ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ
Team Udayavani, Mar 28, 2022, 10:12 AM IST
ಧಾರವಾಡ: ಜಿಲ್ಲೆಯಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು, 116 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 28,291 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರಥಮ ಭಾಷೆ ಪರೀಕ್ಷೆ ಸೋಮವಾರ ಜರುಗಲಿದ್ದು, ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ.
ಕೋವಿಡ್-19 ಮುನ್ನೆಚ್ಚರಿಕಾ ಕ್ರಮ ಕೈಗೊಂಡು, ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಗಳನ್ನು ಬರೆದು, ಅದರ ಮಾಹಿತಿವುಳ್ಳ ಫಲಕಗಳನ್ನು ಹೊರಗಡೆ ಪ್ರದರ್ಶಿಸಲು ವ್ಯವಸ್ಥೆ ಮಾಡಲಾಗಿದೆ.
ಅವಳಿನಗರದಲ್ಲಿ ಒಟ್ಟು 64 ಪರೀಕ್ಷಾ ಕೇಂದ್ರಗಳಿದ್ದರೆ, ಗ್ರಾಮೀಣ ಭಾಗದಲ್ಲಿ ಒಟ್ಟು 52 ಕೇಂದ್ರಗಳನ್ನು ತೆರೆಯಲಾಗಿದೆ. ಈ ಎಲ್ಲಾ ಕೇಂದ್ರಗಳಲ್ಲಿಯೂ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಈಗಾಗಲೇ ಎಲ್ಲಾ ಕೇಂದ್ರಗಳಲ್ಲಿಯೂ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ.
ಇಸ್ಕಾನ್ ಹಾಗೂ ಅದಮ್ಯ ಚೇತನದಿಂದ ಅಲ್ಪೋಪಹಾರ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ 28,291 ವಿದ್ಯಾರ್ಥಿಗಳ ಪೈಕಿ 14,168 ವಿದ್ಯಾರ್ಥಿಗಳಿದ್ದರೆ, 14,123 ವಿದ್ಯಾರ್ಥಿನಿಯರಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ 14,793 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಗ್ರಾಮೀಣ ಭಾಗದಲ್ಲಿ 13,498 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಕೋವಿಡ್ ಬಗ್ಗೆ ಈಗಲೂ ಪೋಷಕರಲ್ಲಿ ಕೊಂಚ ಭಯವಿದೆ. ಅದಕ್ಕಾಗಿ ಪರೀಕ್ಷಾ ಕೇಂದ್ರಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ.
ಯಾವುದೇ ಭಯವಿಲ್ಲದೇ ಮಕ್ಕಳನ್ನು ಪರೀಕ್ಷೆಗೆ ಮುಕ್ತವಾಗಿ ಕಳುಹಿಸಿಕೊಡಬೇಕು. ಇದಲ್ಲದೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸಹಾಯಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಸಹಾಯವಾಣಿ ಪ್ರಾರಂಭಿಸಿದೆ. ಏನಾದರೂ ಸಮಸ್ಯೆಗಳು ಇದ್ದಲ್ಲಿ ಸಹಾಯವಾಣಿ ನಂ-18004256758 ಕರೆ ಮಾಡಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಡಿಡಿಪಿಐ ಎಸ್.ಎಸ್. ಕೆಳದಿಮಠ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.