ಶರೀಫ‌ರ 198ನೇ ಜಯಂತಿ-128ನೇ ಪುಣ್ಯಸ್ಮರಣೆ ಆಚರಣೆ


Team Udayavani, Jul 4, 2017, 1:03 PM IST

hub3.jpg

ಹುಬ್ಬಳ್ಳಿ: ಸಂತ ಶಿಶುನಾಳ ಶ್ರೀ ಶರೀಫ‌ ಶಿವಯೋಗೀಶ್ವರ ಸದ್ಭಕ್ತ ಮಂಡಳಿಯಿಂದ ಇಲ್ಲಿನ ಘಂಟಿಕೇರಿ ಬಸವಣ್ಣ ದೇವರ ಕಲ್ಯಾಣ ಮಂಟಪದಲ್ಲಿ ಸೋಮವಾರ ಶಿಶುನಾಳ ಶರೀಫ‌ರ 198ನೇ ಜಯಂತ್ಯುತ್ಸವ ಹಾಗೂ 128ನೇ ಸ್ಮರಣಾ ದಿನ ಆಚರಿಸಲಾಯಿತು. 

ಶರಣ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಪ್ರೊ| ಕೆ.ಎಸ್‌.ಕೌಜಲಗಿ ಮಾತನಾಡಿ, ಸಂತ ಶಿಶುನಾಳ ಶರೀಫ‌ರನ್ನು ಇಡೀ ಜಗತ್ತಿಗೆ ಪರಿಚಯಿಸಿದ ಕೀರ್ತಿ ಹುಬ್ಬಳ್ಳಿಗೆ ಸಲ್ಲುತ್ತದೆ. ಶರೀಫ‌ರನ್ನು ಕೇವಲ ಅವರ ಲೀಲೆ ಹಾಗೂ ಹಾಡುಗಳ ಮೂಲಕ ಮಾತ್ರ ಗುರುತಿಸುತ್ತಾರೆ. ಹಲವು ಚಿತ್ರಗಳು, ಪದಗಳ ಮೂಲಕ ಅವರನ್ನು ಕಾಣಲು ಸಾಧ್ಯ ಎಂದರು.

ಅಜ್ಞಾನ ನಮ್ಮ ಜೀವನ ಹಾಳು ಮಾಡುತ್ತಿದ್ದು, ಪ್ರತಿಯೊಬ್ಬರು ಉತ್ತಮ ಜ್ಞಾನ ಬೆಳೆಸಿಕೊಳ್ಳುವ ಮೂಲಕ ಉತ್ತಮ ಜೀವನ ನಮ್ಮದಾಗಿಸಿಕೊಳ್ಳಬೇಕು ಎಂದರು. ಇಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದ ಅದೆಷ್ಟೋ ಮಕ್ಕಳು ಪಾಲಕರನ್ನು ವೃದ್ಧಾಶ್ರಮದಲ್ಲಿ ಬಿಡುತ್ತಿರುವುದು ಖೇದಕರ ಸಂಗತಿ.

ಪಾಲಕರು ಮಕ್ಕಳಿಗೆ ಆರಂಭದಿಂದಲೇ ಉತ್ತಮ ಸಂಸ್ಕಾರ, ಸಂಪ್ರದಾಯ ಹೇಳಿ ಕೊಡಬೇಕು ಎಂದರು. ವೀರಣ್ಣ ಶೆಟ್ಟರ ಮಾತನಾಡಿ, ಸಂತರು, ಮಹಾತ್ಮರು ಬೆಳೆದ ನಾಡಿನಲ್ಲಿ ಜನ್ಮತಾಳಿದ ನಾವೆಲ್ಲರೂ ಪುಣ್ಯವಂತರು. ಸಂತ ಶಿಶುನಾಳ ಶರೀಫ‌ರು, ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿ ಅಂತಹವರ ಸೇವೆ ಮಾಡುವುದು ನಮ್ಮೆಲ್ಲರ ಪುಣ್ಯ ಎಂದರು. ಶೇಖಣ್ಣ ಬೆಂಡಿಗೇರಿ ಸೇರಿದಂತೆ ಇನ್ನಿತರರು ಮಾತನಾಡಿದರು. 

ಮಜೇಥಿಯಾ ಫೌಂಡೇಶನ್‌ನ ಚೇರನ್‌ ಜಿತೇಂದ್ರ ಮಜೇಥಿಯಾ ಕಾರ್ಯಕ್ರಮ ಉದ್ಘಾಟಿಸಿದರು. ವಕೀಲ ಸಿ.ಎನ್‌.ಹರ್ಲಾಪುರ ಅಧ್ಯಕ್ಷತೆ ವಹಿಸಿದ್ದರು. ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಪ್ರಕಾಶ ಕಂಬಳಿ ಹಾಗೂ ಸಂಗಡಿಗರು ಶರೀಫ‌ರ ತತ್ವಪದಗಳನ್ನು ಪ್ರಸ್ತುತ ಪಡಿಸಿದರು. ಚನ್ನಬಸಪ್ಪ ಕೊಣ್ಣೂರ, ಮಲ್ಲಿಕಾರ್ಜುನ ನರೇಂದ್ರಮಠ, ಮಲ್ಲೇಶ ಶ್ಯಾವಿ, ಕಾಶಿ ಖೋಡೆ ಮೊದಲಾದವರು ಇದ್ದರು. 

ಟಾಪ್ ನ್ಯೂಸ್

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.