ಕೌಶಲ್ಯ ತರಬೇತಿ ವೃತ್ತಿಜೀವನ ಪ್ರಗತಿಗೆ ರಹದಾರಿ

ವಿದ್ಯಾರ್ಥಿಗಳ ಕೌಶಲ್ಯ ತರಬೇತಿ ಕೇಂದ್ರ ಉದ್ಘಾಟನೆ; ಸ್ವ ಉದ್ಯೋಗ ಸೃಷ್ಟಿಸಿಕೊಳ್ಳಲು ಪೂರಕ

Team Udayavani, Jul 22, 2022, 2:36 PM IST

16

ಧಾರವಾಡ: ಕೌಶಲ್ಯ ಅಭಿವೃದ್ಧಿ ತರಬೇತಿಗಳು ವಿದ್ಯಾರ್ಥಿಯ ವೃತ್ತಿ ಜೀವನದ ಪ್ರಗತಿಗೆ ರಹದಾರಿಗಳಾಗುತ್ತವೆ ಎಂದು ಜೆಎಸ್‌ಎಸ್‌ ಸಂಸ್ಥೆಯ ವಿತ್ತಾಧಿಕಾರಿ ಡಾ| ಅಜಿತ ಪ್ರಸಾದ ಹೇಳಿದರು.

ನಗರದ ಶ್ರೀ ಮಂಜುನಾಥೇಶ್ವರ ಐಟಿಐನಲ್ಲಿ ಡಾಯ್‌ ಫೌಂಡೇಶನ್‌ನವರ ಸಿಎಸ್‌ಆರ್‌ ಯೋಜನೆಯಡಿ ಬೆಂಗಳೂರಿನ ಸ್ಕೈಡರ್‌ ಕಂಪನಿಯ ಪ್ರಾಯೋಜಕತ್ವದಲ್ಲಿ ಪ್ರಾರಂಭವಾಗುತ್ತಿರುವ ವಿದ್ಯಾರ್ಥಿಗಳ ಕೌಶಲ್ಯ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಲ್ಪಾವಧಿ ಮತ್ತು ದೀರ್ಘಾವಧಿ ಗುಣಮಟ್ಟದ ಕೌಶಲ್ಯ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿ ಬೇರೆ ಉದ್ಯೋಗಾವಕಾಶಕ್ಕಾಗಿ ಕಾಯದೇ ಸ್ವ-ಉದ್ಯೋಗ ತಾನೇ ಸೃಷ್ಟಿಸಿಕೊಳ್ಳುತ್ತಾನೆ ಎಂದರು.

ಧರ್ಮಸ್ಥಳದ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಜನರಿಗೆ ಸಾಮಾಜಿಕ-ಆರ್ಥಿಕ ಸಮಾನತೆ, ನ್ಯಾಯವನ್ನು ದೊರಕಿಸುವ ನಿಟ್ಟಿನಲ್ಲಿ ಶೈಕ್ಷಣಿಕ, ಧಾರ್ಮಿಕ, ಉದ್ಯೋಗ, ಆರೋಗ್ಯ, ಮಹಿಳಾ ಸಬಲೀಕರಣ ವಿಚಾರಗಳಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಇದರಲ್ಲಿ ತಾಂತ್ರಿಕ ಶಿಕ್ಷಣವು ಸಹ ಅವರ ಕನಸಿನ ಕೂಸು. ಹೀಗಾಗಿ ರುಡ್‌ಸೆಟ್‌, ಐಟಿಐಗಳನ್ನು, ತಾಂತ್ರಿಕ ಮಹಾವಿದ್ಯಾಲಯಗಳನ್ನು ಸ್ಥಾಪಿಸುತ್ತಾ ಬಂದಿದ್ದಾರೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಟೂಲ್‌ಕಿಟ್‌ ವಿತರಿಸಿದ ಮೇಯರ್‌ ಈರೇಶ ಅಂಚಟಗೇರಿ ಮಾತನಾಡಿ, ತಾಂತ್ರಿಕ ಶಿಕ್ಷಣ ಎಂದರೆ ತಾಂತ್ರಿಕತೆಯ ಬಗ್ಗೆ ಕ್ರಿಯಾತ್ಮಕ ರೂಪದಲ್ಲಿ ನೀಡುವ ಶಿಕ್ಷಣ. ಇದರಲ್ಲಿ ವಿದ್ಯಾರ್ಥಿಗಳು ಕೈಗಾರಿಕೆಗೆ ಅವಶ್ಯವಿರುವ ತರಬೇತಿಯನ್ನು ಪಡೆದು ಮುಂದೆ ಕೈಗಾರಿಕೆಗಳಲ್ಲಿ ಕೆಲಸಗಳನ್ನು ಸಹ ಮಾಡಬಹುದು ಅಥವಾ ಅದೇ ಕೈಗಾರಿಕೆಗೆ ಬೇಕಾಗುವ ಕಚ್ಚಾ ವಸ್ತುಗಳನ್ನು ಅಥವಾ ಕೈಗಾರಿಕೆಗೆ ಬೇಕಾಗುವ ಪೂರಕ ಕೆಲಸಗಳನ್ನು ಸಹ ಮಾಡುವಷ್ಟು ಪ್ರಬುದ್ಧರಾಗುತ್ತಾರೆ. ಹೀಗಾಗಿ ಐಟಿಐ ಕಲಿಯುವಾಗಲೇ ಇಂತಹ ತರಬೇತಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದಲ್ಲಿ ಅವರು ಬೇರೆಯವರಿಗೂ ಉದ್ಯೋಗ ಕೊಡುವಷ್ಟು ಬೆಳೆಯಬಹುದು ಎಂದರು.

