ಶೃತಿ ತಪ್ಪಿಸಿದ್ದು ಆರೆಸ್ಸೆಸ್-ಜೋಶಿ: ಹುಣಸಿಮರದ
•ಅರವಿಂದ ಬೆಲ್ಲದಗೆ ಬಹಿಷ್ಕಾರವೋ, ಹೋರಾಟವೋ ಸಮಾಜ ನಿರ್ಧಾರ •ಬಿಜೆಪಿಯಿಂದ ಧರ್ಮ ಒಡೆಯುವ ಕಾರ್ಯ
Team Udayavani, Apr 29, 2019, 11:56 AM IST
ಧಾರವಾಡ: ಜಿಲ್ಲೆಯ ಕೆಲವು ರಾಜಕಾರಣಿಗಳಿಂದ ವೀರಶೈವ- ಲಿಂಗಾಯತ ಧರ್ಮದಲ್ಲಿ ಒಡಕು ಮೂಡಿಸುವ ಕೆಲಸ ಆಗುತ್ತಿದ್ದು, ಒಡೆದಾಳುವ ಕೆಲಸ ನಿಲ್ಲಿಸದೇ ಹೋದರೆ ಲಿಂಗಾಯತ ಸಮಾಜವೇ ಅವರಿಗೆ ತಕ್ಕ ಪಾಠ ಕಲಿಸಲಿದೆ ಎಂದು ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೃತಿ ಬೆಳ್ಳಕ್ಕಿ ಲಿಂಗಾಯತ ಸಮಾಜದವಳಾಗಿದ್ದು, ಅವಳ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ಅವಳ ದಿಕ್ಕು ತಪ್ಪಿಸಿರುವ ಬಿಜೆಪಿ ಹಾಗೂ ಆರೆಸ್ಸೆಸ್ ಅವಳ ಮೂಲಕ ವೀರಶೈವ-ಲಿಂಗಾಯತ ಧರ್ಮ ಒಡೆದಾಳುವ ಕಾರ್ಯಕ್ಕೆ ಮುಂದಾಗಿದೆ. ಈ ಕಾರ್ಯಕ್ಕೆ ಶಾಸಕ ಅರವಿಂದ ಬೆಲ್ಲದ ಸಹ ಕೈ ಜೋಡಿಸಿದ್ದು ಸರಿಯಲ್ಲ. ಲಿಂಗಾಯತ ಸಮಾಜದಿಂದಲೇ ಬಂದಿರುವ ಬೆಲ್ಲದ ಈ ಬಗ್ಗೆ ಅರಿತು ನಡೆಯಬೇಕು ಎಂದರು.
ಲಿಂಗಾಯತ ಸಮಾಜದಿಂದಲೇ ಶಾಸಕರಾಗಿರುವ ಅರವಿಂದ ಬೆಲ್ಲದ ಪಕ್ಷಗಿಂತಲೂ ಮೊದಲು ಸಮಾಜ ನೋಡಬೇಕು. ಆದರೆ ಸಮಾಜದಲ್ಲಿ ಒಡಕು ಮೂಡಿಸುತ್ತಿರುವವರ ಕೈಗೊಂಬೆಯಾಗಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಮುಂದಾದರೆ ಅದಕ್ಕೆ ತಕ್ಕ ಪಾಠ ಕಲಿಯಬೇಕಾಗುತ್ತದೆ. ಈ ಬಗ್ಗೆ ಅವರನ್ನು ಸಮಾಜದಿಂದ ಬಹಿಷ್ಕಾರ ಮಾಡಬೇಕೊ? ಅಥವಾ ಅವರ ವಿರುದ್ದ ಹೋರಾಟ ಮಾಡಬೇಕೆಂಬ ಬಗ್ಗೆ ಸಮಾಜವೇ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಾಗರಾಜ ಪಟ್ಟಣಶೆಟ್ಟಿ, ಮಲ್ಲನಗೌಡ ಪಾಟೀಲ, ಎಂ.ಎಫ್. ಹಿರೇಮಠ, ಎಸ್.ಜಿ. ಪೂಜಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.