ವಿದ್ಯಾರ್ಥಿಗಳಲ್ಲಿ ಸಂಶೋಧನಾ ಪ್ರವೃತ್ತಿ ಅಗತ್ಯ
Team Udayavani, Mar 18, 2017, 3:05 PM IST
ಧಾರವಾಡ: ವಿದ್ಯಾರ್ಥಿಗಳಲ್ಲಿ ಸದಾ ಸಂಶೋಧನಾ ಪ್ರವೃತ್ತಿ ಬೆಳೆಯಬೇಕು ಎಂದು ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ನಗರದ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಐಟಿಐ ವಿದ್ಯಾರ್ಥಿಗಳು ತಯಾರಿಸಿದ ರೈತ ಸ್ನೇಹಿ ಉಪಕರಣ ವೀಕ್ಷಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಕೇವಲ ಜ್ಞಾನ ಪಡೆಯುವುದೇ ಉದ್ದೇಶವಾಗಬಾರದು. ಅದರ ಬದಲು ಪಡೆದ ಜ್ಞಾನ ಸಮಾಜಕ್ಕೆ ಉಪಯೋಗವಾಗಬೇಕು.
ನೂತನ ಅವಿಷ್ಕಾರ, ಸಂಶೋಧನೆಗಳ ಕಡೆ ವಿದ್ಯಾರ್ಥಿಗಳು ಗಮನ ನೀಡಬೇಕು. ಇಂತಹ ಅವಿಷ್ಕಾರಗಳು ಇಂದಿನ ಅಗತ್ಯವಾಗಿದೆ ಎಂದರು. ಸೈಕಲ್ ಪೆಡಲ್‌ನಿಂದ ನೀರು, ಸ್ವಯಂ ಚಾಲಿತ ಔಷಧಿ ಸಿಂಪಡಣೆ, ಕಸ ತೆಗೆಯುವ ಸಾಧನಗಳನ್ನು ವೀಕ್ಷಿಸಿದ ಶ್ರೀಗಳು, ಇವುಗಳಿಗೆ ವಿದ್ಯುತ್ ಹಾಗೂ ಇಂಧನಗಳ ಅವಶ್ಯಕತೆ ಇಲ್ಲದ್ದನ್ನು ಪ್ರಶಂಸಿದರು.
ಡಾ| ಅಜಿತ ಪ್ರಸಾದ, ಮಹಾವೀರ ಉಪಾಧ್ಯೆ, ಬಿ.ಡಿ ಪಾಟೀಲ, ಶಂಭು ಬಳಿಗಾರ, ಐಟಿಐ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.