ಸೈನಿಕರಿಗೆ ಯಾವುದೇ ಮತ-ಪಂಥಗಳಿಲ್ಲ; ನಿವೃತ್ತ ಏರ್‌ ಕಮಾಂಡರ್‌

ಗಡಿಯಲ್ಲಿ ಸೈನಿಕರು ಜೀವದ ಹಂಗು ತೊರೆದು ಪಹರೆ ಕಾಯುತ್ತಾರೆ

Team Udayavani, Aug 18, 2022, 4:21 PM IST

ಸೈನಿಕರಿಗೆ ಯಾವುದೇ ಮತ-ಪಂಥಗಳಿಲ್ಲ; ನಿವೃತ್ತ ಏರ್‌ ಕಮಾಂಡರ್‌

ಧಾರವಾಡ: ಸೈನಿಕರಿಗೆ ಯಾವುದೇ ಜಾತಿ, ಧರ್ಮ ಹಾಗೂ ಮತ-ಪಂಥಗಳಿಲ್ಲ. ಸೈನಿಕ ಎಂಬ ಪದವೇ ಧರ್ಮವಾಗಿದೆ ಎಂದು ನಿವೃತ್ತ ಏರ್‌ ಕಮಾಂಡರ್‌ ಸಿ.ಎಸ್‌.ಹವಾಲ್ದಾರ್‌ ಹೇಳಿದರು.

ಶ್ರೀಸಾಯಿ ಪದವಿ ಪೂರ್ವ ವಿಜ್ಞಾನ-ವಾಣಿಜ್ಯ ಕಾಲೇಜು, ಹೊಂಬೆಳಕು ಫೌಂಡೇಷನ್‌ ಸಹಯೋಗದಲ್ಲಿ ಅಮೃತ ಮಹೋತ್ಸವ ಪ್ರಯುಕ್ತ ನಗರದ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ದೇಶ ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸರ್ಕಾರ ಬರುತ್ತವೆ, ಹೋಗುತ್ತವೆ. ಆದರೆ, ಸೈನಿಕರು ಮಾತ್ರ ದೇಶದ ಹಾಗೂ ಜನರ ರಕ್ಷಣೆಗೆ ಪ್ರಾಮಾಣಿಕ ಕರ್ತವ್ಯ ನಿಭಾಯಿಸುತ್ತಾರೆ. ಭಾರತ ಬಡತನ ರಾಷ್ಟ್ರವಲ್ಲ ಅದೊಂದು ಶ್ರೀಮಂತ ರಾಷ್ಟ್ರ. 21ನೇ ಶತಮಾನದಲ್ಲಿ ಜಗತ್ತು ಆಳುವ ಶಕ್ತಿ ಭಾರತಕ್ಕಿದೆ. ಚೀನಾ ಹಾಗೂ ಅಮೆರಿಕ ದೇಶಕ್ಕೆ ಪೈಪೋಟಿ ನೀಡಲಿದೆ. ಅಷ್ಟೊಂದು ಶಕ್ತಿ, ಸಂಪನ್ಮೂಲ ಭಾರತದಲ್ಲಿದೆ ಲಭ್ಯತೆ ಉಂಟು ಎಂದರು.

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸೈನಿಕರ ಸೇವೆ ಮರೆಯುವಂತಿಲ್ಲ. ಆದರೆ ಅಮೃತ ಮಹೋತ್ಸವದಲ್ಲಿ ಕೇವಲ ಮಹಾತ್ಮರನ್ನು ನೆನೆದು ಸೈನಿಕರನ್ನು ಕಡೆಗಣಿಸುತ್ತಿದೆ. ಸ್ವಾತಂತ್ರ್ಯಕ್ಕೆ ಮಹಾತ್ಮರು ಅಹಿಂಸಾ ಮಾರ್ಗದಿಂದ ಹೋರಾಡಿದರೆ, ಸುಭಾಷಚಂದ್ರ ಬೋಸ್‌ ಇಂಡಿಯನ್‌ ನ್ಯಾಷನಲ್‌ ಆರ್ಮಿ ಸ್ಥಾಪಿಸಿ, ಬ್ರಿಟಿಷ್‌ ಸಾಮ್ರಾಜ್ಯದ ವಿರುದ್ಧ ತೊಡೆ ತಟ್ಟಿದ್ದಾರೆ. ಇಂತಹ ಹೋರಾಟಗಾರರನ್ನು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ ಎಂದರು.

ಮಹಾನಗರ ಪಾಲಿಕೆ ಆಯುಕ್ತ ಡಾ|ಗೋಪಾಲಕೃಷ್ಣ ಬಿ ಮಾತನಾಡಿ, ಗಡಿಯಲ್ಲಿ ಸೈನಿಕರು ಜೀವದ ಹಂಗು ತೊರೆದು ಪಹರೆ ಕಾಯುತ್ತಾರೆ. ಕೇವಲ ಸ್ವಾತಂತ್ರ್ಯ ದಿನಕ್ಕೆ ಸೈನಿಕರಿಗೆ ಗೌರವ ತೋರದೆ, ಅವರ ಸಮಸ್ಯೆ ಹಾಗೂ ತೊಂದರೆಗೆ ಸ್ಪಂದಿಸಬೇಕು ಎಂದರು.

ಇದೇ ಸಂದರ್ಭದಲ್ಲಿ 75 ಜನ ನಿವೃತ್ತ ಹಾಗೂ ಹಾಲಿ ಸೈನಿಕರಿಗೆ ದೇಶ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹೊಂಬೆಳಕು ಪ್ರತಿಷ್ಠಾನ ಅಧ್ಯಕ್ಷೆ ಡಾ|ವೀಣಾ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ವರಧಶ್ರೀಫೌಂಡೇಶನ್‌ ಸಂಸ್ಥಾಪಕ ಮಲ್ಲಿಕಾರ್ಜುನ ರಡ್ಡೇರ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಿಂಗಪ್ಪ ಸಿಂಗೋಟಿ, ಪ್ರಾಚಾರ್ಯ ನಾಗರಾಜ ಶಿರೂರ, ಶಿಕ್ಷಕರು ಇದ್ದರು.

ಇದಕ್ಕೂ ಮುನ್ನ ನಗರದ ಆರ್‌.ಎನ್‌.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಿಂದ ರಾಜ್ಯ ಸರ್ಕಾರಿ ನೌಕರರ ಭವನದವರೆಗೆ ಭಾರತಾಂಬೆಯ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.