ಧಾರವಾಡದಲ್ಲಿ ರಾಜ್ಯಮಟ್ಟದ ಶಂಕರಾಚಾರ್ಯರ ಜಯಂತಿ
Team Udayavani, Apr 23, 2017, 3:31 PM IST
ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ತತ್ವಜ್ಞಾನಿಗಳ ದಿನದ ಅಂಗವಾಗಿ ಮೇ. 30ರಂದು ಆದ್ಯ ಗುರು ಶ್ರೀ ಶಂಕರಾಚಾರ್ಯರ ರಾಜ್ಯಮಟ್ಟದ ಜಯಂತಿ ಆಯೋಜಿಸಲು ನಿರ್ಧರಿಸಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ| ಎಸ್.ಬಿ.ಬೊಮ್ಮನಹಳ್ಳಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ|ಬೊಮ್ಮನಹಳ್ಳಿ ಮಾತನಾಡಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅವರ ಪ್ರಯತ್ನದಿಂದ ಧಾರವಾಡದಲ್ಲಿ ರಾಜ್ಯಮಟ್ಟದ ಶ್ರೀ ಶಂಕರಾಚಾರ್ಯರ ಜಯಂತಿ ಹಮ್ಮಿಕೊಳ್ಳಲು ಸರ್ಕಾರ ಆದೇಶ ನೀಡಿದೆ.
ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದರು. ಜಯಂತಿ ಅಂಗವಾಗಿ ಜನಪದ ಕಲಾ ತಂಡಗಳೊಂದಿಗೆ ಶ್ರೀ ಶಂಕರಾಚಾರ್ಯರ ಭಾವಚಿತ್ರ ಮೆರವಣಿಗೆ ನಂತರ ಸಂಜೆ 6ಗಂಟೆಗೆ ಡಾ|ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಕಲಾವಿದರ ನೃತ್ಯರೂಪಕ, ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು. ಬಾರಿ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮಉದ್ಘಾಟಿಸಲಿದ್ದಾರೆ ಎಂದರು. ಸ್ಥಳೀಯ ಕಲಾವಿದರು, ಮಹಿಳಾ ಭಜನಾ ಮಂಡಳಿಗಳಿಗೆ ರೂಪಕ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಅವಕಾಶ ನೀಡಬೇಕೆಂದು ಸಂಘಟನೆಯ ಪದಾಧಿಕಾರಿಗಳು ಸಲಹೆ ನೀಡಿದರು.
ಹು-ಧಾ ಮಹಾನಗರ ಪಾಲಿಕೆ ಸದಸ್ಯ ದೀಪಕ್ ಚಿಂಚೋರೆ, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ರಂಗಣ್ಣವರ, ವಾರ್ತಾ ಮತ್ತು ಸಾರ್ವಜನಿಕ ಪ್ರಚಾರ ಇಲಾಖೆ ಹಿರಿಯಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಮುಖಂಡರಾದ ನರೇಂದ್ರ ಕುಲಕರ್ಣಿ, ರವಿ ದೇಶಪಾಂಡೆ, ಶಂಕರ ಕುಲಕರ್ಣಿ, ಆರ್.ಡಿ.ಕುಲಕರ್ಣಿ, ಎಂ.ಬಿ.ನಾಥು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.