ಎಚ್ಡಿಕೆ ನೇತೃತ್ವದ ಸರ್ಕಾರಕ್ಕೆ ಶ್ರಮಿಸಿ
Team Udayavani, May 23, 2017, 4:35 PM IST
ಹುಬ್ಬಳ್ಳಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರಕಾರ ರಚನೆ ಆಗಲೇಬೇಕೆನ್ನುವ ನಿಟ್ಟಿನಲ್ಲಿ ಪರಿಶ್ರಮ ಹಾಗೂ ಪ್ರಾಮಾಣಿಕವಾಗಿ ಕಾರ್ಯಕರ್ತರು ಶ್ರಮಿಸುವ ಅವಶ್ಯಕತೆ ಇದೆ ಎಂದು ಜೆಡಿಎಸ್ ಪಕ್ಷದ ಧಾರವಾಡ ಜಿಲ್ಲಾ ವೀಕ್ಷಕ ಮರಿಲಿಂಗೇಗೌಡರು ಹೇಳಿದರು.
ಜೆ.ಸಿ. ನಗರದ ಅಕ್ಕನ ಬಳಗದಲ್ಲಿ ಹುಬ್ಬಳ್ಳಿ ಶಹರ, ಹುಬ್ಬಳ್ಳಿ ಕೇಂದ್ರ, ಗ್ರಾಮೀಣ ಮತ್ತು ತಾಲೂಕು ಘಟಕದ ಕಾರ್ಯಕರ್ತರ ಸಭೆ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರದಲ್ಲಿ ಅಧಿಕಾರ ಹಿಡಿಯಲು ನರೇಂದ್ರ ಮೋದಿಯವರು ಏನೆಲ್ಲ ತಂತ್ರಗಾರಿಕೆ, ಪ್ರಚಾರ ಕೈಗೊಂಡರೋ ಅದೇ ಮಾದರಿಯ ಪ್ರಚಾರಕ್ಕೆ ನಾವು ಮುಂದಾಗಬೇಕಾಗಿದೆ.
ಟಿಕೆಟ್ ಇನ್ನಿತರ ಗೊಂದಲಗಳನ್ನು ತಪ್ಪಿಸುವ ನಿಟ್ಟಿನಲ್ಲಿ ವಿಧಾನಸಭೆ ಚುನಾವಣೆಗೆ 10 ತಿಂಗಳು ಕಾಲಾವಕಾಶ ಇರುವಾಗಲೇ ಪಕ್ಷದ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡುವುದಾಗಿ ಹೇಳಿದರು. ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಲು ಹಿಂದೇಟು ಹಾಕುತ್ತಿದೆ. ರೈತರ ಸಾಲಮನ್ನಾ ಮಾಡಲು ಕೇಂದ್ರದತ್ತ ಬೊಟ್ಟು ಮಾಡುತ್ತಿದೆ.
ಆದರೆ ರಾಜ್ಯದ ರೈತರ ಸಾಲವನ್ನು ಕೇಂದ್ರ ಸರಕಾರ ಯಾಕೆ ಮನ್ನಾ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು. ಬೆಂಗಳೂರು ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ನೂರಾರು ಕೋಟಿ ರೂ. ಮೌಲ್ಯದ ಸರಕಾರಿ ಭೂಮಿ ಹಾಗೂ ಕೆರೆಗಳು ಅತಿಕ್ರಮಣಗೊಂಡಿದ್ದು, ಅವುಗಳನ್ನು ತೆರವುಗೊಳಿಸಿ ಸಕ್ರಮ ಮಾಡಿದರೂ ಸರಕಾರಕ್ಕೆ ಸಾವಿರಾರು ಕೋಟಿ ರೂ. ಆದಾಯ ಬರಲಿದೆ.
