21ಕ್ಕೆ ರಾಜಭವನಕ್ಕೆ ಮುತ್ತಿಗೆ: ವಾಟಾಳ್
Team Udayavani, Oct 17, 2017, 12:55 PM IST
ಹುಬ್ಬಳ್ಳಿ: ಕಳೆದ ಎರಡು ವರ್ಷಗಳಿಂದ ಕಳಸಾ-ಬಂಡೂರಿ ಹೋರಾಟ ನಡೆಯುತ್ತಿದ್ದರೂ ಕೇಂದ್ರದಿಂದ ಯಾವುದೇ ಸ್ಪಂದನೆ ಇಲ್ಲ. ಈ ಕುರಿತು ಕೇಂದ್ರದ ಗಮನ ಸೆಳೆಯುವ ದೃಷ್ಟಿಯಿಂದ ಅ.21ರಂದು ರಾಜಭವನಕ್ಕೆ ಮುತ್ತಿಗೆ ಹಾಕುವ ಮೂಲಕ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ ತಿಳಿಸಿದರು.
ಸೋಮವಾರ ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಸನ್ಮಾನಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮಹದಾಯಿ, ಕಳಸಾ-ಬಂಡೂರಿ ಬಗ್ಗೆ ಎರಡು ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ರಾಜ್ಯದ ಸಂಸದರು ಇಷ್ಟಾದರೂ ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಡ ತರುವ ಪ್ರಾಮಾಣಿಕ ಕೆಲಸ ಮಾಡುತ್ತಿಲ್ಲ.
ಪ್ರಧಾನಿಯವರು ಸಹ ರಾಜ್ಯದ ಸಮಸ್ಯೆ ಕಡೆ ಗಮನ ನೀಡುತ್ತಿಲ್ಲ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಕನ್ನಡ ಒಕ್ಕೂಟ ಹಾಗೂ ಒಕ್ಕೂಟದ ಮುಖಂಡರ ನೇತೃತ್ವದಲ್ಲಿ ರಾಜ್ಯಾದ್ಯಂತ ಎಲ್ಲ ಕನ್ನಡ ಪರ ಸಂಘಟನೆಗಳೊಂದಿಗೆ ಸೇರಿಕೊಂಡು ತೀವ್ರತರ ಹೋರಾಟಕ್ಕೆ ಸಿದ್ಧರಾಗುತ್ತಿದ್ದೇವೆ ಎಂದರು. ಇನ್ನು ರಾಜ್ಯ ಸರಕಾರ ವಿಧಾನಸೌಧ ವಜ್ರ ಮಹೋತ್ಸವ ಮಾಡಲು ಮುಂದಾಗಿದೆ.
ಸದ್ಯಕ್ಕೆ ಅದರ ಅವಶ್ಯಕತೆ ಇಲ್ಲ. ಬರ-ಅತಿವೃಷ್ಟಿಯಿಂದ ರೈತರು ಕಂಗಾಲಾಗಿದ್ದು, ಇಂತಹ ಸಂದರ್ಭದಲ್ಲಿ ವಿಧಾನಸೌಧ ವಜ್ರಮಹೋತ್ಸವ ಹೆಸರಲ್ಲಿ ಶಾಸಕರಿಗೆ ಚಿನ್ನ, ಬೆಳ್ಳಿ ನಾಣ್ಯ ನೀಡುವ ವಿಚಾರ ಗೌರವ ತರುವಂತಹದ್ದಲ್ಲ. ಇದೊಂದು ನಾಚಿಕೆಗೇಡಿನ ಸಂಗತಿ. ತರಾತುರಿಯಲ್ಲಿ ಮಹೋತ್ಸವ ಕೈಗೊಳ್ಳುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.