ಸ್ಮಾರ್ಟ್‌ಸಿಟಿ ದಿಕ್ಕು-ದೆಸೆ ಪರಿಶೀಲನೆ
|242.82 ಕೋಟಿ ಮೊತ್ತದ ಕಾಮಗಾರಿ ಪ್ರಗತಿಯಲ್ಲಿ |3.16 ಕೋಟಿ ರೂ. ವೆಚ್ಚದ 6 ಕಾಮಗಾರಿಯಷ್ಟೇ ಪೂರ್ಣ
Team Udayavani, Jun 10, 2019, 9:00 AM IST
ಹುಬ್ಬಳ್ಳಿ: ಸ್ಮಾರ್ಟ್‌ಸಿಟಿ ಯೋಜನೆ ಪ್ರಗತಿ ಕುರಿತಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅಧಿಕಾರಿಗಳ ಸಭೆ ನಡೆಸಿದರು.
ಹುಬ್ಬಳ್ಳಿ: ಅವಳಿ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಅನುಷ್ಠಾನ ಕುರಿತಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅಧಿಕಾರಿಗಳ ಜತೆ ರವಿವಾರ ಚರ್ಚಿಸಿ, ಮಾಹಿತಿ ಪಡೆದರು.
ಸ್ಮಾರ್ಟ್ ಸಿಟಿ ಯೋಜನೆ ಮುಖ್ಯ ಎಂಜಿನಿಯರ್ ನಾರಾಯಣ ಇನ್ನಿತರ ಅಧಿಕಾರಿಗಳು ವಿವಿಧ ಯೋಜನೆಗಳ ಕುರಿತಾಗಿ ಮಾಹಿತಿ ನೀಡಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಒಟ್ಟು 242.82 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿ ಪ್ರಗತಿಯಲ್ಲಿವೆ. ಅಂದಾಜು 3.16 ಕೋಟಿ ರೂ. ವೆಚ್ಚದ ಆರು ಕಾಮಗಾರಿಗಳು ಪೂರ್ಣಗೊಂಡಿವೆ.
ಅಂದಾಜು 266.44 ಕೋಟಿ ರೂ. ವೆಚ್ಚದ ಕಾಮಗಾರಿಗಳು ಟೆಂಡರ್ ಹಂತದಲ್ಲಿದ್ದರೆ, 77 ಕೋಟಿ ವೆಚ್ಚದ 5 ಯೋಜನೆಗಳು ಡಿಪಿಆರ್ ಹಂತದಲ್ಲಿವೆ ಎಂದರು.
ಮಳೆ ನೀರು ಕೊಯ್ಲು ಯೋಜನೆಯನ್ನು ಪಾಲಿಕೆ ಆವರಣ, ಲ್ಯಾಮಿಂಗ್ಟನ್ ಶಾಲೆ, ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿ ಅಂದಾಜು 34 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದ್ದು, ಕಾಮಗಾರಿ ಪೂರ್ಣಗೊಂಡಿದೆ. ಅದೇ ರೀತಿ ಚಿಟಗುಪ್ಪಿ ಆಸ್ಪತ್ರೆ, ಪಾಲಿಕೆ ಹಾಗೂ ಲ್ಯಾಮಿಂಗ್ಟನ್ ಬಾಲಕಿಯರ ಪ್ರೌಢಶಾಲೆಯಲ್ಲಿ ಸ್ಯಾನಿಟರಿ ಪ್ಯಾಡ್ ವಿತರಣೆ ಹಾಗೂ ವಿಲೇವಾರಿ ಯಂತ್ರ ಅಳವಡಿಸಲಾಗಿದೆ. ಒಂದು ಅಂಗವಿಕಲರಿಗೆ ಸೇರಿದಂತೆ ಒಟ್ಟು 7 ಕಡೆ ಇ-ಶೌಚಾಲಯ ಅಳವಡಿಸಲಾಗಿದೆ ಎಂದು ವಿವರಿಸಿದರು.
ದೇಶಮಟ್ಟದಲ್ಲಿ 28-ರಾಜ್ಯಕ್ಕೆ 5ನೇ ಸ್ಥಾನ | ಸಕಾಲಕ್ಕೆ ಆಗದ ಬಿಲ್-ಗುತ್ತಿಗೆದಾರರ ಹಿಂದೇಟು:
ಅವಳಿನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ಇದಕ್ಕೆ ರಾಜ್ಯದಲ್ಲಿ ಸಮರ್ಥ ಆಡಳಿತ ಹಾಗೂ ನಾಯಕತ್ವ ಇಲ್ಲದಿರುವುದೇ ಕಾರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಬೇಸರ ವ್ಯಕ್ತಪಡಿಸಿದರು.
ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್‌ಸಿಟಿ ಯೋಜನೆ ಅನುಷ್ಠಾನದಲ್ಲಿ ಅವಳಿನಗರ ದೇಶಮಟ್ಟದಲ್ಲಿ 28ನೇ ಹಾಗೂ ರಾಜ್ಯದಲ್ಲಿ ಏಳು ನಗರಗಳಲ್ಲಿ ಐದನೇ ಸ್ಥಾನದಲ್ಲಿದೆ. ಅವಳಿನಗರದಲ್ಲಿ ಯೋಜನೆ ನಿರೀಕ್ಷಿತ ವೇಗದಲ್ಲಿ ಅನುಷ್ಠಾನ ಆಗುತ್ತಿಲ್ಲ ಎಂಬುದು ಸ್ಪಷ್ಟ ಎಂದರು.
ಕೊಪ್ಪಿಕರ ರಸ್ತೆ, ದಾಜೀಬಾನಪೇಟೆ ರಸ್ತೆ ಹಾಗೂ ಸ್ಟೇಶನ್ ರಸ್ತೆಗಳ ಅಭಿವೃದ್ಧಿಗೆ ಯಾವುದೇ ಗುತ್ತಿಗೆದಾರರು ಮುಂದೆ ಬರುತ್ತಿಲ್ಲ. ಮಾಡಿದ ಕಾಮಗಾರಿಗೆ ಸಕಾಲಕ್ಕೆ ಬಿಲ್ ಆಗದಿರುವುದು ಗುತ್ತಿಗೆದಾರರು ಟೆಂಡರ್‌ಗೆ ಹಿಂದೇಟು ಹಾಕಲು ಕಾರಣವಾಗಿದೆ. ರಾಜ್ಯದಲ್ಲಿ ಸಮರ್ಥ ಸರಕಾರ-ಆಡಳಿತ ಇಲ್ಲದಿರುವುದೇ ಇದಕ್ಕೆ ಕಾರಣ. ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕರು, ಪಾಲಿಕೆ ಆಯುಕ್ತರು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಪೂರ್ಣಾವಧಿ ಅಧಿಕಾರಿಗಳು ಇಲ್ಲದಿರುವುದು ಇದಕ್ಕೆ ಕಾರಣವಾಗಿತ್ತು. ಇನ್ನಾದರೂ ರಾಜ್ಯ ಸರಕಾರ ಮುತುವರ್ಜಿ ವಹಿಸಿ ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
15-16ರಂದು ಸ್ಥಳ ಭೇಟಿ: ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿಗಳ ಅನುಷ್ಠಾನ ಕುರಿತಾಗಿ ಜೂ. 15 ಇಲ್ಲವೆ 16ರಂದು ಸ್ಥಳ ಪರಿಶೀಲನೆ ನಡೆಸುವುದಾಗಿ ಶೆಟ್ಟರ ತಿಳಿಸಿದರು. ಉಣಕಲ್ಲ ಕೆರೆ ವಿಚಾರದಲ್ಲಿ ಜಲಾನಯನ ಪ್ರದೇಶ ಇಲ್ಲವಾಗುತ್ತಿದೆ ಎಂಬುದನ್ನು ಮನಗಂಡು, ಈ ಹಿಂದೆ ತಾವು ಸುಮಾರು 500 ಎಕರೆಯಷ್ಟು ಭೂಮಿಯನ್ನು ಹಸಿರು ವಲಯ ಎಂದು ಘೋಷಿಸಿ ಉಳಿಸುವ ಯತ್ನ ಮಾಡಿದ್ದೇನೆ. ಕೆಲವರು ಅದನ್ನು ನಿವೇಶನಗಳಾಗಿ ಪರಿವರ್ತಿಸುವ ಯತ್ನಕ್ಕೆ ಮುಂದಾಗಿದ್ದರಾದರೂ ಅದನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದೇನೆ ಎಂದರು.
ಬಿಜೆಪಿ ಮುಖಂಡರಾದ ಮಹೇಶ ಬುರ್ಲಿ, ರವಿ ನಾಯಕ ಇನ್ನಿತರರಿದ್ದರು.
ನಿರೀಕ್ಷಿತ ವೇಗದಲ್ಲಿಲ್ಲ ಸ್ಮಾರ್ಟ್‌ಸಿಟಿ ಕಾಮಗಾರಿ:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.