ಕವಿಸಂ ಸಂಸ್ಥಾಪನಾ ದಿನಾಚರಣೆಗೆ ಚಾಲನೆ


Team Udayavani, Jul 21, 2019, 9:16 AM IST

HUBALI-TDY-02

ಧಾರವಾಡ: ಕವಿಸಂನ 130ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಹಿರಿಯ ನಟ ದೊಡ್ಡಣ್ಣ ಚಾಲನೆ ನೀಡಿದರು.

ಧಾರವಾಡ: ಕನ್ನಡ ನಾಡು ಕಟ್ಟುವಲ್ಲಿ ಕೊಡುಗೆ ನೀಡಿರುವ ಕವಿಸಂ ಕಳೆದ 130 ವರ್ಷಗಳಿಂದ ನಾಡು, ನುಡಿ, ಜಲ ವಿಷಯದಲ್ಲಿ ಸಾಕಷ್ಟು ಸೇವೆ ಸಲ್ಲಿಸಿದೆ. ನೂರಲ್ಲ, ಸಾವಿರ ವರ್ಷ ಸಂಘ ಮುನ್ನಡೆಯಲಿ ಎಂದು ಹಿರಿಯ ಚಲನಚಿತ್ರ ನಟ ದೊಡ್ಡಣ್ಣ ಹೇಳಿದರು.

ಕವಿಸಂನ ಕುವೆಂಪು ವೇದಿಕೆಯಲ್ಲಿ 130ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ 7 ದಿನಗಳ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಂಘ ಕಟ್ಟುವುದು ಸುಲಭ. ಆದರೆ ಅದು ಸುದೀರ್ಘ‌ ವರ್ಷಗಳ ಕಾಲ ಉತ್ತಮ ಸೇವೆ ನೀಡುವಂತೆ ನಡೆಸುವುದು ಕಷ್ಟ. ಸಂಸ್ಥಾಪಕರಿಂದ ಹಿಡಿದು ಅನೇಕ ಮಹನೀಯರು ಈ ಸಂಘವನ್ನು ನೂರು ವರ್ಷಗಳ ಕಾಲ ಮುನ್ನಡೆಸಿದ್ದಾರೆ. ಇಂದಿನವರೂ ಅದೇ ರೀತಿಯಲ್ಲಿ ಮುನ್ನಡೆಸಲಿ ಎಂದರು.

ಕವಿಸಂಗೆ 130 ವರ್ಷ ಆಗಿದ್ದರೆ, ಅದರ ಅಧ್ಯಕ್ಷರು ನೂರು ವರ್ಷ ಸಾಗಿ ಮುನ್ನಡೆದಿದ್ದಾರೆ. 1971ರಲ್ಲಿ ನಮ್ಮೂರಿನ ಕಾರ್ಯಕ್ರಮಕ್ಕೆ ಪಾಪು ಅವರನ್ನು ಕರೆ ತರಲು ಹುಬ್ಬಳ್ಳಿಗೆ ಬಂದಾಗ ಅವರನ್ನು ಕಂಡಿದ್ದೆ. ಆಗ ಈ ದೊಡ್ಡಣ್ಣ ಬರೀ ದಡ್ಡಣ್ಣ ಆಗಿದ್ದ ಅಷ್ಟೆ. ಆಗ ಕಂಡ ಪಾಪು ಅವರನ್ನು ಈಗ ಮರಳಿ ಕಾಣುತ್ತಾ ಇದ್ದು, ಅವರ ನಾಯಕತ್ವದಲ್ಲಿ ಸಂಘ ಸಾಗಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಅಂಬರೀಷ ಸ್ಮರಣೆ: ದೇಶದಲ್ಲಿ ಈಗ 21 ಭಾಷೆಗಳಲ್ಲಿ ಚಿತ್ರ ನಿರ್ಮಾಣ ಆಗುತ್ತಿದ್ದು, ಕರ್ನಾಟಕದಲ್ಲಿ ಎಲ್ಲ ಭಾಷೆಗಳ ಚಿತ್ರಗಳೂ ಪ್ರದರ್ಶನ ಆಗುತ್ತಲಿವೆ. ಈ ಮಧ್ಯೆ ನಮ್ಮ ಕನ್ನಡ ಚಿತ್ರಗಳು ಪೈಪೋಟಿ ನೀಡಿ ಪ್ರದರ್ಶನ ಆಗುತ್ತಿದ್ದು, ಎಲ್ಲ ಸವಾಲುಗಳನ್ನು ಕನ್ನಡ ಭಾಷೆ ಮೆಟ್ಟಿ ನಿಂತಿದೆ. ಯಾವ ಭಾಷೆಯಲ್ಲೂ ಕಲಾವಿದರ ಸಂಘವಿಲ್ಲ. ಆದರೆ ಕನ್ನಡ ಚಲನಚಿತ್ರ ರಂಗದಲ್ಲಿ ಮಾತ್ರವೇ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘವಿರುವುದು ನಮ್ಮ ಹೆಮ್ಮೆ. ಇದು ಸಾಕಾರ ರೂಪ ಪಡೆಯಲು ನಮ್ಮ ಅಂಬರೀಷಣ್ಣನೇ ಮೂಲ ಕಾರಣ ಎಂದು ಸ್ಮರಿಸಿದರು.

ಹಿಂದಿನ ದಿನಗಳಲ್ಲಿ ಸಿನಿಮಾ ನಟರು ಕೆಲ ಕಾರಣಕ್ಕೆ ಮುನಿಸಿಕೊಳ್ಳುತ್ತಿದ್ದರು. ಒಂದೆರಡು ತಿಂಗಳು ಕಳೆದ ಬಳಿಕ ನಾವು ಅವರ ಮನೆಗೆ, ಅವರು ನಮ್ಮ ಮನೆಗೆ ಬಂದು ಪುನಃ ಒಂದಾಗುತ್ತಿದ್ದೆವು. ಆದರೆ ಇಂದಿನ ನಟರಲ್ಲಿ ಆ ಲಕ್ಷಣಗಳು ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಕಾಶ ಉಡಕೇರಿ, ನಿಂಗಣ್ಣ ಕುಂಟಿ ಸೇರಿದಂತೆ ಪದಾಧಿಕಾರಿಗಳು, ಗಣ್ಯರು ಪಾಲ್ಗೊಂಡಿದ್ದರು. ಶಿವಣ್ಣ ಬೆಲ್ಲದ ಸ್ವಾಗತಿಸಿದರು. ಕೃಷ್ಣಾ ಜೋಶಿ ಪ್ರಾಸ್ತಾವಿಕ ಮಾತನಾಡಿದರು. ವಿಶ್ವೇಶ್ವರಿ ಹಿರೇಮಠ ನಿರೂಪಿಸಿದರು. ಸಂಘದ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು. ಡಾ|ಶ್ರೀಪಾದ ಭಟ್ ನಿರ್ದೇಶನದಲ್ಲಿ ಉಡುಪಿಯ ಕೊಡವೂರಿನ ನೃತ್ಯ ನಿಕೇತನದಿಂದ ಚಿತ್ರಾ ನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.