![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 28, 2022, 1:21 PM IST
ಕುಂದಗೋಳ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಗುರುವಿನಹಳ್ಳಿ ಗ್ರಾಮ ಪಂಚಾಯಿತಿಯವರು ರಸ್ತೆಯನ್ನೇ ಒತ್ತುವರಿ ಮಾಡಿ ನಿರ್ಮಿಸಿದ್ದು ಎಷ್ಟರ ಮಟ್ಟಿಗೆ ಸರಿ ಎಂಬುದು ಚರ್ಚೆಗೆ ಗ್ರಾಸವಾಗಿದೆ.
ಗ್ರಾಪಂ ಮಟ್ಟದಲ್ಲಿ ಘನತ್ಯಾಜ್ಯ ಘಟಕಗಳನ್ನು ನಿರ್ಮಿಸಿ ಅಲ್ಲಿನ ತ್ಯಾಜ್ಯದಿಂದ ಎರೆಹುಳು ಗೊಬ್ಬರ ತಯಾರಿಸಿ ಸ್ಥಳೀಯ ರೈತರಿಗೆ ಅನುಕೂಲವಾಗಲು ಹಾಗೂ ಗ್ರಾಪಂಗೆ ಆದಾಯ ಮೂಲವಾಗಿಸಲು ಸರ್ಕಾರ ಯೋಜನೆ ರೂಪಿಸಿದೆ. ಗುರುವಿನಹಳ್ಳಿ ಗ್ರಾಮದ ಘಟಕ ನಿರ್ಮಾಣಕ್ಕಾಗಿ ನರೇಗಾ ಯೋಜನೆಯಡಿ 12 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಲಾಗಿದ್ದು, ಘಟಕದ ಹೊರಗಿನ ಕೆಲ ಗೋಡೆಗಳು ಸಿಮೆಂಟ್ ಗಿಲಾವ್ ಪೂರ್ಣಗೊಂಡಿಲ್ಲ. ಒಳಭಾಗದಲ್ಲಿ ಎರಡು ಶೌಚಾಲಯ ಗಳನ್ನು ನಿರ್ಮಿಸಿದ್ದು ಅವುಗಳಿಗೆ ಬಾಗಿಲು ಹಾಗೂ ನೀರಿನ ವ್ಯವಸ್ಥೆ ಇಲ್ಲವಾಗಿದೆ. ಘಟಕಕ್ಕೆ ವಿದ್ಯುತ್ ಸಂಪರ್ಕ ಸಹ ಇದುವರೆಗೂ ಕಲ್ಪಿಸಿಲ್ಲ. ತರಾತುರಿಯಲ್ಲಿ ಸೆ. 23ರಂದು ಘಟಕದ ಉದ್ಘಾಟನೆ ಸಹ ನೆರವೇರಿದೆ!
ಸರ್ಕಾರದ ದೃಷ್ಟಿಯಲ್ಲಿ ಈ ಘಟಕವು ಕಾರ್ಯಪ್ರವೃತ್ತಗೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿದಾಗ ಘಟಕವು ಸದಾ ಬಾಗಿಲು ಮುಚ್ಚಿರುವುದು ಕಂಡುಬಂತು. ಪಿಡಿಒ ಕವಿತಾ ವಿ.ಕೊಡ್ಲಿಗವಾಡ ಅವರನ್ನು ಈ ಕುರಿತು ಪ್ರಶ್ನಿಸಿದಾಗ, ಇನ್ನೂ ಸ್ವಲ್ಪ ಕೆಲಸ ಉಳಿದಿದೆ. ಗುತ್ತಿಗೆದಾರರಿಗೆ ಪೂರ್ಣಗೊಳಿಸಲು ಹೇಳಲಾಗಿದೆ. ಆರಂಭದ ಹಂತವಾಗಿ ಒಂದು ದಿನ ಊರಿನ ಒಣ ಕಸ ತಂದು ಸಂಗ್ರಹ ಮಾಡಲಾಗಿದೆ. ಮುಂದೆ ಕಾರ್ಯ ಆರಂಭಿಸುತ್ತೇವೆ ಎಂದರು.
