನಿರ್ಮಿಸಿದ ಕಚ್ಚಾ ಪ್ಲಾಸ್ಟಿಕ್‌ನಿಂದ ಇಂಧನ ಉತ್ಪತ್ತಿ ಮಾದರಿಗೆ ಪ್ರಥಮ ಬಹುಮಾನ 20 ಸಾವಿರ ನಗದು ಹಾಗೂ ಪ್ರಶಸ್ತಿ ಫ‌ಲಕವನ್ನು ನೀಡಲಾಯಿತು.

ತೆಲಂಗಾಣದ ಹೈದ್ರಾಬಾದ್‌ ಜಿಲ್ಲೆಯ ಮಯಾಪುರ ವಿಕಾಸ ಶಾಲೆ ಬಾಚುಪಾಳ್ಯ ಶಾಲೆಯ ವಿದ್ಯಾರ್ಥಿಗಳು ಕಾರ್ಬೈಡ್‌ ನಿಂದ ಬದುಕಿನ ಮೇಲಾಗುವ ಪರಿಣಾಮ ಕುರಿತಾಗಿ ತಯಾರಿಸಿದ ಮಾದರಿಗೆ ದ್ವಿತೀಯ ಬಹುಮಾನ  10 ಸಾವಿರ ನಗದು ಹಾಗೂ ಪ್ರಶಸ್ತಿ ಫ‌ಲಕ ನೀಡಲಾಯಿತು.

ಪಿಯುಸಿ, ಐಟಿಐ ಹಾಗೂ ಡಿಪ್ಲೋಮಾ ವಿಭಾಗದಲ್ಲಿ ಬೆಳಗಾವಿಯ ಕೆಎಲ್‌ಇ ಸ್ವತಂತ್ರ ಕಾಲೇಜಿನ ವಿದ್ಯಾರ್ಥಿಗಳು ಬಹುದ್ದೇಶದ ಕುರ್ಚಿಯ ಮಾದರಿಗೆ ಪ್ರಥಮ ಬಹುಮಾನವಾಗಿ 20 ಸಾವಿರ ನಗದು ಹಾಗೂ ಪ್ರಶಸ್ತಿ ಫ‌ಲಕ, ಸಿಲ್ಲವಾಸ್‌ ಹವೇಲಿ ಜಿಲ್ಲೆಯ ಸರಕಾರಿ ಉನ್ನತ ಮಾಧ್ಯಮಿಕ ಶಾಲೆ ಮರಾಠಿ ಮಾಧ್ಯಮದ ವಿದ್ಯಾರ್ಥಿಗಳು ನಿರ್ಮಿಸಿದ ನಿರ್ಮಲೀಕಾರಕ ಪದಾರ್ಥಗಳನ್ನು ಜೈವಿಕ ಪರಿವರ್ತನೆಗೊಳಿಸುವ ಮಾದರಿಗೆ ದ್ವಿತೀಯ ಬಹುಮಾನ 10 ಸಾವಿರ ನಗದು ಹಾಗೂ ಪ್ರಶಸ್ತಿ ನೀಡಲಾಗಿದೆ. 

ಉತ್ತಮ ವಿಜ್ಞಾನ ಮಾದರಿ ನಿರ್ಮಿಸಿದ್ದ ಜಿಂದಾಲ್‌ ವಿದ್ಯಾಮಂದಿರದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ 10 ಸಾವಿರ ನಗದು ಹಾಗೂ ಪ್ರಶಸ್ತಿ, ದ್ವಿತೀಯ ಬಹುಮಾನ ಗದಗ ಜಿಲ್ಲೆ ಆನಂದೇಶ್ವರ ಪ್ರೌಢಶಾಲೆ ಅಬ್ಬಿಗೇರಿ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ 5 ಸಾವಿರ ನಗದು ಹಾಗೂ ಪ್ರಶಸ್ತಿ ವಿತರಿಸಲಾಯಿತು. ತೃತೀಯ, ನಾಲ್ಕನೇ ಹಾಗೂ ಐದನೇ ಸ್ಥಾನದಲ್ಲಿ ಬಂದ ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನ ವಿತರಿಸಲಾಯಿತು. 

ಬಹುಮಾನ ವಿತರಣೆ: ಸಂಜೆ  ನಡೆದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಪ್ರೊ| ಎನ್‌.ಎಚ್‌. ಅಯಾಚಿತ್‌, ಶಿಕ್ಷಣ ಎಂಬುದು ಸದಾ ಕಲಿಯುತ್ತಿರುವ ದಾರಿ. ಈ ದಾರಿಯಲ್ಲಿ ನಡೆಯುತ್ತಿರುವಾಗ ಸದಾ ಕಲಿಕೆಯೇ ನಮ್ಮ ಗುರಿಯಾಗಿರಬೇಕು ಎಂದರು.

ಯುವ ವಿಜ್ಞಾನಿ ಡಾ| ಹರೀಶ ಭಟ್‌ ಮಾತನಾಡಿ, ಜಗತ್ತಿನಲ್ಲಿರುವ ಸಮಸ್ಯೆಗಳ ಕುರಿತು ಎಲ್ಲ ಯುವ ವಿಜ್ಞಾನಿಗಳು ತಮ್ಮ ಮನದಲ್ಲಿರುವ ಮಾದರಿಗಳನ್ನು ಸಿದ್ಧಪಡಿಸಿ ನಾವುಗಳು ವಿಜ್ಞಾನಿಯಾಗುವ ಅರ್ಹತೆ ಹೊಂದಿದ್ದೇವೆ ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದರು.

 ಶಹರ ಕ್ಷೇತ್ರಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಮಾತನಾಡಿ, ಮಕ್ಕಳಲ್ಲಿ ಪ್ರಶ್ನೆಗಳ ಮೇಲೆ ಪ್ರಶ್ನೆಗಳು ಹುಟ್ಟಿದಾಗಲೇ ಅವರ ಏನನ್ನಾದರು ಸಾಧಿಸಲು ಸಾಧ್ಯ ಎಂದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ತಮ್ಮ ಅನಿಸಿಕೆ ಹಂಚಿಕೊಂಡರು. ಸೋನಂ ಮೆಹತಾ, ಠಕ್ಕರ, ಅಜಿತ ಬಾಸೂರ, ಡಾ| ನೀಲಂ  ಮಹೇಶ್ವರಿ, ಎಸ್‌. ಎಸ್‌. ಕಳ್ಳಿಮನಿ ಇನ್ನಿತರರು ಇದ್ದರು.  

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.