ಉಪಸಮರ ವೇದಿಕೆಯಲ್ಲಿ ಸಿದ್ದ ರಾಮಾಯಣ
|ರಾಜ್ಯ ಲೂಟಿಗೆ ಮತ್ತೂಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕಾ? |ಅಭಿವೃದ್ಧಿ ಯೋಜನೆಗಳ ಬಹಿರಂಗ ಚರ್ಚೆಗೆ ಸವಾಲು
Team Udayavani, May 15, 2019, 9:45 AM IST
ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಅರಳಿಕಟ್ಟಿ ಗ್ರಾಮದಲ್ಲಿ ಮಂಗಳವಾರ ನಡೆದ ಕುಸುಮಾವತಿ ಶಿವಳ್ಳಿ ಪರ ಸಾರ್ವಜನಿಕ ಪ್ರಚಾರ ಸಭೆಗೆ ಚಾಲನೆ ನೀಡಲಾಯಿತು.
ಹುಬ್ಬಳ್ಳಿ: ಎರಡು ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಆ ಪಕ್ಷ ಅಧಿಕಾರಕ್ಕೆ ಬಂದು ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರಂತೆ. ಯಾಕೆ ಮತ್ತೂಮ್ಮೆ ರಾಜ್ಯವನ್ನು ಲೂಟಿ ಹೊಡೆದು ಜೈಲು ಸೇರಲು ಬಿಜೆಪಿ ಸರಕಾರ ಬರಬೇಕಾ, ಜನರು ಇದಕ್ಕಾಗಿ ಮತ ನೀಡಬೇಕಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಕುಂದಗೋಳ ಕ್ಷೇತ್ರದ ಅರಳಿಕಟ್ಟಿಯಲ್ಲಿ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರಕಾರ ಏನೆಲ್ಲ ಮಾಡಿತು. ಯಾರೆಲ್ಲ ಜೈಲು ಸೇರಿದರು ಎಂಬುದು ಜನರಿಗೆ ಗೊತ್ತಿದೆ. ಮತ್ತೂಮ್ಮೆ ಅಂತಹದ್ದೇ ಸ್ಥಿತಿಗಾಗಿ ಜನ ಇವರಿಗೆ ಮತ ನೀಡಬೇಕಾ. ನಮ್ಮ ಸರಕಾರದ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ಬಿಜೆಪಿಯವರು ವೇದಿಕೆ ಕಲ್ಪಿಸಲಿ ಎಂದು ಸವಾಲು ಹಾಕಿದರು.
ಕೇಂದ್ರದಿಂದ ರಾಜ್ಯಕ್ಕೆ ಅಭಿವೃದ್ಧಿ ಯೋಜನೆ ತಂದಿಲ್ಲ. ತಾವು ಅಧಿಕಾರದಲ್ಲಿದಾಗಲೂ ರಾಜ್ಯದಲ್ಲಿ ಅಭಿವೃದ್ಧಿ ಮಾಡಿಲ್ಲ. ಹೀಗಾಗಿ ಬಿಜೆಪಿಯವರ ಹೇಳಿಕೆ, ಪ್ರಚಾರ ವೈಷಮ್ಯ, ಧರ್ಮ-ಜಾತಿಗಳ ನಡುವೆ ವಿಷಬೀಜ ಬಿತ್ತುವುದಾಗಿದೆ. ನನ್ನ ಐದು ವರ್ಷಗಳ ಆಡಳಿತಾವಧಿಯ ಅಭಿವೃದ್ಧಿ ಯೋಜನೆಗಳ ಪಟ್ಟಿಯನ್ನು ಬೇಕಾದರೆ ಕೊಡುತ್ತೇನೆ. ಬಿಜೆಪಿಯವರು ಧಮ್ ಇದ್ದರೆ ಪಟ್ಟಿ ನೀಡಲಿ ಎಂದರು.