ನಿಟ್ಟೆ ಅಟಲ್‌ ಇನ್ಕ್ಯೂಬೇಶನ್‌ ಸೆಂಟರ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|ಎ.ಪಿ.ಆಚಾರ್‌ ಮಾತನಾಡಿ, ಐಟಿಐನಲ್ಲಿ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ತಾಂತ್ರಿಕ ತರಬೇತಿ ಪ್ರಾಯೋಗಿಕವಾಗಿ ದೊರೆಯುತ್ತದೆ. ಅದರೊಟ್ಟಿಗೆ ಈ ರೀತಿ ತರಬೇತಿಗಳು ಅವರನ್ನು ಕೌಶಲ್ಯ ಭರಿತರನ್ನಾಗಿ ಮಾಡುತ್ತವೆ. ಜೆಎಸ್‌ ಎಸ್‌ ಸಂಸ್ಥೆ ಹಲವಾರು ತರಬೇತಿಗಳನ್ನು ಆಯೋಜಿಸಿ, ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ಅಣಿಗೊಳಿಸುತ್ತಿದೆ ಎಂದು ಹೇಳಿದರು.

ಡಾಯ್‌ ಫೌಂಡೇಶನ್‌ನ ಸ್ಥಾಪಕ ಜಗದೀಶ್‌ ನಾಯಕ್‌ ಮಾತನಾಡಿ, ಸ್ಕೈಡರ್‌ ಕಂಪನಿಯವರು ನೀಡಿದ ಈ ತರಬೇತಿ ಕೇಂದ್ರದ ಉದ್ದೇಶ ವಿದ್ಯಾರ್ಥಿಗಳಿಗೆ ಕಲಿಯುತ್ತಿರುವಾಗಲೇ ಇಲೆಕ್ಟ್ರಿಕಲ್ ತಾಂತ್ರಿಕ ತರಬೇತಿಯನ್ನು ನೀಡಿ ಅವರೊಂದಿಗೆ ಉದ್ಯೋಗ ಕಲ್ಪಿಸುವ ಯೋಜನೆ ಇದಾಗಿದೆ. ಈ ಯೋಜನೆಯಲ್ಲಿ 90 ದಿನಗಳ ಕಾಲ ಐಟಿಐ ವಿದ್ಯಾರ್ಥಿಗಳಿಗೆ ಡೊಮೆಸ್ಟಿಕ್‌, ಇಂಡಸ್ಟ್ರಿಯಲ್‌, ಕಮರ್ಶಿಯಲ್‌ ಹಾಗೂ ಮನೆಯ ವಾಯರಿಂಗ್‌, ಹೋಮ್‌ ಅಪ್ಲಾಯನ್ಸಸ್‌ ರಿಪೇರಿಗೆ ಸಂಬಂಧಿಸಿದ ತರಬೇತಿಯನ್ನು ನೀಡಲಾಗುವುದು. ಈ ತರಬೇತಿ ಸಂಪೂರ್ಣ ಉಚಿತವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಟೂಲ್‌ ಕಿಟ್‌ಗಳನ್ನು ಸಹ ನೀಡುವುದರ ಜತೆಗೆ ತರಬೇತಿಯ ನಂತರ ಪ್ರಮಾಣ ಪತ್ರ ವಿತರಿಸಿ, ಉದ್ಯೋಗ ದೊರಕಿಸಿ ಕೊಡಲಾಗುವದು ಎಂದರು.

ಜೆಎಸ್ಸೆಸ್‌ ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ಡಾಯ್‌ ಫೌಂಡೇಶನ್‌ನ ಶಿಲ್ಪಾ ಕಡಕೋಳ, ಮಹೇಶ ಕುಂದರಪಿಮಠ, ವಿಕಾಸ ಬಿಳಗಿಕರ್‌, ಸುಕನ್ಯಾ ಗುಮ್ಮಗೋಳಮಠ ಇದ್ದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.