ರಸ್ತೆ ಮಧ್ಯೆ ಏಕೆ?: ಘಟಕವನ್ನು ರಸ್ತೆ ಮಧ್ಯದಲ್ಲಿಯೇ ಏಕೆ ನಿರ್ಮಿಸಿದ್ದೀರಿ ಎಂದು ಪಿಡಿಒ ಅವರನ್ನು ಪ್ರಶ್ನಿಸಿದಾಗ, ಗ್ರಾಪಂ ವ್ಯಾಪ್ತಿಯಲ್ಲಿ ಯಾವುದೇ ನಿವೇಶನ ಲಭ್ಯ ಇಲ್ಲದಿರುವುದರಿಂದ ಸ್ಥಳೀಯ ಕಮಿಟಿಯವರು ಕಾಲುವೆ ದಂಡೆ ಹಾಗೂ ರಸ್ತೆ ಬಳಸಿಕೊಂಡು ನಿರ್ಮಿಸಲು ಠರಾವು ಪಾಸ್ ಮಾಡಿದ್ದಾರೆ. ಸರ್ಕಾರದ ಯೋಜನೆ ಅನುಷ್ಠಾನಗೊಳಿಸಲು ಈ ಜಾಗದಲ್ಲಿ ನಿರ್ಮಿಸಿದ್ದೇವೆ ಎಂದು ಹೇಳಿದರು.
ಬೇಲಿಯೇ ಎದ್ದು ಹೊಲ ಮೇಯ್ದಂತೆ
ಯಾರಾದರೂ ರಸ್ತೆ ಜಾಗ ಒತ್ತುವರಿ ಮಾಡಿಕೊಂಡರೆ ಸ್ಥಳೀಯ ಆಡಳಿತ ತೆರವುಗೊಳಿಸಿ ಜನರ ಸಂಚಾರಕ್ಕೆ ಮುಕ್ತ ಮಾಡಿಕೊಡುತ್ತದೆ. ಆದರೆ ಇಲ್ಲಿ ಸ್ಥಳೀಯ ಆಡಳಿತವೇ ಸರ್ಕಾರದ ಯೋಜನೆ ಅನುಷ್ಠಾನಗೊಳಿಸುವ ನೆಪದಲ್ಲಿ ರಸ್ತೆ ಹಾಗೂ ಹಳ್ಳದ ದಂಡೆ ಒತ್ತುವರಿ ಮಾಡಿರುವುದು ಹುಬ್ಬೇರಿಸುವಂತೆ ಮಾಡಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಘಟಕ ಉದ್ಘಾಟನೆ ಆದರೂ ಇದುವರೆಗೂ ಇಲ್ಲಿ ಯಾವ ಚಟುವಟಿಕೆಗಳು ಕಾರ್ಯರೂಪಕ್ಕೆ ಬಾರದೆ ಇರುವುದರಿಂದ ಕಾಟಾಚಾರಕ್ಕೆ ನಿರ್ಮಿಸಿದಂತೆ ಭಾಸವಾಗುತ್ತಿದೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
ತಾಪಂ ಇಒ ಪರಮೇಶಕುಮಾರ ವಿ. ಅವರನ್ನು ಈ ಕುರಿತು ಮಾತನಾಡಿಸಿದಾಗ, ನಾನು ಈಗ ತಾನೆ ಬಂದಿದ್ದೇನೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಹೇಳಿದರು. ತಾಪಂ ಎಂಜಿನಿಯರ್ ಲಿಂಗರಾಜ ದಾಡಿಬಾವಿ ಅವರನ್ನು ಮಾತನಾಡಿಸಿದಾಗ, ನಾನು ಸಹ ಈಗ ಬಂದಿದ್ದೇನೆ. ಪೂರ್ಣ ಮಾಹಿತಿಯಿಲ್ಲ ಎಂದು ಜಾರಿಕೊಂಡರು.
-ಶೀತಲ ಮುರಗಿ
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.