ಧಾರವಾಡ ಗ್ರಾಮಾಂತರ ಸಾರಿಗೆಗೆ ಪ್ರತ್ಯೇಕ ಡಿಪೋ


Team Udayavani, May 30, 2017, 1:20 PM IST

hub2.jpg

ಹುಬ್ಬಳ್ಳಿ: ಧಾರವಾಡದಲ್ಲಿ ಗ್ರಾಮಾಂತರ ಸಾರಿಗೆಗಾಗಿ ಪ್ರತ್ಯೇಕ ಡಿಪೋ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಗರದ ಹೊಸ ಬಸ್‌ ನಿಲ್ದಾಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗದ ಹುಬ್ಬಳ್ಳಿ ಗ್ರಾಮಾಂತರ-3ನೇ ಘಟಕದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಗ್ರಾಮಾಂತರ ಸಾರಿಗೆಗೆ ಅನುಕೂಲ ಕಲ್ಪಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿ ನೂತನ ಬಸ್‌ ನಿಲ್ದಾಣಗಳ ನಿರ್ಮಾಣ ಹಾಗೂ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ. 2017-18ನೇ ಸಾಲಿನಲ್ಲಿ 14 ಹೊಸ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ.

ಅಲ್ಲದೇ ಗೋಕಾಕ, ಶಿರಸಿ ಹಾಗೂ ಕಲಘಟಗಿಯಲ್ಲಿ ಡೀಪೋ ನಿರ್ಮಿಸಲಾಗುವುದು. ಕಳೆದ ವರ್ಷ 6 ಡಿಪೋ ಆರಂಭಿಸಲಾಗಿದ್ದು, 25 ಬಸ್‌ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ  ಎಂದು ಅಭಿಪ್ರಾಯಪಟ್ಟರು. ಹೊಸ ಆರ್‌ಟಿಒ ಕಚೇರಿಗೆ ಜಾಗ ಲಭಿಸಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು.

ಕಟ್ಟಡ ನಿರ್ಮಾಣಗೊಳ್ಳುವವರೆಗೆ ಕಚೇರಿಯನ್ನು ಬಾಡಿಗೆ ಜಾಗದಲ್ಲಿ ನಡೆಸಲಾಗುವುದು. ಸಾರಿಗೆ ನಿಗಮಗಳ ಮಧ್ಯ ಸಿಬ್ಬಂದಿ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಾರ್ಮಿಕರ ಭವಿಷ್ಯ ನಿಧಿ (ಪಿಎಫ್) ಸಮಸ್ಯೆ ಬಗೆಹರಿಸುವ ದಿಸೆಯಲ್ಲಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಸಂಸತ್‌ ಅಧಿವೇಶನದ ವೇಳೆ ದೆಹಲಿಗೆ ಹೋಗಿ ಪಿಎಫ್ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. 

ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಮಾತನಾಡಿ, 15000ಕ್ಕಿಂತ ಹೆಚ್ಚಿಗೆ ಜನಸಂಖ್ಯೆ ಇರುವ ಗ್ರಾಮಗಳಲ್ಲಿ ಇಲಾಖೆ ವತಿಯಿಂದ ಹೊಸ ಬಸ್‌ ನಿಲ್ದಾಣ ಮಾಡಿದರೆ ಅನುಕೂಲವಾಗುತ್ತದೆ. ಕೆಲವು ಬಸ್‌ ನಿಲ್ದಾಣಗಳು 30-40 ವರ್ಷ ಹಳೆಯದಾಗಿದ್ದು, ಅವುಗಳ ನವೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. 

ಪಿಎಫ್ ಸಮಸ್ಯೆ ಬಗೆಹರಿಸಿ: ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರ ಪಿಎಫ್ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಾಯು ಮಾಲಿನ್ಯ ತಡೆಯುವ ದಿಸೆಯಲ್ಲಿ ಅವಳಿ ನಗರದಲ್ಲಿ ಸಿಎನ್‌ಜಿ ಬಸ್‌ಗಳ ಸೇವೆ ಆರಂಭಿಸಬೇಕು. ಹುಬ್ಬಳ್ಳಿಯಲ್ಲಿ ನೂತನ ಗ್ರಾಮಾಂತರ-3ನೇ ಘಟಕಕ್ಕೆ ಆರಂಭಗೊಳ್ಳುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. 

ಸಾರಿಗೆ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ ಮಾತನಾಡಿದರು. ಶಾಸಕರಾದ ಎನ್‌.ಎಚ್‌. ಕೋನರಡ್ಡಿ, ಪ್ರಸಾದ ಅಬ್ಬಯ್ಯ, ಪ್ರದೀಪ ಶೆಟ್ಟರ, ಸಂಸ್ಥೆಯ ನಿರ್ದೇಶಕರಾದ ಆಸೀಫ್ ಬಳ್ಳಾರಿ, ಮನೋಜ ಕರ್ಜಗಿ, ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ, ಪಾಲಿಕೆ ಸದಸ್ಯರಾದ ಪ್ರಕಾಶ ಕ್ಯಾರಕಟ್ಟಿ, ಮೋಹನ ಹಿರೇಮನಿ ಮೊದಲಾದವರಿದ್ದರು.  

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.