ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ 2-3ನೇ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಸಲಹೆ
Team Udayavani, Mar 15, 2022, 11:42 AM IST
ಧಾರವಾಡ: ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ತ್ವರಿತ ಗತಿಯಲ್ಲಿ ತನಿಖೆ ಮಾಡಿ ಇತ್ಯರ್ಥ ಪಡಿಸಬೇಕೆಂದು ಡಿಸಿ ನಿತೇಶ ಪಾಟೀಲ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ 2-3ನೇ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ಕಲ್ಯಾಣ ಸಮಿತಿಯಿಂದ ನೊಂದ ಮಕ್ಕಳನ್ನು ತಾತ್ಕಾಲಿಕವಾಗಿ ಅಭಿರಕ್ಷಣೆ ಮಾಡುವ ಸಂದರ್ಭದಲ್ಲಿ ಸರ್ಕಾರೇತರ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಅಲ್ಲಿನ ಮೂಲಸೌಕರ್ಯ, ಮಕ್ಕಳ ಸ್ನೇಹಿ ಪರಿಸರ ಇರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಪಾಲಕರ-ಮಕ್ಕಳ ಪಾತ್ರ ಮುಖ್ಯ. ಅವರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಮಧ್ಯವರ್ತಿಗಳು ಕಂಡು ಬಂದಲ್ಲಿ ಅವರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆಗೆ ಅಗತ್ಯವಿರುವ ಕ್ರಮಗಳನ್ನು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಸಾಧಿಸಬೇಕು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಕೊಳ್ಳಬೇಕು. ಶಾಲೆಗೆ ಸೇರಿರುವ ಮತ್ತು ಶಾಲೆಯಿಂದ ಹೊರಗಿರುವ ಪ್ರತಿ ಮಗು ಮಕ್ಕಳ ಹಕ್ಕನ್ನು ಸಂತೋಷದಿಂದ ಅನುಭವಿಸುವಂತಹ ವಾತಾವರಣ ಸೃಷ್ಟಿಸಬೇಕು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ, ಪೋಕ್ಸೋ, ಬಾಲ್ಯವಿವಾಹ ನಿಷೇದ ಕಾಯ್ದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಮಕ್ಕಳನ್ನು ರಕ್ಷಿಸಬೇಕು. ಮಕ್ಕಳಿಗೆ ಪೋಕ್ಸೋ, ಲೈಂಗಿಕ ದೌರ್ಜನ್ಯ ಬಗ್ಗೆ ತಿಳಿವಳಿಕೆ ನೀಡಿ ಅವರಲ್ಲಿ ಎಚ್ಚರಿಕೆ ಮೂಡಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಪ್ರಕಟಿಸಿರುವ ಘನತೆಯ ಬದುಕು ಕೈಪಿಡಿಯನ್ನು ಡಿಸಿ ನಿತೇಶ ಪಾಟೀಲ ಬಿಡುಗಡೆ ಗೊಳಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ|ಕಮಲಾ ಬೈಲೂರ ಸಭೆ ನಿರ್ವಹಿಸಿ, ಮಕ್ಕಳ ರಕ್ಷಣಾ ಘಟಕದ ಕಾರ್ಯಗಳನ್ನು ಪ್ರಸ್ತುತಪಡಿಸಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಶೋಕ ಯರಗಟ್ಟಿ, ಜಿಪಂ ಸಿಇಒ ಡಾ|ಸುರೇಶ ಇಟ್ನಾಳ, ಉಪ ಪೊಲೀಸ್ ಆಯುಕ್ತ ಗೋಪಾಲ ಬ್ಯಾಕೋಡ ಇದ್ದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಡಿವೈಎಸ್‌ಪಿ ಮಲ್ಲಿಕಾರ್ಜುನ ಸಂಕದ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್. ಎಸ್. ಕೆಳದಿಮಠ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ|ಎನ್.ಆರ್.ಪುರುಷೋತ್ತಮ, ತಾಲೂಕು ವೈದ್ಯಾ ಧಿಕಾರಿ ಡಾ|ಕೆ.ಎನ್.ತನುಜಾ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕಾರ್ಮಿಕ ಇಲಾಖೆ, ಲೋಕೋಪಯೋಗಿ ಇಲಾಖೆ, ತನಿಖಾ ಸಮಿತಿ ಸದಸ್ಯರು, ಬಾಲ ನ್ಯಾಯಮಂಡಳಿ ಸದಸ್ಯರು, ಮಕ್ಕಳ ಪಾಲನಾ ಸಂಸ್ಥೆಯ ಅಧೀಕ್ಷಕರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಇದ್ದರು.
ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತಿ ಶಾಲೆ, ಕಾಲೇಜಿಗೆ ಓರ್ವ ಶಿಕ್ಷಕಿಯನ್ನು ಆಯ್ಕೆ ಮಾಡಬೇಕು. ಆ ಬಳಿಕ ಅವರಿಗೆ ಮಕ್ಕಳ ರಕ್ಷಣೆಗೆ ಅಗತ್ಯವಿರುವ ಕಾನೂನಾತ್ಮಕ ತಿಳಿವಳಿಕೆ, ಮಕ್ಕಳ ರಕ್ಷಣೆಗೆ ಇರುವ ವಿವಿಧ ಕಾಯ್ದೆಗಳ ಕುರಿತು ತರಬೇತಿ ನೀಡಬೇಕು. ಈ ತರಬೇತಿ ಹೊಂದಿದ ಶಿಕ್ಷಕಿಯರ ಮೂಲಕ ಪ್ರತಿ ತಿಂಗಳು ಶಾಲೆಗಳ ಬಾಲಕಿಯರಿಗೆ ರಕ್ಷಣೆ ಕುರಿತು ಜಾಗೃತಿ ಮೂಡಿಸಬೇಕು.
ನಿತೇಶ ಪಾಟೀಲ, ಡಿಸಿ, ಧಾರವಾಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.