ಧೂಮಪಾನಿಗಳ ಜೇಬಿಗೆ ಹೊಗೆ
ತನಿಖಾ ದಳದಿಂದ ದಿಢೀರ್ ದಾಳಿ, 324 ಜನರ ವಿರುದ್ಧ ಪ್ರಕರಣ
Team Udayavani, Sep 22, 2019, 9:11 AM IST
ಧಾರವಾಡ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ತಂಬಾಕು ತನಿಖಾ ದಳ ದಿಂದ 21ಕ್ಕೂ ಹೆಚ್ಚು ದಿಢೀರ್ ದಾಳಿ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ 324 ಜನರ ವಿರುದ್ಧ ಪ್ರಕರಣ ದಾಖಲಿಸಿ 40,840 ರೂ. ದಂಡ ವಿಧಿ ಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಅಧ್ಯಕ್ಷರಾದ ಡಿಸಿ ದೀಪಾ ಚೋಳನ್ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದ ತ್ತೈಮಾಸಿಕ ಸಮನ್ವಯ ಸಮಿತಿ ಸಭೆ ಜರುಗಿಸಿ ಅವರು ಮಾತನಾಡಿದರು. 18 ವರ್ಷದೊಳಗಿನ ಅಥವಾ ಅಪ್ರಾಪ್ತ ಮಕ್ಕಳಿಗೆ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಅವರಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುತ್ತಿದ್ದ 188 ಜನರ ವಿರುದ್ಧ ಪ್ರಕರಣ ದಾಖಲಿಸಿ 20,950 ರೂ. ದಂಡ ವಸೂಲಿ ಮಾಡಲಾಗಿದೆ. ಶಿಕ್ಷಣ ಸಂಸ್ಥೆಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ 17 ಪ್ರಕರಣಗಳು ದಾಖಲಾಗಿದೆ. ಈ ಪೈಕಿ 2400 ರೂ. ದಂಡ ವಿಧಿಸಿ ಎಚ್ಚರಿಕೆ ನೋಟಿಸ್ ನೀಡಲಾಗಿದೆ ಎಂದರು.
ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ರಚಿಸಿ, ಕೋಟಾ³ ಕಾಯ್ದೆಯ ಅನ್ವಯ ಕಾನೂನು ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಬಿಆರ್‌ಟಿಎಸ್ ಬಸ್‌ನಿಲ್ದಾಣ, ಪೊಲೀಸ್ ಆಯುಕ್ತರ ಕಚೇರಿ, ಸರಕಾರಿ ಕಚೇರಿ, ಶಾಲಾ-ಕಾಲೇಜು ಆವರಣದಲ್ಲಿ ಧೂಮಪಾನ ನಿಷೇಧ ಫಲಕಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರಮುಖ ಸ್ಥಳಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚಿಸಿದರು.
ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಪರಿಗಣಿಸಿ ತಂಬಾಕು ಉತ್ಪನ್ನಗಳ ಉತ್ಪಾದನೆ, ಸರಬರಾಜು ಮತ್ತು ಮಾರಾಟದ ಮೇಲೆ ನಿಯಂತ್ರಣ ಹೇರಲು ಜಾರಿಯಾಗಿರುವ ಕೋಟ್ಪಾ ಕಾಯ್ದೆ-2003ನ್ನು ಜಿಲ್ಲೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.