Hubli; ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ
Team Udayavani, Jul 6, 2024, 1:02 PM IST
ಹುಬ್ಬಳ್ಳಿ: ಮುಂಗಾರು ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಕೇಂದ್ರ ಸರಕಾರದ ಒಬಿಸಿ ಮೀಸಲಾತಿ ನೀಡುವಂತೆ ಶಿಫಾರಸ್ಸಿಗೆ ಒತ್ತಾಯಿಸಿ ಪಂಚಮಸಾಲಿ ಸಮಾಜದ ಪ್ರಮುಖರು ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಸಿದರು.
ಶನಿವಾರ ಇಲ್ಲಿನ ಮಂಜುನಾಥ ನಗರದಲ್ಲಿರುವ ಕುಂದಗೋಳ ಶಾಸಕ ಎಂ.ಆರ್. ಪಾಟೀಲ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಕೂಡಲಸಂಗಮದ ಪಂಚನಸಾಲಿ ಪೀಠದ ಶ್ರೀ ಬಸವ ಜಯಮೃತ್ಯಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಮುಂಬರುವ ಅಧಿವೇಶನದಲ್ಲಿ ಸಮಾಜದ ಶಾಸಕರು ಧ್ವನಿಮುದ್ರಣ ಎತ್ತಬೇಕು ಎಂದು ಮನವಿ ಮಾಡಿದರು.
ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಸರಕಾರ ಬಂದ ನಂತರ ಹಿಂದಿನ ಸರಕಾರ ನೀಡಿದ್ದ 2 ಡಿ ಮೀಸಲಾತಿ ಕೂಡ ಅನುಷ್ಠಾನಕ್ಕೆ ಬಂದಿಲ್ಲ. ಇಷ್ಟೆಲ್ಲಾ ಹೋರಾಟ ಮಾಡಿದರೂ ಬೇಡಿಕೆ ಈಡೇರಿಲ್ಲ. ಹೀಗಾಗಿ ಎರಡನೇ ಹಂತದ ಹೋರಾಟ ಆರಂಭಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಕೊನೆಗೆ ವಿಧಾನಸಭೆ ಮುತ್ತಿಗೆ ಸಂದರ್ಭದಲ್ಲಿ ಒಂದು ತಿಂಗಳ ಗಡುವು ಕೊಟ್ಟಿದ್ದನ್ನು ಮರೆತಿದ್ದಾರೆ. ಸರಕಾರ ಈ ಅಧಿವೇಶನದಲ್ಲಿ ಸ್ಪಂದನೆ ನೀಡದಿದ್ದರೆ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುವ ಅಧಿವೇಶನಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.