ಎಸ್ಸೆಸ್ಸೆಲ್ಸಿ ಪರೀಕ್ಷೆ ಶಾಂತಿಯುತ: ಡಿಬಾರ್ ಇಲ್ಲ
Team Udayavani, Mar 31, 2017, 1:22 PM IST
ಧಾರವಾಡ: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಗುರುವಾರ ಜರುಗಿದ ಪ್ರಥಮ ಭಾಷೆಗೆ ಜಿಲ್ಲೆಯ 91 ಕೇಂದ್ರಗಳಲ್ಲಿ ಒಟ್ಟು 26,763 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶಾಂತಿಯುತ ಪರೀಕ್ಷೆ ನಡೆದಿದೆ. 91 ಕೇಂದ್ರಗಳ ಪೈಕಿ ಒಟ್ಟು 76 ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಿಕ್ಷಣ ಇಲಾಖೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿತ್ತು.
ಪ್ರಥಮ ಭಾಷೆ ಪರೀಕ್ಷೆಯಲ್ಲಿ ಯಾವ ವಿದ್ಯಾರ್ಥಿಗಳೂ ನಕಲು ಮಾಡಿದ ಪ್ರಕರಣಗಳು ಬೆಳಕಿಗೆ ಬಂದಿಲ್ಲ. ಡಿಬಾರ್ ಆಗಿಲ್ಲ. 14,236 ವಿದ್ಯಾರ್ಥಿಗಳು, 13,346 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 27,582 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, 13,660 ವಿದ್ಯಾರ್ಥಿಗಳು, 13,103 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 26,763 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರು.
819 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದರು. ಆ ಪೈಕಿ 276 ವಿದ್ಯಾರ್ಥಿಗಳು, 243 ಜನ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿರಲಿಲ್ಲ. ಎಲ್ಲಾ ಪರೀûಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲಾಗಿತ್ತು. ಯಾವ ಕೇಂದ್ರದಲ್ಲೂ ತಡವಾಗಿ ಪರೀಕ್ಷೆ ಆರಂಭವಾದ ಬಗ್ಗೆ ವರದಿಯಾಗಿಲ್ಲ. ಎಂದು ಡಿಡಿಪಿಐ ಎನ್.ಎಚ್.ನಾಗೂರ ತಿಳಿಸಿದ್ದಾರೆ.
ಮಕ್ಕಳಿಗೆ ಶುಭ ಕೋರಿಕೆ: ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಲು ಬಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪೋಷಕರು, ಕೆಲ ಸಂಘಟನೆಗಳ ಕಾರ್ಯಕರ್ತರು ಹೂ ನೀಡಿ ಪರೀಕ್ಷೆ ಚೆನ್ನಾಗಿ ಬರೆಯುವಂತೆ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.