ಅದೇ ಹಣದಿಂದ ರಾಜ್ಯ ರೈತರ ಸಂಪೂರ್ಣ ಸಾಲಮನ್ನಾ ಮಾಡಬಹುದು ಎಂದು ಸಲಹೆ ನೀಡಿದರು. ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಪಕ್ಷದಲ್ಲಿ ಶಿಸ್ತು-ಸಂಯಮ ಕಾಯ್ದುಕೊಳ್ಳಬೇಕು. ತಳಮಟ್ಟದದಿಂದ ಪಕ್ಷ ಸಂಘಟನೆ ಮಾಡಿದ್ದೆ ಆದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ 45 ಸ್ಥಾನಗಳನ್ನು ಗೆಲ್ಲಬಹುದು.
ಪಕ್ಷದ ಅಭ್ಯರ್ಥಿಗಳ ಆಯ್ಕೆಗಾಗಿ ಮೂರು ಬಾರಿ ಸಮೀಕ್ಷೆ ನಡೆಯಲಿದೆ. ಆನಂತರವಷ್ಟೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹಾಗಾಗಿ ಟಿಕೆಟ್ ಆಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಪಕ್ಷವನ್ನು ಕೆಳಮಟ್ಟದಿಂದ ಸಂಘಟಿಸಲು ಕೈಜೋಡಿಸಬೇಕು ಎಂದರು. ಇನ್ನೋರ್ವ ವೀಕ್ಷಕ ಬಿ.ಎಸ್. ಚಂದ್ರಶೇಖರ ಮಾತನಾಡಿ, 2018ರ ವಿಧಾನಸಭೆ ಚುನಾವಣೆ ನಿಮಿತ್ತ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ವೀಕ್ಷಕರನ್ನು ನಿಯೋಜಿಸಿದ್ದಾರೆ.
ವೀಕ್ಷಕರು ಕಾರ್ಯಕರ್ತರನ್ನು ಭೇಟಿ ಮಾಡಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಮನವರಿಕೆ ಮಾಡಲಿದ್ದಾರೆ.ಎಲ್ಲೆಡೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂಬುದೇ ಒತ್ತಾಸೆಯಾಗಿದೆ. ಆದರೆ, ಹಣ ಹಾಗೂ ಜನ ಬಲ ಹೊಂದಿರುವ ಜಗದೀಶ ಶೆಟ್ಟರ, ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದು ಸುಲಭದ ಕೆಲಸವಲ್ಲ.
ಆ ನಿಟ್ಟಿನಲ್ಲಿ ಸಂಘಟನೆಯೊಂದಿಗೆ ಚುನಾವಣೆಯಲ್ಲಿ ಹೋರಾಡಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದರು. ಮಹಾನಗರ ಜಿಲ್ಲಾಧ್ಯಕ್ಷ ರಾಜಣ್ಣ ಕೊರವಿ ಮಾತನಾಡಿದರು. ವಿಜಯ್ ಅಳಗುಂಡಗಿ, ಶಿವಣ್ಣ ಹುಬ್ಬಳ್ಳಿ, ಗಂಗಾಧರ ಪೆರೂರ, ದಮಯಂತಿ ಹಂಡಗಿ ಸೇರಿದಂತೆ ಹಲವು ಮುಖಂಡರು ತಮ್ಮ ವಿಚಾರಗಳನ್ನು ವೀಕ್ಷಕರಿಗೆ ತಿಳಿಸಿದರು.
ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷ ಬಿ.ಬಿ.ಗಂಗಾಧರಮಠ, ಧಾರವಾಡ ಜಿಲ್ಲಾಧ್ಯಕ್ಷ ಮುಜಾಯಿದ್ ಕಂಟ್ರಾಕ್ಟರ್, ರೈತ ಮುಖಂಡ ಗಂಗಾಧರ ಪಾಟೀಲ, ಮಹಾನಗರ ಪಾಲಿಕೆ ಸದಸ್ಯರಾದ ಅಲ್ತಾಫ್ ಕಿತ್ತೂರ, ಫಮೀದಾ ಕಿಲ್ಲೇದಾರ, ನಾಗನಗೌಡ ಪಾಟೀಲ, ಕಿರಣ್ ಹಿರೇಮಠ ಸೇರಿದಂತೆ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.