ಭ್ರಷ್ಟಾಚಾರದಲ್ಲಿ ರಾಜ್ಯ ಸರ್ಕಾರ ನಂ.1: ಡಿಕೆಶಿ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದಾಗಯಡಿಯೂರಪ್ಪಕಣ್ಣೀರು ಹಾಕಿದ್ದೇಕೆ?
Team Udayavani, Aug 30, 2021, 1:40 PM IST
ಹುಬ್ಬಳ್ಳಿ: ಕೋವಿಡ್ ವೇಳೆ ನಡೆದ ಭ್ರಷ್ಟಾಚಾರ ರಾಷ್ಟ್ರದಲ್ಲೇ ರಾಜ್ಯ ಸರ್ಕಾರ ಮೊದಲ ಸ್ಥಾನದಲ್ಲಿದೆ. ಚಿಕಿತ್ಸೆ, ಔಷಧಿ, ಶವಸಂಸ್ಕಾರಕ್ಕೂ ಕ್ಯೂ ನಿಲ್ಲಿಸಿದರು. ಮೃತಪಟ್ಟವರಿಗೂ ಪರಿಹಾರ ನೀಡಲಿಲ್ಲ. ಕೇಂದ್ರ 20 ಲಕ್ಷ ಕೋಟಿ ರೂ. ಹಾಗೂ ರಾಜ್ಯ ಸರ್ಕಾರದ ವಿವಿಧ ಪರಿಹಾರ ನೀಡಲಿಲ್ಲ. ಸಂಕಷ್ಟದ ಸಂದರ್ಭದಲ್ಲಿ ಆಸ್ತಿ ತೆರಿಗೆ ಸೇರಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿ ಜನರನ್ನು ಕಿತ್ತು ತಿನ್ನುವ ಸರ್ಕಾರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿದ್ದರೆ ಕೋವಿಡ್‌ನಂತಹ ಪರಿಸ್ಥಿತಿಯಲ್ಲಿ ಅಗತ್ಯ ವಸ್ತುಗಳ ದರ, ತೆರಿಗೆ ಹೆಚ್ಚಳ ಮಾಡುತ್ತಿರಲಿಲ್ಲ.ಕೋವಿಡ್ ಸಂದರ್ಭದಲ್ಲಿ ಪ್ರತಿಯೊಂದು ಖರೀದಿಯಲ್ಲೂ ಭ್ರಷ್ಟಾಚಾರವಾಗಿದೆ. ಲಾಕ್‌ಡೌನ್‌ನಿಂದಾಗಿ ವಿವಿಧ ಸಮಾಜ, ಕಾರ್ಮಿಕರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದು ಪರಿಹಾರ ಘೋಷಣೆ ಮಾಡಿತು. ಇದೊಂದು ಜನಪರ ಸರ್ಕಾರವಾಗಿದ್ದರೆ ಯಾವ ಸಮಾಜಕ್ಕೆ, ಯಾರಿಗೆ ಎಷ್ಟು ಪರಿಹಾರ ನೀಡಲಾಗಿದೆ ಎನ್ನುವ ಪಟ್ಟಿಯನ್ನು ಬಿಡುಗಡೆ ಮಾಡಲಿ. ಕೇವಲ ಭಾವನಾತ್ಮಕ ವಿಷಯಗಳ ಮೇಲೆ ಜನರನ್ನು ವಂಚಿಸುವಕೆಲಸ ಮಾಡುತ್ತಿದೆ ಎಂದರು.
ಬಿಎಸ್‌ವೈ ಕಣ್ಣೀರಿಗೆ ಕಾರಣವೇನು?: ರಾಜ್ಯದಲ್ಲಿ ಉತ್ತಮ ಆಡಳಿತವಿದ್ದರೆ ಎರಡೇ ವರ್ಷಕ್ಕೆ ಮುಖ್ಯಮಂತ್ರಿ ಬದಲಾವಣೆ ಮಾಡಿದ್ದು ಯಾವ ಕಾರಣಕ್ಕೆ? ಬಹಳ ಕಷ್ಟಪಟ್ಟು ಅವರಿವರಿಗೆ ಆಮಿಷವೊಡ್ಡಿ ಸರ್ಕಾರ ರಚಿಸಿದವರಿಂದ ಏಕೆ ರಾಜೀನಾಮೆ ಪಡೆಯಲಾಯಿತು. ರಾಜೀನಾಮೆ ನೀಡುವ ಮೊದಲು ಮುಖ್ಯಮಂತ್ರಿಗಳು ಬಹಿರಂಗವಾಗಿ ಗಳಗಳನೇ ಅತ್ತಿದ್ದು ಏಕೆ ಎನ್ನುವುದನ್ನು ಪಕ್ಷದ ನಾಯಕರು ಜನರಿಗೆ ತಿಳಿಸಬೇಕು. ಸಿಎಂ ಬದಲಾವಣೆ ಪಕ್ಷದ ಆಂತರಿಕ ವಿಚಾರವಾದರೂ ಕೋವಿಡ್ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರಕ್ಕೂ ರಾಜೀನಾಮೆ ಪಡೆದಿರುವುದಕ್ಕೂ ಏನಾದರೂ ಸಂಬಂಧವಿದೆಯಾ ಎಂದು ರಾಜ್ಯದ ಜನರು ಪ್ರಶ್ನಿಸುತ್ತಿದ್ದಾರೆ. ಕೇಂದ್ರ, ರಾಜ್ಯದಲ್ಲಿನ ಭ್ರಷ್ಟಾಚಾರ, ಆಡಳಿತ ವೈಫಲ್ಯ, ಸುಳ್ಳು ಭರವಸೆಗಳಿಂದ ಜನರು ಎಚ್ಚೆತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್ ಕೃಷಿ
Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!
MUST WATCH
ಹೊಸ ಸೇರ್ಪಡೆ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.