ಗ್ರಾಮೀಣ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ವಿಶೇಷ ಒತ್ತು

ಆಸಕ್ತಿ ಇರುವವರನ್ನು ಕಲಿಕೆಯಲ್ಲಿ ಬಳಸಿಕೊಳ್ಳುವ ಮಹದಾಸೆ ಇದೆ.

Team Udayavani, Nov 19, 2022, 1:18 PM IST

ಗ್ರಾಮೀಣ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ವಿಶೇಷ ಒತ್ತು

ಅಳ್ನಾವರ: ಗ್ರಾಮೀಣ ಸಮುದಾಯಗಳಿಗೆ ಸಮಾನಶಿಕ್ಷಣ ಪ್ರಕಲ್ಪದಡಿ ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಸಂಸ್ಥೆ ತಾಲೂಕಿನ ಬೆಣಚಿ ಮತ್ತು ಕಡಬಗಟ್ಟಿ ಗ್ರಾಪಂ ಆಯ್ಕೆ ಮಾಡಿಕೊಂಡು ಅಂಗನವಾಡಿಯಿಂದ ಪಿಯುಸಿ ವರೆಗಿನ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ವಿಶೇಷ ಕಾರ್ಯಕ್ರಮ ರೂಪಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸ್ಥೆಯ ಪ್ರಾದೇಶಿಕ ಮುಖ್ಯಸ್ಥ ಕೆ.ಎಸ್‌. ಜಯಂತ ಹೇಳಿದರು.

ಡೋರಿ ಗ್ರಾಮದ ಸರ್ಕಾರಿ ಶಾಲಾ ಮೈದಾನದಲ್ಲಿ ಅಂಗನವಾಡಿ ಮಕ್ಕಳಿಗಾಗಿ ಹಮ್ಮಿಕೊಂಡ ಚಿಲಿಪಿಲಿ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂಗನವಾಡಿ ಮಕ್ಕಳ ಕಲಿಕೆ, ದಾಖಲಾತಿ ಉತ್ತಮಪಡಿಸುವ ಕಾರ್ಯ ನಡೆದಿದೆ.

ಶೈಕ್ಷಣಿಕ ಚಟುವಟಿಕೆ ಜೊತೆಗೆ ಅಂಗನವಾಡಿ ಮಕ್ಕಳಲ್ಲಿ ಕ್ರಿಯಾಶೀಲತೆ ಮೂಡಿಸುವ ಪ್ರಯತ್ನದ ಫಲವಾಗಿ ಬೆಣಚಿ, ಡೋರಿ, ಕಿವಡೆಬೈಲ್‌, ದೋಪೆನಟ್ಟಿಯ ಮಕ್ಕಳಿಗೆ ಹಲವಾರು ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.

ಕಲಿಕಾ ಪದ್ಧತಿ ಸುಧಾರಣೆಗೆ ಸಮುದಾಯದ ಸಹಭಾಗಿತ್ವ ಮುಖ್ಯ ಎಂಬ ಅಂಶ ಮನಗಂಡು ಅಂಗನವಾಡಿಗೆ ಬರುವ ಮಕ್ಕಳ ಪಾಲಕರ ಪಟ್ಟಿ ಮಾಡಿಕೊಂಡು ಆಸಕ್ತಿ ಇರುವವರನ್ನು ಕಲಿಕೆಯಲ್ಲಿ ಬಳಸಿಕೊಳ್ಳುವ ಮಹದಾಸೆ ಇದೆ. ನಮ್ಮ ಸಂಸ್ಥೆ ಆರೋಗ್ಯ, ಶಿಕ್ಷಣ, ಸಮುದಾಯ ಅಭಿವೃದ್ಧಿ, ಸಂಶೋಧನೆ ಮತ್ತು ತರಬೇತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ ಅಧ್ಯಕ್ಷ ಡಾ| ಲಿಂಗರಾಜ ರಾಮಾಪುರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಾಲ್ಯದಲ್ಲಿ ದೊರೆಯುವ ಶಿಕ್ಷಣ ಮುಂದಿನ ಬದುಕಿಗೆ ಅಡಿಪಾಯ ಇದ್ದಂತೆ ಎಂದರು.ಮಕ್ಕಳಿಗಾಗಿ ಅಭಿನಯ ಗೀತೆ, ವೇಷಭೂಷಣ, ಗುಂಪು ನೃತ್ಯ, ಕಥೆ ಹೇಳುವುದು, ಕಪ್ಪೆ ಓಟ, ಸ್ವಯಂ ಪರಿಚಯ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಬಹುಮಾನ ನೀಡಲಾಯಿತು. ಪೋಷಕರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ವಿವಿಧ ಸ್ಪರ್ಧೆ ನಡೆಯಿತು.

ಬೆಣಚಿ ಗ್ರಾಪಂ ಅಧ್ಯಕ್ಷ ಉಮೇಶ ಕದಂ, ಮಹಾಂತೇಶ ಗಾಳಿ, ಕೆ.ಎಂ. ಕರಿಗಾರ, ಆರ್‌. ಎನ್‌. ಬಸ್ತವಾಡಕರ, ಡಿ.ಎನ್‌. ಖಾನಾಪುರಕರ, ಸಂತೋಷ ಕಂಬಾರ, ಸಂಗೀತಾ ಮುತ್ತಲಮುರಿ, ಲಲಿತಾ ಕಮ್ಮಾರ, ಎನ್‌.ಡಿ. ಕುಕಡೊಳ್ಳಿ ಇದ್ದರು. ಶಿವಾನಂದ ವಸ್ತ್ರದಮಠ ಸ್ವಾಗತಿಸಿದರು. ಯೋಗಿತಾ ಪ್ರಾಸ್ತಾವಿಕ ಮಾತನಾಡಿದರು. ಸೋಮನಾಥ ಪಾಟೀಲ ನಿರೂಪಿಸಿದರು. ಸಂತೋಷ ಕಂಬಾರ ವಂದಿಸಿದರು. ಪೂರ್ಣಿಮಾ ಗೆನಪ್ಪನವರ, ಹೀನಾ ದೊಡ್ಡಮನಿ, ನಿರ್ಮಲಾ ಜಗತಾಪ ನಿರ್ಣಾಯಕರಾಗಿದ್ದರು.

 

ಟಾಪ್ ನ್ಯೂಸ್

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.