ಜಿಎಸ್‌ಟಿಯಿಂದ ಹೊರಗುಳಿದವರ ಮೇಲೆ ಕಟ್ಟುನಿಟ್ಟಿನ ಕ್ರಮ
• ಸರ್ಟಿಫಿಕೇಟ್ ಜಿಎಸ್‌ಟಿ ಕೋರ್ಸ್ ಉದ್ಘಾಟನೆ • ಜನರ ಅನುಮಾನಗಳನ್ನು ನಿವಾರಿಸುವಲ್ಲಿ ಲೆಕ್ಕ ಪರಿಶೋಧಕರ ಪಾತ್ರ ಮಹತ್ವದ್ದು: ಡಾ| ರಶ್ಮಿ
Team Udayavani, May 26, 2019, 9:45 AM IST
ಹುಬ್ಬಳ್ಳಿ: ನಗರದ ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ ಐಸಿಎಐ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರೀಯ ತೆರಿಗೆ ಇಲಾಖೆ ಧಾರವಾಡ ವಿಭಾಗದ ಉಪ ಆಯುಕ್ತರಾದ ಡಾ| ರಶ್ಮಿ 'ಜಿಎಸ್‌ಟಿ ಸರ್ಟಿಫಿಕೇಟ್ ಕೋರ್ಸ್' ಉದ್ಘಾಟಿಸಿದರು.
ಹುಬ್ಬಳ್ಳಿ: ಜಿಎಸ್‌ಟಿ (ಸರಕು ಹಾಗೂ ಸೇವಾ ತೆರಿಗೆ) ಜಾಲದಿಂದ ಹೊರಗುಳಿದ ವ್ಯಾಪಾರಿಗಳು ಹಾಗೂ ಉದ್ಯಮಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ದಂಡ, ಶಿಕ್ಷೆ ತಪ್ಪಿಸಿಕೊಳ್ಳಲು ಸಮರ್ಪಕವಾಗಿ ತೆರಿಗೆ ಭರಿಸುವುದು ಕಡ್ಡಾಯ ಎಂದು ಕೇಂದ್ರೀಯ ತೆರಿಗೆ ಇಲಾಖೆ ಧಾರವಾಡ ವಿಭಾಗದ ಉಪ ಆಯುಕ್ತರಾದ ಡಾ| ರಶ್ಮಿ ಹೇಳಿದರು.
ಕೇಶ್ವಾಪುರದ ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ ಐಸಿಎಐ ಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ‘ಸರ್ಟಿಫಿಕೇಟ್ ಜಿಎಸ್‌ಟಿ ಕೋರ್ಸ್’ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ವ್ಯಾಪಾರಸ್ಥರು ಸರಕಾರಕ್ಕೆ ಮೋಸ ಮಾಡಲು ಸಾಧ್ಯವಿಲ್ಲ. ಎಲ್ಲ ವ್ಯಾಪಾರಿಗಳ ವಹಿವಾಟಿನ ಮಾಹಿತಿ ಇಲಾಖೆಗೆ ಇರುತ್ತದೆ. ಜಿಎಸ್‌ಟಿ ವ್ಯಾಪ್ತಿಗೆ ಬರುವ ಎಲ್ಲ ವ್ಯಾಪಾರಿಗಳು ಹಾಗೂ ವಹಿವಾಟುದಾರರು ಸರಿಯಾಗಿ ತೆರಿಗೆ ಪಾವತಿಸಬೇಕು. ಎಲ್ಲ ವ್ಯಾಪಾರಿಗಳು ಜಿಎಸ್‌ಟಿ ನೋಂದಣಿ ಮಾಡಿಕೊಳ್ಳುವುದು ಅವಶ್ಯ. ವ್ಯವಹಾರ ಇರಲಿ ಅಥವಾ ಇಲ್ಲದಿರಲಿ ಪ್ರತಿ ತಿಂಗಳು 20ನೇ ದಿನಾಂಕದೊಳಗೆ ರಿಟರ್ನ್ ದಾಖಲಿಸುವುದು ಕಡ್ಡಾಯವಾಗಿದೆ ಎಂದರು.
ಇ-ವೇ ಬಿಲ್ ಅನ್ನು 3ಬಿಯಲ್ಲಿ ತೋರಿಸುವುದು ಅವಶ್ಯಕ. ಜಿಎಸ್‌ಟಿ ಅರ್-1 ಹಾಗೂ ಬಿ-3 ಇವುಗಳ ಲೆಕ್ಕದಲ್ಲಿ ಹೊಂದಾಣಿಕೆ ಇರಬೇಕು. ಜಿಎಸ್‌ಟಿ ಕಾಯ್ದೆಯಲ್ಲಿ ಸಾಕಷ್ಟು ಮಾರ್ಪಾಡು ಮಾಡಲಾಗುತ್ತಿದೆ. ಇದನ್ನು ಇನ್ನಷ್ಟು ಸರಳೀಕರಣಗೊಳಿಸಲಾಗುತ್ತಿದೆ. ಆದ್ದರಿಂದ ಜಿಎಸ್‌ಟಿ ಬಗೆಗಿನ ಅನುಮಾನಗಳನ್ನು ನಿವಾರಿಸುವಲ್ಲಿ ಲೆಕ್ಕಪರಿಶೋಧಕರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಜಿಎಸ್‌ಟಿ ಅನುಷ್ಠಾನಕ್ಕೆ ತಂದ ಸರಕಾರವೇ ಮತ್ತೆ ಅಧಿಕಾರ ಪಡೆದಿರುವುದರಿಂದ ಜಿಎಸ್‌ಟಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿರೀಕ್ಷೆಯಿದೆ. ಸರಕಾರ ಜನರ ಮೇಲೆ ವಿಶ್ವಾಸ ಇಟ್ಟಿದ್ದು, ಅವರು ನೀಡಿದ ಮಾಹಿತಿಯನ್ನು ಸಂಪೂರ್ಣವಾಗಿ ನಂಬುತ್ತದೆ. ಆದರೆ ತಪ್ಪು ಮಾಹಿತಿ ನೀಡಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಇದರಿಂದ ವ್ಯಾಪಾರಿಗಳ ಲಾಭದ ಪ್ರಮಾಣ ಕುಸಿಯಬಹುದಾಗಿದೆ ಎಂದರು.
ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ಹುಬ್ಬಳ್ಳಿ ಶಾಖೆ ಚೇರ್ಮನ್ ಕೆ.ವಿ. ದೇಶಪಾಂಡೆ ಮಾತನಾಡಿ, ಜಿಎಸ್‌ಟಿ ಹಾಗೂ ಪರೋಕ್ಷ ತೆರಿಗೆ ಸಮಿತಿ ನೋಯ್ಡಾದಿಂದ ಅನುಮತಿ ಪಡೆದುಕೊಂಡು ಜಿಎಸ್‌ಟಿ ಸರ್ಟಿಫಿಕೇಟ್ ನೂತನ ಕೋರ್ಸ್ ಆರಂಭಿಸಲಾಗುತ್ತಿದೆ. 30 ಜನರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಸೌರಭ ಸಿಂಘಾಲ್, ಎಚ್.ಎನ್. ಆಡಿನವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.