ಬಿ ಫಾರಂ ಇಲ್ಲದಿದ್ದರೂ ನಾಮಪತ್ರ ಸಲ್ಲಿಕೆ
Team Udayavani, Aug 17, 2018, 5:09 PM IST
ಲಕ್ಷ್ಮೇಶ್ವರ: ಪಟ್ಟಣದ ಪುರಸಭೆಗೆ ಆ.29ರಂದು ನಡೆಯಲಿರುವ ಚುನಾವಣೆಗೆ ಆ.16ರ ವರೆಗೆ ಒಟ್ಟು 55 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿಗಳಾದ ಆರ್.ಎಸ್. ಬುರಡಿ ಮತ್ತು ಎಸ್.ಎನ್.ಹಳ್ಳಿಗುಡಿ ತಿಳಿಸಿದ್ದಾರೆ. ಆ.17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರೂ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷದಿಂದಲೂ ಬಿ ಫಾರ್ಮ್ ನೀಡದೇ ಇದ್ದರೂ ಗುರುವಾರ 46 ನಾಮಪತ್ರಗಳಲ್ಲಿ 18-ಬಿಜೆಪಿ, 12-ಕಾಂಗ್ರೆಸ್ ಮತ್ತು 18 ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.ಜಿಟಿಜಿಟಿ ಮಳೆ ನಡುವೆಯೂ ಅಭ್ಯರ್ಥಿಗಳು ಅಪಾರ ಬೆಂಬಲಿಗರಿಂದ ಪುರಸಭೆಗೆ ಆಗಮಿಸಿದ್ದರಿಂದ ಜನಸ್ತೋಮದಿಂದ ಪುರಸಭೆ ತುಂಬಿತ್ತು. ಟ್ರಾಫಿಕ್ ಸಮಸ್ಯೆ, ಗದ್ದಲ ನಿಯಂತ್ರಣಕ್ಕಾಗಿ ಪೊಲೀಸರು ಹರಸಾಹಸ ಪಟ್ಟರು.
ತುರುಸುಗೊಂಡ ನಾಮಪತ್ರ ಸಲ್ಲಿಕೆ
ನರೇಗಲ್ಲ: ಸ್ಥಳೀಯ ಚುನಾವಣೆಗೆ ಗುರುವಾರ 35 ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿ 5 ದಿನಗಳು ಕಳೆದಿದ್ದರೂ ಬುಧವಾರ ಕೇವಲ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು. ಆದರೆ, ಗುರುವಾರ 35 ನಾಮಪತ್ರ ಸಲ್ಲಿಕೆಯಾಗುವ ಮೂಲಕ ಚುಣಾವಣಾ ಕಣ ರಂಗೇರುತ್ತಿದೆ.
ಬೆಳಗ್ಗೆ 11 ಗಂಟೆಗೆ ಪ್ರಾರಂಭವಾದ ನಾಮಪತ್ರ ಸಲ್ಲಿಕೆಗೆ ಕಾಂಗ್ರೆಸ್ ಹಾಗೂ ಬಿಜೆಪಿಯ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ತುರುಸಿನಿಂದ ನಾಮಪತ್ರ ಸಲ್ಲಿಕೆಯಲ್ಲಿ ತೊಡಗಿದ್ದರು. ಶುಕ್ರವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಹೆಚ್ಚಿನ ಸಂಖ್ಯೆಯ ನಾಮಪತ್ರ ಸಲ್ಲಿಕೆಯಾಗಲಿವೆ ಎಂದು ಚುನಾವಣಾಧಿಕಾರಿ ಡಿ.ಐ. ಅಸುಂಡಿ ಮತ್ತು ಎಸ್.ಆರ್. ಹೂಗಾರ ತಿಳಿಸಿದ್ದಾರೆ.
