ಪ್ರತ್ಯೇಕ ರಾಜ್ಯ: 23ರಂದು ಬಾಗಲಕೋಟೆಯಲ್ಲಿ ಸಭೆ
Team Udayavani, Sep 8, 2018, 6:15 AM IST
ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಸೆ.23ರಂದು ಬೆಳಗ್ಗೆ 11 ಗಂಟೆಗೆ ಬಾಗಲಕೋಟೆಯ ಚರಂತಿಮಠ ಸಭಾಭವನದಲ್ಲಿ ಸಭೆ ಕರೆಯಲಾಗಿದೆ ಎಂದು ಉಕ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತ್ಯೇಕ ರಾಜ್ಯದಲ್ಲಿ ಬರುವ ಜಿಲ್ಲೆಗಳೆಷ್ಟು ಮತ್ತು ಯಾವುವು? ರಾಜಧಾನಿ ಯಾವುದಾಗಬೇಕು? ಧ್ವಜದ ವಿನ್ಯಾಸ ಹೇಗಿರಬೇಕು, ಧ್ವಜಾರೋಹಣ ಮಾಡುವ ದಿನಾಂಕ ನಿಗದಿ ಹಾಗೂ ಯಾವ ಹೆಸರನ್ನು ನಾಮಕರಣ ಮಾಡಬೇಕೆಂಬುದರ ಕುರಿತು ಐದು ನಿರ್ಣಯಗಳನ್ನು ಸಭೆಯಲ್ಲಿ ಕೈಗೊಳ್ಳಲಾಗುವುದು. ನಿಡಸೋಸಿಯ ಪಂಚಮ ಶಿವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಭೀಮಪ್ಪ ಗಡಾದ ಅಧ್ಯಕ್ಷತೆ ವಹಿಸುವರು.
ಮಠಾಧೀಶರು, ಸಮಾನ ಮನಸ್ಕ 25-30 ಸಂಘಟನೆಗಳ ಪ್ರಮುಖರು, ಸಾಮಾಜಿಕ ಚಿಂತಕರು, ಸಾಹಿತಿಗಳು, ಬುದ್ಧಿಜೀವಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಪ್ರತ್ಯೇಕ ರಾಜ್ಯಕ್ಕೆ ಆದ್ಯತೆ ನೀಡುವವರಿಗೆ ಮಾತ್ರ ಸಭೆಯಲ್ಲಿ ಅವಕಾಶ ನೀಡಲಾಗುವುದು. ತೋಂಟದಾರ್ಯ ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ 150 ಸ್ವಾಮಿಗಳು, ನಾಡೋಜ ಡಾ| ಪಾಟೀಲ ಪುಟ್ಟಪ್ಪ, ಡಾ| ಶಿವಾನಂದ ಜಾಮದಾರ ಒಳಗೊಂಡಂತೆ ಇನ್ನಿತರ ಪ್ರಮುಖರಿಗೆ ಹಾಗೂ ಉ.ಕ. ಭಾಗದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರಿಗೆ ಪ್ರತ್ಯೇಕ ರಾಜ್ಯ ಕುರಿತು ಮಾತ್ರ ತಮ್ಮ ಅಭಿಪ್ರಾಯ ಮಂಡಿಸಬೇಕೆಂದು ಸೂಚಿಸಿ ಪತ್ರ ಬರೆಯಲಾಗುವುದು. ಸಭೆಯಲ್ಲಿನ ಎಲ್ಲರ ಅಭಿಪ್ರಾಯಗಳೊಂದಿಗೆ ಪ್ರಧಾನಿ, ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.