ಬರಗಾಲ ವೀಕ್ಷಿಸಿದ ಶೆಟ್ಟರ
Team Udayavani, Aug 3, 2017, 12:56 PM IST
ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿನ ಬರಗಾಲವನ್ನು ಮನಮುಟ್ಟುವಂತೆ ಮನವರಿಕೆ ಮಾಡಿಕೊಡುವಲ್ಲಿ “ಬರಗಾಲ’ ಚಿತ್ರ ಯಶಸ್ವಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು. ನಗರದ ಶೃಂಗಾರ ಚಿತ್ರಮಂದಿರದಲ್ಲಿ ಆರ್.ಮಹಾಂತೇಶ ನಿರ್ದೇಶನದ, ಉತ್ತರ ಕರ್ನಾಟಕದ ಕಲಾವಿದರು ಅಭಿನಯಿಸಿದ ಚಲನಚಿತ್ರ ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ತಾಂತ್ರಿಕವಾಗಿ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಕಳೆದ 3-4 ವರ್ಷಗಳಿಂದ ನಿರೀಕ್ಷಿತ ಪ್ರಮಾಣದ ಮಳೆ ಬೀಳದೆ ಗ್ರಾಮೀಣ ಭಾಗದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬೆಳೆ ಇಲ್ಲದ ಹೊಲಗಳು, ಬತ್ತಿದ ಕೆರೆಗಳು, ನೀರಿಗಾಗಿ ಜನರು ಹಾಗೂ ಜಾನುವಾರುಗಳ ಅಲೆದಾಟ ಮನಸಿಗೆ ಮುಟ್ಟುವಂತೆ ಚಿತ್ರೀಕರಿಸಲಾಗಿದೆ ಎಂದರು.
ಚಿತ್ರದಲ್ಲಿ ಕೃತ್ರಿಮತೆ ಎಂಬುದಿಲ್ಲ. ಸಹಜವಾಗಿಯೇ ಸ್ಥಿತಿ-ಗತಿಯನ್ನು ತೋರಿಸಲಾಗಿದೆ. ಬರದ ಸ್ಥಿತಿ ಕುರಿತು ಪತ್ರಿಕೆಗಳಲ್ಲಿ ಹಾಗೂ ಟಿವಿಗಳಲ್ಲಿ ನೋಡುತ್ತಿದ್ದೆವು. ಆದರೆ ಚಲನಚಿತ್ರದ ಮೂಲಕ ಬರದ ನೈಜ ಸ್ಥಿತಿಯನ್ನು ತೋರಿಸಲಾಗಿದೆ. ಈ ಭಾಗದ ಕಲಾವಿದರಿಗೆ ಹೆಚ್ಚು ಅವಕಾಶಗಳು ಲಭ್ಯವಾಗಬೇಕು.
ಸಮಾಜದ ಅಂಕು-ಡೊಂಕುಗಳನ್ನು ತೋರಿಸುವ ಇನ್ನಷ್ಟು ಚಲನಚಿತ್ರಗಳು ನಿರ್ಮಾಣಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಚಿತ್ರ ನಿರ್ದೇಶಕ ಆರ್.ಮಹಾಂತೇಶ, ನಟರಾದ ಸಾಧು ಕಠಾರೆ, ಹೊರಕೇರಿ, ರಾಮಕೃಷ್ಣ, ಮಹಾಪೌರ ಡಿ.ಕೆ.ಚವ್ಹಾಣ, ಬಿಜೆಪಿ ಮುಖಂಡರಾದ ನಾಗೇಶ ಕಲುರ್ಗಿ, ರಾಘವೇಂದ್ರ ರಾಮದುರ್ಗ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Pro Kabaddi: ಯೋಧಾಸ್‌ಗೆ ತಲೈವಾಸ್ ಆಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.