ಬೀದಿ ನಾಟಕ ಸಮರ್ಥ ಮಾಧ್ಯಮ


Team Udayavani, Jun 6, 2017, 1:19 PM IST

hub5.jpg

ಧಾರವಾಡ: ಜನಜಾಗೃತಿ ಮೂಡಿಸಲು, ಸಂದೇಶಗಳನ್ನು ನೇರವಾಗಿ ಜನರಿಗೆ ತಲುಪಿಸಲು ಬೀದಿ ನಾಟಕಗಳು ಸಮರ್ಥ ಮಾಧ್ಯಮಗಳಾಗಿವೆ. ಅವುಗಳ ಕಲಿಕೆ ಮತ್ತು ಪ್ರದರ್ಶನದಿಂದ ವ್ಯಕ್ತಿತ್ವ ವಿಕಸನವೂ ಸಾಧ್ಯವಾಗುತ್ತದೆ ಎಂದು ಆಕಾಶವಾಣಿಯ ನಿರ್ದೇಶಕ ಡಾ| ಸತೀಶ ಪರ್ವತೀಕರ ಹೇಳಿದರು. 

ಇಲ್ಲಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಬೀದಿ ನಾಟಕ ಕಲಾವಿದರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಜನರ ನಡುವಿನಿಂದಲೇ ಮೂಡಿ ಬರುವ ಬೀದಿ ನಾಟಕಗಳಿಂದ ಸರಕಾರದ ಅನೇಕ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಲು ಸಹಕಾರಿಯಾಗಿದೆ.

ಬೀದಿ ನಾಟಕಗಳ ಕಲಿಕೆಯು ನಮ್ಮಲ್ಲಿನ ಆತ್ಮಸ್ಥೈರ್ಯ ಹೆಚ್ಚಿಸುತ್ತದೆ ಎಂದರು. ರಂಗಾಯಣದ ಆಡಳಿತಾ  ಧಿಕಾರಿ ಬಸವರಾಜ ಹೂಗಾರ ಮಾತನಾಡಿ, ಬೀದಿ ಎಂಬುದು ಜಗತ್ತಿನ ಎಲ್ಲ ಜನರು ಪ್ರತಿನಿತ್ಯ ಓಡಾಡುವ ಜೀವಂತ ಸ್ಥಳ ಮತ್ತು ಅದೊಂದು ಪುಟ್ಟ ಜಗತ್ತೇ ಆಗಿದೆ. ನಿತ್ಯ ಎಲ್ಲರಿಂದ ತುಳಿಸಿಕೊಂಡರೂ ಅದು ಪವಿತ್ರವಾಗಿದೆ.

ವರಕವಿ ದ.ರಾ. ಬೇಂದ್ರೆಯವರು ತಮ್ಮ ಹೆಚ್ಚು ಸಮಯವನ್ನು ಬೀದಿ ಹಾಗೂ ಜನರ ಮಧ್ಯೆಯೇ ಕಳೆಯುವ ಮೂಲಕ ತಮ್ಮ ಕಾವ್ಯ ಭಾಷೆಗೆ ಹೆಚ್ಚು ಕಸುವು ತುಂಬಿದರು. ಬೀದಿಗಳಲ್ಲಿ ವಾಸ್ತವಿಕ ಸಂವೇದನೆಗಳಿವೆ. ಬೀದಿಗಳ ಮೂಲಕವೇ ಸಾಮಾಜಿಕ ಪರಿವರ್ತನೆ ಸಾಧ್ಯವಿದೆ ಎಂದರು. ಶಿಬಿರದ ನಿರ್ದೇಶಕರಾದ ಬಸವಲಿಂಗಯ್ಯ ಹಿರೇಮಠ ಹಾಗೂ ವಿಶ್ವೇಶ್ವರಿ ಹಿರೇಮಠ ಮಾತನಾಡಿದರು. 

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ ಅಧ್ಯಕ್ಷತೆ ವಹಿಸಿದ್ದರು. ಸಿ.ಬಿ.ಬೋವಿ ಸ್ವಾಗತಿಸಿದರು. ಪಿ.ಎಸ್‌.ಹಿರೇಮಠ ನಿರೂಪಿಸಿದರು. ಸುಜಾತಾ ಮಗದುಮ್‌ ವಂದಿಸಿದರು. ಬೆಳಗಾವಿ ವಿಭಾಗದ ಎಲ್ಲ ಜಿಲ್ಲೆಗಳ ಬೀದಿ ನಾಟಕ ಕಲಾವಿದರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದಾರೆ. ಜೂನ್‌ 9ರವರೆಗೆ ಕಾರ್ಯಾಗಾರ ನಡೆಯಲಿದೆ.

ಟಾಪ್ ನ್ಯೂಸ್

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.