ವಿದ್ಯಾರ್ಥಿಗಳ ಕನಸು ನನಸಾಗಿಸಿ: ಪ್ರೊ| ಗಣೇಶ
Team Udayavani, Aug 13, 2017, 11:59 AM IST
ಧಾರವಾಡ: ವಿದ್ಯಾರ್ಥಿಗಳು ಕಾಣುವ ಕನಸುಗಳನ್ನು ಸಾಕಾರಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹಿರಿಯ ಭಾಷಾತಜ್ಞ ಪದ್ಮಶ್ರೀ ಪ್ರೊ| ಗಣೇಶ ಎನ್. ದೇವಿ ಹೇಳಿದರು. ಜೆಎಸ್‌ಎಸ್ ಸನ್ನಿ ಧಿ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾ ಪಿ. ಹಂಚಿನಮನಿ ಸ್ವತಂತ್ರ ಪಿಯು ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಸಂಘ, ಕ್ರೀಡಾ ಹಾಗೂ ಸಾಂಸ್ಕೃತಿಕ ವಿಭಾಗಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈಗಿನ ಶಿಕ್ಷಣ ಪದ್ಧತಿ ಹಾಗೂ ಈ ಹಿಂದಿನ ಶಿಕ್ಷಣ ಪದ್ಧತಿಗೆ ಅಜಗಜಾಂತರ ವ್ಯತ್ಯಾಸವಿದೆ. ಎಲ್ಲ ವಿಷಯವನ್ನು ಎಲ್ಲರೂ ತಿಳಿದುಕೊಂಡರೆ ಮಾತ್ರ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ ಎಂದರು. ಇಂದು ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳು ಮಾನಸಿಕ ಕ್ರೂರತೆ ನೀಡುವ ತಾಣಗಳಾಗಿವೆ.
ಅವುಗಳನ್ನು ಪರಿವರ್ತಿಸುವ ಜವಾಬ್ದಾರಿ ನಮ್ಮ ಯುವ ಜನಾಂಗದ ಮೇಲಿದ್ದು, ಅವುಗಳನ್ನು ಸಮರ್ಥವಾಗಿ ಎದುರಿಸಿ, ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳುವ ಮೂಲಕ ಶಿಸ್ತು ಹಾಗೂ ಕ್ರಮಬದ್ಧವಾದ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪರಿಸರ ಹಾಗೂ ನಿಸರ್ಗದ ಅಭಿವೃದ್ಧಿಗೆ ಜ್ಞಾನ ಬಳಕೆಯಾಗಬೇಕೇ ಹೊರತು ಅದರ ನಾಶಕ್ಕಲ್ಲ. ಯುದ್ಧ ನಡೆದರೆ ಅದರ ಪರಿಣಾಮ ಬಹಳಷ್ಟು ಗಂಭೀರವಾಗಲಿದೆ. ಇದೀಗ ಭಾರತ ಸೇರಿದಂತೆ ಅನೇಕ ದೇಶದಲ್ಲಿ ಅಸುರಕ್ಷಿತತೆ ತಾಂಡವಾಡುತ್ತಿದ್ದು, ಅಪರಾಧ ಹಾಗೂ ಅಪರಾಧ ಮನೋಭಾವನೆ ಗಣನೀಯವಾಗಿ ಹೆಚ್ಚುತ್ತಿದೆ.
ಇದನ್ನು ಬದಲಿಸಲು ನಾವೆಲ್ಲ ಮುಂದಾಗಬೇಕು. ಜಗತ್ತನ್ನು ಸಂತಸದತ್ತ ಕೊಂಡೊಯ್ಯಲು ಎಲ್ಲರೂ ಶ್ರಮಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಎಸ್.ಎ. ಜೋಶಿ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸುತ್ತಿದ್ದು, ಮಕ್ಕಳ ಭವಿಷ್ಯ ರೂಪಿಸಲು ನಿರಂತರವಾಗಿ ಶ್ರಮಿಸುತ್ತಿದ್ದೇವೆ.
ಮಕ್ಕಳಿಗೆ ಹಣ ಹಾಗೂ ಮೊಬೈಲ್ ನೀಡದೆ ಅವರ ಕಠಿಣ ಪರಿಶ್ರಮಕ್ಕೆ ಪ್ರೋತ್ಸಾಹಿಸಬೇಕು. ಜೀವನ ಮೌಲ್ಯಗಳು ಇಂದು ಕ್ಷೀಣಿಸುತ್ತಿದ್ದು, ಅವುಗಳನ್ನು ಕಲಿಸಬೇಕು ಎಂದು ಹೇಳಿದರು. ಕಾಲೇಜು ವಿದ್ಯಾರ್ಥಿ ಅಮೋಘ ಮಲಕಣ್ಣವರ ರಚಿಸಿದ “ಮಿಡಿದ ಮನ’ ಕವನ ಸಂಕಲನ ಬಿಡುಗಡೆಗೊಳಿಸಲಾಯಿತು.
ಶಾಂತೇಶ ಎಜುಕೇಷನ್ ಸೊಸೈಟಿ ಕಾರ್ಯಾಧ್ಯಕ್ಷ ಪ್ರೊ| ಪಿ.ಆರ್. ಹಂಚಿನಮನಿ, ಕಾರ್ಯದರ್ಶಿ ಮನೋಜ ಹಂಚಿನಮನಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಸಂದೇಶ ಗಡ್ಡಿ, ಪ್ರತಿಭಾ ಇದ್ದರು. ಶಾಲಿನಿ ಕನಕಾಪುರ ಸ್ವಾಗತಿಸಿದರು. ತರುಣ ಹಾಗೂ ಪೂರ್ವಿ ನಿರೂಪಿಸಿದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.