ಬಿಎಸ್‌ವೈಗೆ ಸಿಎಂ ಖುರ್ಚಿ ಕನಸು: ರಾತ್ರಿಯಾದರೆ ಸಾಕು ಯಡಿಯೂರಪ್ಪ ಅವರಿಗೆ ವಿಧಾನಸೌಧ, ಮೂರನೇ ಮಹಡಿ, ಮುಖ್ಯಮಂತ್ರಿ ಕಚೇರಿ, ಅಲ್ಲಿನ ಖುರ್ಚಿಯ ಕನಸು ಬೀಳುತ್ತಿದೆ. ಹಿಂದೆ ಸಿಎಂ ಆಗಿದ್ದಾಗ ಏನು ಮಾಡಿದರು. ಅವರು ಸೇರಿದಂತೆ ಐದಾರು ಸಚಿವರು ಎಲ್ಲಿಗೆ ಹೋಗಿ ಬಂದರು ಎಂಬುದನ್ನು ಜನ ಮರೆತಿಲ್ಲ. ಇದೀಗ ಎರಡು ಕ್ಷೇತ್ರಗಳನ್ನು ಗೆಲ್ಲಿಸಿಕೊಟ್ಟರೆ ಮೈತ್ರಿ ಸರಕಾರ ಬೀಳಿಸಿ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುತ್ತಿದ್ದಾರೆ. ಇದು ಯಾವ ಕಾರಣಕ್ಕೂ ಸಾಧ್ಯವಿಲ್ಲ. ಯಡಿಯೂರಪ್ಪ ಸಿಎಂ ಕನಸು ಕಾಣುವ ಬದಲು ವಿಪಕ್ಷ ನಾಯಕರ ಕೆಲಸ ಮಾಡಲಿ ಎಂದು ಹೇಳಿದರು.
ಶಾಸಕರಿಗೆ ಕೋಟಿ ಹಣ: ನರೇಂದ್ರ ಮೋದಿ ಆದಿಯಾಗಿ ಬಿಜೆಪಿ ನಾಯಕರು ನಾವು ಸಾಚಾ, ಪ್ರಾಮಾಣಿಕರು ಎಂದು ಬೆನ್ನು ತಟ್ಟಿಕೊಳ್ಳುತ್ತಾರೆ. ಆದರೆ ರಾಜ್ಯದಲ್ಲಿ ಶಾಸಕರನ್ನು ಖರೀದಿ ಮಾಡಲು ಒಬ್ಬೊಬ್ಬರಿಗೆ 25-30 ಕೋಟಿ ರೂ. ಹಣ ಆಮಿಷವೊಡ್ಡುತ್ತಿದ್ದು, ಈ ಹಣ ಯಾರಪ್ಪನ ಮನೆಯಿಂದ ಬಂದಿದೆ ಎಂಬುವುದನ್ನು ಬಹಿರಂಗ ಪಡಿಸಬೇಕು. ಚೌಕಿದಾರ, ಸಾಚಾದಾರ ಎಂದು ಹೇಳಿಕೊಳ್ಳುವ ಪಕ್ಷದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ಕೆಲಸಗಳು ಆಗುತ್ತಿವೆ. ಯಾವುದೇ ಕಾರಣಕ್ಕೂ ನಮ್ಮ ಶಾಸಕರು ಖರೀದಿಯಾಗುವುದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದಿಲ್ಲ ಎಂದರು.
ಮುಖಂಡರಾದ ಸತೀಶ ಜಾರಕಿಹೊಳಿ, ಎಚ್.ಕೆ. ಪಾಟೀಲ, ಭೈರತಿ ಸುರೇಶ, ಮುನಿರತ್ನ, ಎಚ್.ಸಿ. ಮಹಾದೇವಪ್ಪ, ಬಸವರಾಜ ಹೊರಟ್ಟಿ, ವಿನಯ ಕುಲಕರ್ಣಿ, ಪಿ.ಸಿ. ಸಿದ್ದನಗೌಡ್ರ, ಎಂ.ಎಸ್. ಅಕ್ಕಿ, ಆಲ್ಕೋಡ ಹನುಮಂತಪ್ಪ, ಎ.ಎಂ. ಹಿಂಡಸಗೇರಿ ಇನ್ನಿತರರಿದ್ದರು.
ಹುಬ್ಬಳ್ಳಿ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯರ್ತರು ಮುಖಾಮುಖೀಯಾದ ವೇಳೆ ಘೋಷಣೆಗಳ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾದ ಘಟನೆ ಅದರಗುಂಚಿ ಗ್ರಾಮದಲ್ಲಿ ನಡೆಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರು ರೋಡ್ ಶೋ ನಡೆಯುತ್ತಿದ್ದ ವೇಳೆ ಎದುರಾದ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಲು ಆರಂಭಿಸಿದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ವಿಕೆ ಬಾಸ್ ವಿಕೆ ಬಾಸ್ ಎಂದು ಘೋಷಣೆ ಕೂಗಲು ಆರಂಭಿಸಿದರು. ಮಧ್ಯ ಪ್ರವೇಶಿಸಿದ ಸಚಿವ ಯು.ಟಿ. ಖಾದರ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಕಕ್ಕೆ ಸರಿಸಿ ಬಿಜೆಪಿ ಮೆರವಣಿಗೆಗೆ ಅವಕಾಶ ಮಾಡಿಕೊಟ್ಟರು.
‘ಜೋಶಿ ಎಲ್ಲಿದಿಯಪ್ಪಾ..’:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.