ಹೂಗಾರ ಪ್ಲಾಟ್ ನಿವಾಸಿಗಳಿಂದ ಶೆಟ್ಟರ ಭೇಟಿ
•ಆಘಾತ ತಂದ ತೆರವು ಕಾರ್ಯಾಚರಣೆ•ಅನ್ಯಾಯ ಸರಿಪಡಿಸಲು ಮನವಿ•ಆಶ್ರಯಕ್ಕೆ ಪರಿಗಣನೆ ಭರವಸೆ
Team Udayavani, Jun 16, 2019, 9:24 AM IST
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಬಳಿ ಹೂಗಾರ ಪ್ಲಾಟ್ ನಿವಾಸಿಗಳು ಅಳಲು ತೋಡಿಕೊಂಡರು.
ಹುಬ್ಬಳ್ಳಿ: ಮನೆಗಳನ್ನು ಕಳೆದುಕೊಂಡ ಇಲ್ಲಿನ ಬೆಂಗೇರಿಯ ಹೂಗಾರ ಪ್ಲಾಟ್ ನಿವಾಸಿಗಳು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ನಿವಾಸಕ್ಕೆ ಶನಿವಾರ ತೆರಳಿ ಸಂಕಷ್ಟ ತೋಡಿಕೊಂಡರು.
ಹಲವು ವರ್ಷಗಳಿಂದ ಹೂಗಾರ ಪ್ಲಾಟ್‌ನಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ಜೀವನ ಮಾಡುತ್ತಿದ್ದೆವು. ಹಿಂದೆ ಹಣ ನೀಡಿ ನಿವೇಶನಗಳನ್ನು ಖರೀದಿ ಮಾಡಲಾಗಿದೆ. ಆದರೆ ಪೊಲೀಸರು ಏಕಾಏಕಿ ಆಗಮಿಸಿ ಮನೆ ತೆರವುಗೊಳಿಸುವಂತೆ ಸೂಚನೆ ನೀಡಿದರು. ಎಷ್ಟೇ ಮನವಿ ಮಾಡಿದರೂ ಅಳಲು ಕೇಳಲಿಲ್ಲ. ಮೂರು ಗಂಟೆ ಸಮಯಾವಕಾಶ ನೀಡಿ ಜೆಸಿಬಿಗಳಿಂದ ಮನೆಗಳನ್ನು ನೆಲಸಮ ಮಾಡಿದ್ದಾರೆ. ಇದೀಗ ಮನೆಗಳಿಲ್ಲದೆ ಬೀದಿಗೆ ಬಿದ್ದಿದ್ದು, ಅವರಿವರ ಮನೆಯಲ್ಲಿ ತಾತ್ಕಾಲಿಕವಾಗಿ ನೆಲೆಸಿದ್ದೇವೆ. ನಮಗಾದ ಅನ್ಯಾಯ ಸರಿಪಡಿಸುವಂತೆ ಮನವಿ ಮಾಡಿದರು.
ಜಗದೀಶ ಶೆಟ್ಟರ ಮಾತನಾಡಿ, ಮನೆ ತೆರವುಗೊಳಿಸುವ ಮುಂಚೆ ಈ ಬಗ್ಗೆ ನನ್ನ ಬಳಿ ಚರ್ಚಿಸಿದ್ದರೆ ಏನಾದರೂ ಯೋಚನೆ ಮಾಡಬಹುದಿತ್ತು. ನ್ಯಾಯಾಲಯದ ಮೊರೆ ಹೋಗಿ ಮನೆ ತೆರವುಗೊಳಿಸದಂತೆ ತಡೆಯಾಜ್ಞೆ ತರಬಹುದಿತ್ತು. ಜನಸಾಮಾನ್ಯರಿಗೆ ಈ ಬಗ್ಗೆ ಅರಿವು ಇರುವುದಿಲ್ಲ. ಕನಿಷ್ಠ ಅಲ್ಲಿನ ಮುಖಂಡರಾದರೂ ನನ್ನ ಗಮನಕ್ಕೆ ಯಾಕೆ ತರಲಿಲ್ಲ. ಮನೆ ತೆರವುಗೊಳಿಸಲು ನ್ಯಾಯಾಲಯದ ಆದೇಶ ಸೇರಿದಂತೆ ಏನಾದರೂ ದಾಖಲೆಗಳಿದ್ದರೆ ನೀಡುವಂತೆ ಸೂಚಿಸಿದರು.
ಸುಳ್ಳ ರಸ್ತೆಯಲ್ಲಿ ಆಶ್ರಯ ಮನೆ ನಿರ್ಮಿಸುವ ಕುರಿತು ಭೂಮಿ ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇದೀಗ ಮನೆ ಕಳೆದುಕೊಂಡ ಹೂಗಾರ ಪ್ಲಾಟ್ ನಿವಾಸಿಗಳಿಗೆ ಈ ಯೋಜನೆಯಲ್ಲಿ ಪರಿಗಣಿಸುವುದಾಗಿ ಭರವಸೆ ನೀಡಿದರು.
ಹಿಂದೆ ನಿಮ್ಮಂತೆಯೇ ಶಬರಿ ಹಾಗೂ ಚಂದನ ಕಾಲೋನಿಯ ಜನರು ಸಮಸ್ಯೆಯಲ್ಲಿದ್ದರು. ಅಕ್ರಮ ಮನೆಗಳು ಎಂದು ತೆರವುಗೊಳಿಸುವ ಸಿದ್ಧತೆ ನಡೆದಿತ್ತು. ಆ ಸಂದರ್ಭದಲ್ಲಿ ನ್ಯಾಯಾಲಯ ಮೊರೆ ಹೋಗಿ ತಡೆಯಾಜ್ಞೆ ತರಲಾಯಿತು. ಇದರಿಂದ ಅಲ್ಲಿನ ಜನರು ನೆಮ್ಮದಿಯಿಂದ ಜೀವನ ಮಾಡುತ್ತಿದ್ದಾರೆ. ಆಗಿರುವ ಅನ್ಯಾಯಕ್ಕೆ ನ್ಯಾಯ ಪಡೆದುಕೊಳ್ಳುವ ಪ್ರಯತ್ನ ಮಾಡೋಣ. ನಿಮ್ಮ ಪರವಾಗಿ ವಾದ ಮಾಡಿದ ನ್ಯಾಯವಾದಿಯೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳೋಣ ಎಂದರು.
ಮಾಜಿ ಮಹಾಪೌರ ವೀರಣ್ಣ ಸವಡಿ, ಕೊಳಚೆ ನಿರ್ಮೂಲನಾ ಮಂಡಳಿ ಎಇಇ ಕೃಷ್ಣಮೂರ್ತಿ, ಎಇ ಸುರೇಶ ಹಿರೇಮಠ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.