Hubli; ಸಿದ್ದರಾಮಯ್ಯ ಚಾಣಾಕ್ಷ, ಡಿಕೆಶಿ ಗೆ ಸಿಎಂ ಸ್ಥಾನ ಬಿಟ್ಟುಕೊಡಲ್ಲ: ಶಾಸಕ ಬೆಲ್ಲದ್
Team Udayavani, Nov 2, 2023, 3:13 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಣಾಕ್ಷ ರಾಜಕಾರಣಿಯಾಗಿದ್ದು, ಯಾವುದೇ ಕಾರಣಕ್ಕೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡದ ರೀತಿಯಲ್ಲಿ ವ್ಯವಸ್ಥಿತ ವೇದಿಕೆ ಸಿದ್ಧಪಡಿಸಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ. ಶಿವಕುಮಾರ್ ಅವರಿಗೆ ಬಿಟ್ಟು ಕೊಡಬೇಕೆಂಬ ಮಾತುಕತೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಆಗಿದೆ ಎಂಬ ಮಾಹಿತಿಯಿದ್ದು ಅದು ಕಾಂಗ್ರೆಸ್ ನ ಆಂತರಿಕ ವಿಚಾರ. ಆದರೆ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟು ಕೊಡದ ರೀತಿಯಲ್ಲಿ ಸಿದ್ದರಾಮಯ್ಯ ಅವರು ಈಗಾಗಲೇ ನಾಲ್ವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧಪಡಿಸಿದ್ದು ಅವರವರ ನಡುವೆ ಜಗಳ ಹಚ್ಚುವ ಮೂಲಕ ಮುಂದೆ ತಾವೇ ಮುಖ್ಯಮಂತ್ರಿ ಆಗಿ ಮುಂದುವರೆಯುವ ಯೋಜನೆ ರೂಪಿಸಿದ್ದಾರೆ ಎಂದು ಬೆಲ್ಲದ ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳಷ್ಟೇ ಆಗಿದ್ದು ಹನಿಮೂನ್ ಮೂಡಿನಲ್ಲಿ ಇರಬೇಕಾಗಿದ್ದ ಸರ್ಕಾರದಲ್ಲಿ ಈಗಾಗಲೇ ಅಸಮಾಧಾನ ಭುಗಿಲೆದ್ದಿದೆ. ಹೇಳುತ್ತಿದ್ದು ಸರಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಕಾಂಗ್ರೆಸ್ ಭಿನ್ನಮತದ ಬೇಗುದಿ ನೋಡಿದರೆ ಸರಕಾರ ಬಹಳ ದಿನ ಉಳಿಯುತ್ತದೆ ಎಂಬುದು ಅನುಮಾನ ಎಂದರು.
ಕಾಂಗ್ರೆಸ್ ಸರ್ಕಾರದಲ್ಲಿನ ಭಿನ್ನಮತದ ಬೀಗುದಿ ವಿಚಾರವನ್ನು ಬೇರೆ ಕಡೆ ತಿರುಗಿಸಲು ಕಾಂಗ್ರೆಸ್ ಸರ್ಕಾರ ಹುಲಿ ಉಗುರಿನ ಪ್ರಕರಣವನ್ನು ಹೆಚ್ಚು ಹೆಚ್ಚು ಬಿಂಬಿಸುವ ಕಾರ್ಯಕ್ಕೆ ಮುಂದಾಗಿದೆ ಎಂದು ಟೀಕಿಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆಯನ್ನು ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಕೈಗೊಳ್ಳಲಿದೆ ಎಂದು ಬೆಲ್ಲದ ತಿಳಿಸಿದರು.
ವಿಧಾನ ಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷವಾಗಿ ನಾವು ಸರ್ಕಾರದ ವಿರುದ್ಧ ಟೀಕಾಸ್ತ್ರ ಹಾಗೂ ಸರ್ಕಾರವನ್ನು ಸಮರ್ಥವಾಗಿ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ಲೋಕಸಭೆ ಚುನಾವಣೆ ಒಳಗಾಗಿ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ ಪಕ್ಷದ ಹೈಕಮಾಂಡ್ ನಾಯಕರು ಈ ನಿಟ್ಟಿನಲ್ಲಿ ಸಮರ್ಪಕ ನಿರ್ಧಾರ ಕೈಗೊಳ್ಳಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಬೇರೆ ಪಕ್ಷದವರು ಜೆಡಿಎಸ್ ಬಿಜೆಪಿ ನಡುವಿನ ಮೈತ್ರಿ ವಿಚಾರ ಇನ್ನು ಚರ್ಚೆ ಹಂತದಲ್ಲಿದೆ ನಮ್ಮ ಪಕ್ಷದಿಂದ 66 ಜನ ಶಾಸಕರಿದ್ದು ನಮ್ಮ ಪಕ್ಷದವರೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡಲಾಗುತ್ತಿದೆ ಎಂಬ ಅನಿಸಿಕೆಯನ್ನು ಪರೋಕ್ಷವಾಗಿ ತಳ್ಳಿ ಹಾಕಿದರು.
ಪಕ್ಷದ ಹೈಕಮಾಂಡ್ ರಾಜ್ಯದ ಮೂವರು ನಾಯಕರನ್ನು ದೆಹಲಿಗೆ ಕರೆಸಿಕೊಂಡಿರುವ ವಿಷಯಕ್ಕೆ ಕುರಿತಂತೆ ಇದೊಂದು ಪಕ್ಷದೊಳಗಿನ ಸಹಜ ಪ್ರಕ್ರಿಯೆ ಪಕ್ಷದ ಸಂಘಟನೆ ಇತ್ಯಾದಿ ವಿಚಾರಗಳ ಕುರಿತಾಗಿ ಚರ್ಚೆಗೆ ಆಹ್ವಾನಿಸಿರಬಹುದು ಎಂದು ನುಡಿದರು.
ಎಫ್ ಡಿ ಸಿ ಪರೀಕ್ಷಾ ಅಕ್ರಮ ಕುರಿತಾಗಿ ಪ್ರತಿಕ್ರಿಯಿಸಿದ ಅವರು ಈ ಹಿಂದೆ ಪರೀಕ್ಷಾ ಅಕ್ರಮ ನಡೆದಾಗ ನಮ್ಮ ಸರ್ಕಾರ ತಪ್ಪಿತಸ್ಥರನ್ನು ಬಂಧಿಸಿ ಜೈಲಿಗೆ ಕಳುಹಿಸಿತು ಇದೀಗ ಅದೇ ಆರೋಪಿಗಳು ಮತ್ತೆ ಅದೇ ಪರೀಕ್ಷಾ ಅಕ್ರಮದಲ್ಲಿ ತೊಡಗಿಕೊಳ್ಳುತ್ತಾರೆಂದರೆ ಅವರಿಗೆಷ್ಟು ಧೈರ್ಯ ಇರಬಹುದು, ಬ್ಲೂಟೂತ್ ಅನ್ನು ಬಳಸಿ ಪರೀಕ್ಷಾ ಅಕ್ರಮ ನೋಡಿದರೆ ತಂತ್ರಜ್ಞಾನವನ್ನು ಹೀಗೂ ಬಳಸಬಹುದೇ ಎನ್ನುವಂತಾಗಿದೆ. ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೆ ಇಂತಹ ಪ್ರಕರಣಗಳು ಮರು ಕಳಿಸುತ್ತಿರಲಿಲ್ಲ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.