ತಹಶೀಲ್ದಾರ್ ಕಚೇರಿಗೆ ಮುತ್ತಿಗೆ
Team Udayavani, Jan 13, 2018, 11:13 AM IST
ಅಫಜಲಪುರ: ತಾಲೂಕಿನ ಅನೇಕ ಕಡೆಗಳಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ಆದರೆ ಪಟ್ಟಣದಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಿಲ್ಲ. ಇದರಿಂದ ಪಟ್ಟಣದ ರೈತರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಹೀಗಾಗಿ ಪಟ್ಟಣದಲ್ಲೊಂದು ತೊಗರಿ ಖರೀದಿ ಕೇಂದ್ರ ಆರಂಭಿಸಬೇಕೆಂದು ಒತ್ತಾಯಿಸಿ ಪಟ್ಟಣದ ರೈತರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಮುಖಂಡರಾದ ಸೂರ್ಯಕಾಂತ ನಾಕೇದಾರ, ಸಿದ್ರಾಮಪ್ಪ ಮನಮಿ, ಚಂದ್ರಶೇಖರ ಕರ್ಜಗಿ,
ಜಿ.ಪಂ ಸದಸ್ಯ ಅರುಣಕುಮಾರ ಪಾಟೀಲ್, ಮಾಜಿ ಸದಸ್ಯರಾದ ಮತೀನ್ ಪಟೇಲ್, ಸಿದ್ದಾರ್ಥ ಬಸರಿಗಿಡ
ಮಾತನಾಡಿದರು.
ಪಟ್ಟಣದಲ್ಲಿ ತೊಗರಿ ಖರೀದಿ ಕೇಂದ್ರ ತೆರೆಯದೆ ಇರುವುದರಿಂದ ಇಲ್ಲಿನ ರೈತರಿಗೆ ಅನಾನೂಕೂಲ ಆಗುತ್ತಿದೆ.
ಖರೀದಿ ಕೇಂದ್ರ ತೆರೆಯುವಂತೆ ಸರ್ಕಾರಕ್ಕೆ ಎರಡೂಮೂರು ಬಾರಿ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಸರ್ಕಾರ ರೈತರೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಇನ್ನು ಮೂರು ದಿನಗಳ ಕಾಲ ಗಡುವು ನೀಡಲಾಗುವುದು. ಖರೀದಿ ಕೇಂದ್ರ ತೆರೆಯದಿದ್ದರೆ ರೈತರು ಬೆಳೆದ ತೊಗರಿಯನ್ನು ತಂದು ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿಟ್ಟು ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಸ್ಥಳಕ್ಕೆ ಆಗಮಿಸಿದ ಪ್ರೊಬೇಷನರಿ ಕೆಎಎಸ್ ಅಧಿಕಾರಿ ವರ್ಷಾ ಬೇಗಾರ್, ಕೃಷಿ ಅಧಿಕಾರಿ ಶರಣಗೌಡ ಪಾಟೀಲ,
ತೊಗರಿ ಖರೀದಿ ಕೇಂದ್ರದ ತಾಲೂಕು ನೋಡಲ್ ಅಧಿಕಾರಿ ಶರಣಗೌಡ ಬಿರಾದಾರ ಮಾತನಾಡಿ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮೂರುದಿನಗಳ ಒಳಗಾಗಿ ಪಟ್ಟಣದಲ್ಲಿ ಖರೀದಿ ಕೇಂದ್ರ ತೆರೆಯಲಾಗುವುದು ಎಂದು ಭರವಸೆ ನೀಡಿದರು. ನಂತರ ರೈತರು ಪ್ರತಿಭಟನೆ ಹಿಂದಕ್ಕೆ ಪಡೆದರು.
ಮುಖಂಡರಾದ ಶಿವಪುತ್ರಪ್ಪ ಸಂಗೋಳಗಿ, ಸದಾಶಿವ ಮೇತ್ರಿ, ಸಿದ್ರಾಮಪ್ಪ ಮನಮಿ, ಶಂಕರ ಸೋಬಾನಿ,
ಭೀಮಾಶಂಕರ ದಾನಮಗುಡಿ, ಮದಾದೇವಪ್ಪ ಕಲಕೇರಿ, ಚಂದ್ರಾಮಪ್ಪ ಬಳಗುಂಡಿ, ಶಿವಾನಂದ ಗಾಡಿಸಾಹುಕಾರ,
ಗಂಗಾಧರ ಶ್ರೀಗಿರಿ, ಚಿದಾನಂದ ಮಠ, ಸಂಜು ನಿಂಬಾಳ, ಸುಭಾಷ ರಾಠೊಡ, ಸತೀಶ ಮಾಳಗೆ, ಅಮರನಾಥ ಮೇತ್ರಿ, ಜಕ್ಕಪ್ಪ ಪೂಜಾರಿ, ಮಂಜುನಾಥ ಕಲಕೇರಿ, ನಾಗು ಮಾಡ್ಯಾಳ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.