ಸಿಎಎ ಹೋರಾಟಕ್ಕೆ ಪಿಎಫ್ ಐ ನಿಂದ ಅಕ್ರಮ ಹಣ ಬಂದಿದ್ದಲ್ಲಿ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ
Team Udayavani, Jan 28, 2020, 1:05 PM IST
ಹುಬ್ಬಳ್ಳಿ: ಸಿಎಎ ಹೋರಾಟಕ್ಕೆ ಪಿಎಫ್ ಐ ಹಣ ಹರಿದು ಬಂದಿರುವ ಆರೋಪ ವಿಚಾರ ಬಗ್ಗೆ ಸಮಗ್ರ ತನಿಖೆ ಆಗಲಿ. ಯಾರದೇ ಅಕ್ರಮ ಹಣ ಬಂದಿದ್ದಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ನೀಡುತ್ತಿಲ್ಲ ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಎಂಬುದೇ ಇಲ್ಲ. ರಾಷ್ಟ್ರೀಯ ನಾಯಕರು ಸಿಎಂ ಗೆ ಸ್ವಾತಂತ್ರ್ಯ ಕೊಡುತ್ತಿಲ್ಲ. ಹೀಗಾಗಿ ಯಡಿಯೂರಪ್ಪ ಅವರು ಸಂಕಷ್ಟದಲ್ಲಿ ಸಿಲುಕಿ ಕೊಂಡಿದ್ದಾರೆ. ವಿಲವಿಲ ಒದ್ದಾಡುತ್ತಿದ್ದಾರೆ ಎಂದರು.
ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಹಣ ಬಿಡುಗಡೆ ಮಾಡುತ್ತಿಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಆಗುತ್ತಿಲ್ಲ. ಕೇಂದ್ರ ರಾಜ್ಯದ ಪಾಲಿನ ಹಣ ಬಿಡುಗಡೆ ಮಾಡುತ್ತಿಲ್ಲ ಎಂದ ಅವರು ಸಿಎಎ ಸಂವಿಧಾನಕ್ಕೆ ವಿರುದ್ಧವಾದ ಕಾಯ್ದೆ. ಜಾತಿ ಧರ್ಮದ ಆಧಾರದ ಮೇಲೆ ಈ ಕಾಯ್ದೆ ಜಾರಿ ಮಾಡಿದ್ದಾರೆ. ಈ ಕಾಯ್ದೆ ಬಗ್ಗೆ ಕಾಂಗ್ರೆಸ್ ಸಂಪೂರ್ಣ ವಿರೋಧಿಸುತ್ತದೆ ಎಂದರು.
ನನ್ನ ವಕೀಲ ವೃತ್ತಿ ಸನ್ನದ್ಧು ರದ್ದಾಗಿತ್ತು. ಅದನ್ನು ನವೀಕರಿಸಲು ಅರ್ಜಿ ಸಲ್ಲಿಸಿದ್ದೇನೆ. 40 ವರ್ಷಗಳ ನಂತರ ಆ ವೃತ್ತಿ ಮಾಡಲು ಸಾಧ್ಯವೇ ? ಎಂದು ಪ್ರಶ್ನಿಸಿದರಲ್ಲದೆ, ಕೆಪಿಸಿಸಿಗೆ ಶೀಘ್ರವೇ ಅಧ್ಯಕ್ಷರ ಆಯ್ಕೆ ಮಾಡಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.