ರಾಜ್ಯಮಟ್ಟದ ಒಲಂಪಿಕ್: ವಸತಿ ವ್ಯವಸ್ಥೆಗೆ ಸಿದ್ಧತೆ
Team Udayavani, Jan 3, 2017, 12:14 PM IST
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಮಂಬರುವ ಫೆ.3ರಿಂದ 10ರವರೆಗೆ ನಡೆಯುವ ರಾಜ್ಯಮಟ್ಟದ ಓಲಂಪಿಕ್ ಕ್ರೀಡಾಕೂಟಗಳಲ್ಲಿ ಸುಮಾರು 4,500 ಕ್ರೀಡಾಪಟುಗಳು ಹಾಗೂ ಕ್ರೀಡಾ ತಂತ್ರಜ್ಞರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಲಭ್ಯ ಇರುವ ಎಲ್ಲ ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾರ್ಥಿ ನಿಲಯಗಳ ಸಹಕಾರದೊಂದಿಗೆ ಉತ್ತಮ ವಸತಿ ಸೌಕರ್ಯಗಳನ್ನು ಒದಗಿಸಲು ಜಿಲ್ಲಾಡಳಿತ ಪ್ರಯತ್ನಿಸಲಿದೆ.
ಜ.4ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಲಿದೆ ಎಂದು ಹೇಳಿದರು. ರಾಜ್ಯ ಓಲಂಪಿಕ್ ಕ್ರೀಡಾಕೂಟಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಒಟ್ಟು 23 ಕ್ರೀಡಾಂಗಣ, ಆಟದ ಮೈದಾನಗಳನ್ನು ಗುರುತಿಸಲಾಗಿದೆ.
ರೈಫಲ್ ಶೂಟಿಂಗ್ ಮತ್ತು ಟ್ರಯಥ್ಲಾನ್ ಕ್ರೀಡೆಗಳು ಬೆಂಗಳೂರಿನಲ್ಲಿಯೇ ನಡೆಯಲಿವೆ. ಒಟ್ಟು ಸುಮಾರು 4500 ಕ್ರೀಡಾಪಟುಗಳು, ತಂತ್ರಜ್ಞರು ಭಾಗವಹಿಸುವರು. ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳ ಕಲಾವಿದರು. ಇತರ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಯೂ ಸಹ ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಲಿದೆ.
ಇದಕ್ಕಾಗಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾಡಳಿತದ ಎಲ್ಲ ಇಲಾಖೆಗಳು ಶ್ರಮಿಸಬೇಕು ಎಂದರು. ಉತ್ತಮ ವಸತಿ, ಆಹಾರ, ಸಾರಿಗೆ, ಮೂಲ ಸೌಕರ್ಯಗಳನ್ನು ಕಲ್ಪಿಸಲು ಸ್ಪಷ್ಟ ರೂಪುರೇಷೆ ಹಾಕಿಕೊಳ್ಳಬೇಕು. ಜ.4ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಆಗಮಿಸಬೇಕು ಎಂದು ಸೂಚಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಆರ್., ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಉಪವಿಭಾಗಾಧಿಕಾರಿ ಮಹೇಶ ಕರ್ಜಗಿ, ಮಹಾನಗರ ಪಾಲಿಕೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಕೋನರಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಶಾರದಾ ಕೋಲಕಾರ, ಯುವ ಸಬಲೀಕರಣ ಮತ್ತು
ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್.ಮುನಿರಾಜು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಉಪನಿರ್ದೇಶಕ ಸದಾಶಿವ ಮರ್ಜಿ, ಡಿಎಚ್‌ಒ ಡಾ|ಆರ್.ಎಂ.ದೊಡ್ಡಮನಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿ.ಎಸ್.ದೊಡ್ಡಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.