ಶೈಕ್ಷಣಿಕ ಏಳ್ಗೆಗೆ ಶ್ರಮಿಸಿದ ಮಹಾನ್‌ ವ್ಯಕ್ತಿ ಸಿದ್ದಪ್ಪ ಕಂಬಳಿ

Team Udayavani, Sep 12, 2017, 12:36 PM IST

hub3.jpg

ಧಾರವಾಡ: ಕಷ್ಟದ ಜೀವನದಲ್ಲಿ ಶಿಕ್ಷಣ ಪಡೆದು, ತಾವು ಪಟ್ಟ ಕಷ್ಟಗಳು ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಬರಬಾರದೆಂದು ಈ ಭಾಗದ ಶೈಕ್ಷಣಿಕ ಏಳ್ಗೆಗೆ ಶ್ರಮಿಸಿದವರು ಸರ್‌ ಸಿದ್ದಪ್ಪ ಕಂಬಳಿ ಅವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. 

ನಗರದ ಸೃಜನಾ ರಂಗಮಂದಿರದಲ್ಲಿ ಸೋಮವಾರ ನಡೆದ ಸರ್‌ ಸಿದ್ದಪ್ಪ ಕಂಬಳಿಯವರ 136ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಅಂದು ಕಾರಣಾಂತರಗಳಿಂದ ಬ್ರಿಟಿಷರು ಪುಣೆಯ ಡೆಕ್ಕನ್‌ ಕಾಲೇಜನ್ನು ಬಂದ್‌ ಮಾಡಿದರು. ಆಗ ಉನ್ನತ ಶಿಕ್ಷಣ ಕಾಲೇಜನ್ನು ಧಾರವಾಡದಲ್ಲಿ ಸ್ಥಾಪಿಸಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದ ಕಂಬಳಿಯವರು ಅದನ್ನು ಸಾಕಾರಗೊಳಿಸುವಲ್ಲಿ ಯಶಸ್ವಿಯಾದರು.

ಉನ್ನತ ಶಿಕ್ಷಣಕ್ಕೆ ಪುಣೆ ಮತ್ತು ಮುಂಬೈಗೆ ಹೋಗಬೇಕಿದ್ದ ಅಂದಿನ ಅನಿವಾರ್ಯತೆಯನ್ನು ಮನಗಂಡು ಧಾರವಾಡದಲ್ಲಿ ಕರ್ನಾಟಕ ಮಹಾವಿದ್ಯಾಲಯ ಸ್ಥಾಪನೆಗೆ ಶ್ರಮಿಸಿದವರಲ್ಲಿ ಸರ್‌ ಸಿದ್ದಪ್ಪ ಕಂಬಳಿ ಪ್ರಮುಖರು ಎಂದರು. ಸರ್‌ ಕಂಬಳಿಯವರು ಧಾರವಾಡದ ಮುರುಘಾಮಠಕ್ಕೆ 74 ಎಕರೆ ಜಮೀನನ್ನು ದಾನವಾಗಿ ನೀಡಿ ಆ ಭೂಮಿಯಿಂದ ಬರುವ ಉತ್ಪನ್ನವನ್ನು ವಿದ್ಯಾರ್ಥಿಗಳಿಗೆ ಅನ್ನ ಸಂತರ್ಪಣೆ ಮಾಡುವಂತೆ ತಿಳಿಸಿದ್ದನ್ನು ನಾವು ಸ್ಮರಿಸಬಹುದು. 

ಬಸವಣ್ಣನವರು ಸುಮಾರು 900 ವರ್ಷಗಳ ಹಿಂದೆ ಸಮಾನತೆಯ ಸಂದೇಶವನ್ನು ಎಲ್ಲೆಡೆ ಸಾರಿದ ಮೊದಲ ಮಹಾನ್‌ ವ್ಯಕ್ತಿಯಾಗಿದ್ದಾರೆ. ಅವರ ಸಮಾನತೆಯ ಅಂಶವನ್ನು ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಅಳವಡಿಸುವ ಮೂಲಕ ಅದನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂದರು. 

ಅಧ್ಯಯನ ಪೀಠವಾಗಲಿ: ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಡಾ| ಮಲ್ಲಿಕಾರ್ಜುನ ಪಾಟೀಲ ಮಾತನಾಡಿ, ಸರ್‌ ಸಿದ್ಧಪ್ಪ ಕಂಬಳಿ ಹಾಗೂ ರೂದ್ದ ಶ್ರೀನಿವಾಸ ರಾಯರು ಹಾಗೂ ಕೆಸಿಡಿ ಕಾಲೇಜಿನ ಸಂಸ್ಥಾಪಕರಾದ ಅರಟಾಳ ರುದ್ರಗೌಡರು ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟು ಹೋರಾಟ ಮಾಡಿದ್ದಾರೆ. 

ಈ ಮೂವರು ಮಹನೀಯರ ಹೆಸರಿನಲ್ಲಿ ಒಂದು ಪೀಠ ಸ್ಥಾಪನೆಯಾಗಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಶಾಸಕ ಅರವಿಂದ ಬೆಲ್ಲದ ಸರ್‌ ಸಿದ್ದಪ್ಪ ಕಂಬಳಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕರ್ನಾಟಕ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ರಾಜೇಶ್ವರಿ ಮಹೇಶ್ವರಯ್ಯ, ವಿಜ್ಞಾನ ವಿಭಾಗದ ಡಾ| ಮೂನಿಮನಿ, ಸಂಗೀತ ವಿಭಾಗದ ಪ್ರಾಚಾರ್ಯ ಡಾ| ಎಂ.ಎಸ್‌. ತರ್ಲಗಟ್ಟಿ ಸೇರಿದಂತೆ ಹಲವರು ಇದ್ದರು. ಖ್ಯಾತ ಸಂಗೀತ ಶಿಕ್ಷಕಿ ಡಾ| ಶಕ್ತಿ ಪಾಟೀಲ ಹಾಗೂ ತಂಡದವರಿಂದ ಗಾಯನ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.