ಘನತ್ಯಾಜ್ಯ ವಿಲೇವಾರಿ: ಜಿಲ್ಲಾಧಿಕಾರಿಗಳ ಸಭೆ
Team Udayavani, Jun 30, 2019, 9:39 AM IST
ಧಾರವಾಡ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಧಾರವಾಡ: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶದ ಮೇರೆಗೆ ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ನಿಯಮ 2016ರ ಅನುಷ್ಠಾನ ಕುರಿತು ರಚಿತವಾಗಿರುವ ಜಿಲ್ಲಾಮಟ್ಟದ ವಿಶೇಷ ಕಾರ್ಯಪಡೆಯ ಮೂರನೆಯ ಪ್ರಗತಿ ಪರಿಶೀಲನಾ ಸಭೆ ಡಿಸಿ ಕಚೇರಿಯಲ್ಲಿ ನಡೆಯಿತು.
ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ವಾಣಿಜ್ಯ ಮಳಿಗೆದಾರರು, ವಸತಿ ಸಮುಚ್ಛಯದವರು, ಕಲ್ಯಾಣ ಮಂಟಪದವರು ಹಾಗೂ ಹೋಟೆಲ್ ಉದ್ಯಮದಾರರು ತಮ್ಮ ಆವರಣದಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯ ವಸ್ತುಗಳನ್ನು ಹಸಿ ಕಸ ಹಾಗೂ ಒಣ ಕಸವನ್ನಾಗಿ ವಿಂಗಡಿಸದೇ ಕಸ ವಿಲೇವಾರಿಗಾಗಿ ನೀಡುತ್ತಿರುವುದು ಪಾಲಿಕೆ ಅಧಿಕಾರಿಗಳಿಂದ ತಿಳಿದು ಬಂದಿದೆ. ಜಿಲ್ಲಾ ವಿಶೇಷ ಕಾರ್ಯಪಡೆ ಇಂತಹ ವಾಣಿಜ್ಯ ಮಳಿಗೆದಾರರಿಗೆ ಜು.1ರಿಂದ ಅನ್ವಯಿಸುವಂತೆ ಘನ ತ್ಯಾಜ್ಯ ವಸ್ತುಗಳನ್ನು ಸರಿಯಾಗಿ ವಿಂಗಡಿಸಿ ನೀಡಬೇಕೆಂದು ಸೂಚಿಸಿದರು.
ಘನ ತ್ಯಾಜ್ಯ ವಸ್ತುಗಳನ್ನು ವಿಂಗಡಿಸದೇ ನೀಡುವ ವಾಣಿಜ್ಯ ಮಳಿಗೆದಾರರಿಗೆ, ವಸತಿ ಸಮುಚ್ಛಯ, ಕಲ್ಯಾಣ ಮಂಟಪ ಹಾಗೂ ಹೋಟೆಲ್ ಉದ್ಯಮದಾರರಿಗೆ ಕರ್ನಾಟಕ ಮುನ್ಸಿಪಲ್ ಕಾರ್ಪೋರೇಶನ್ ಕಾಯ್ದೆ 1976ರ ಅಡಿಯಲ್ಲಿ ದಂಡ ವಿಧಿಸಲು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಎಲ್ಲಾ ವಾಣಿಜ್ಯ ಮಳಿಗೆದಾರರು ವಸತಿ ಸಮುಚ್ಛಯ, ಕಲ್ಯಾಣ ಮಂಟಪ ಹಾಗೂ ಹೋಟೆಲ್ ಉದ್ಯಮದಾರರಿಗೆ ಹಾಗೂ ಇತರೆ ಸಾರ್ವಜನಿಕರು ಜು.1ರಿಂದ ಉತ್ಪತ್ತಿಯಾಗುವ ಘನ ತ್ಯಾಜ್ಯ ವಸ್ತುಗಳನ್ನು ವಿಂಗಡಿಸಿ ವಿಲೇವಾರಿಗಾಗಿ ನೀಡಲು ಸಹಕರಿಸಬೇಕೆಂದು ಸಾರ್ವಜನಿಕರಿಗೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.