ವರಿಷ್ಠರಿಗೆ ಕಗ್ಗಂಟಾದ ಅಭ್ಯರ್ಥಿ ಆಯ್ಕೆ
ಗಜೇಂದ್ರಗಡ: ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆಯ ಹಂತ ತಲುಪಿದೆ. ಆದರೆ ಪಟ್ಟಣದ ಕೆಲ ವಾರ್ಡ್‌ಗಳ ಅಭ್ಯರ್ಥಿಗಳ ಆಯ್ಕೆ ಪಕ್ಷಗಳ ವರಿಷ್ಠರಿಗೆ ಕಗ್ಗಂಟಾಗಿದೆ. ಆದರೆ ಕೆಲ ವಾರ್ಡ್‌ಗಳ ಬಿಜೆಪಿ, ಕಾಂಗ್ರೆಸ್ ಮತ್ತು ಸಿಪಿಐಎಂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಹೊರತು ಇನ್ನು ಕೆಲ ವಾರ್ಡ್‌ಗಳಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಗೊಂದಲದ ಗೂಡಾಗಿದೆ. ಗುರುವಾರ ಬಿಜೆಪಿಯಿಂದ 8, ಕಾಂಗ್ರೆಸ್ 4, ಸಿಪಿಐಎಂ 5, ಪಕ್ಷೇತರ 1 ಸೇರಿ ಒಟ್ಟು 17 ಜನ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್, ಬಿಜೆಪಿ ಮತ್ತು ಸಿಪಿಐಎಂ ಪಕ್ಷದ ಅಭ್ಯರ್ಥಿಗಳು ತಮ್ಮ ಅಪಾರ ಬೆಂಬಲಿಗರೊಂದಿಗೆ ಆಗಮಿಸಿದ್ದು, ಚುನಾವಣಾ ಕಣ ರಂಗೇರುವಂತೆ ಮಾಡಿತು.
ಪಪಂ ಚುನಾವಣೆ: 20 ನಾಮಪತ್ರ ಸಲ್ಲಿಕೆ
ಮುಳಗುಂದ: ಸ್ಥಳೀಯ ಪಟ್ಟಣ ಪಂಚಾಯತಿಗೆ ಆ.29ರಂದು ಚುನಾವಣೆ ನಿಗದಿಯಾಗಿದ್ದು, ಗುರುವಾರ ಒಟ್ಟು 20 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.ಕಾಂಗ್ರೆಸ್ ಪಕ್ಷದಿಂದ 18 ಹಾಗೂ ಪಕ್ಷೇತರರಾಗಿ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಒಟ್ಟು 19 ವಾರ್ಡ್‌ಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆಯಾಗುತ್ತಿದ್ದು, ಆ.17 ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳು ವಾದ್ಯಮೇಳಗಳ ಮೆರವಣಿಗೆ ಮೂಲಕ ಶಾಸಕ ಎಚ್.ಕೆ. ಪಾಟೀಲ ಹಾಗೂ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಎಲ್ಲ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿಗಳಾದ ಕೆ.ವಿ. ಪಾಟೀಲ, ಎಚ್.ಎಂ. ಖಾನ ಹಾಗೂ ಇತರೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಒಟ್ಟಿನಲ್ಲಿ ನಾಮಪತ್ರ ಸಲ್ಲಿಕೆ ಕಾರ್ಯ ಭರದಿಂದ ಸಾಗಿದೆ.
ನಾಮಪತ್ರ ಸಲ್ಲಿಕೆ
ರೋಣ: ಪಟ್ಟಣದ ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಜೋರಾಗಿದ್ದು, ಗುರುವಾರ ವಿವಿಧ ವಾರ್ಡ್‌ಗೆ ಕೆಲವರು ಉಮೇದುವಾರಿಕೆ ಸಲ್ಲಿಸಿದರು. ಇಲ್ಲಿಯವರೆಗೆ 32 ಜನ ಅಭ್ಯರ್ಥಿಗಳು 1ರಿಂದ 11ನೇ ವಾರ್ಡ್‌ಗೆ ಚುನಾವಣಾಧಿಕಾರಿ ಎನ್.ನಂಜುಡಯ್ಯ ಮತ್ತು 12ರಿಂದ 23ನೇ ವಾರ್ಡ್ ಗೆ ಚುನಾವಣಾಧಿ ಕಾರಿ ಡಾ| ಶಿವರಾಜ ಕುಲಕರ್ಣಿ ಅವರಿಗೆ ನಾಮಪತ್ರ ಸಲ್ಲಿಸಿದರು. ಶಿರಹಟ್ಟಿ ಪಪಂ ಚುನಾವಣೆಗೆ ಒಟ್ಟು 17 ನಾಮಪತ್ರ ಸಲ್ಲಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.