ಶಿಸ್ತು ಅಳವಡಿಸಿಕೊಂಡರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ
Team Udayavani, Apr 24, 2017, 3:03 PM IST
ಹುಬ್ಬಳ್ಳಿ: ಸಮಯ ಸದುಪಯೋಗ ಪಡಿಸಿಕೊಂಡು, ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡರೆ ಮಾತ್ರ ಯಶಸ್ಸು ಪಡೆಯಲು ಸಾಧ್ಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು. ಜೆ.ಸಿ. ನಗರದ ಮಹಿಳಾ ಕಾಲೇಜಿನ ಮೂಜಗಂ ಸಭಾಭವನದಲ್ಲಿ ಆಯೋಜಿಸಿದ್ದ ಗುರುದೇವ ವಾಣಿಜ್ಯ ವಿದ್ಯಾಲಯದ ಸ್ವರ್ಣಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾನು ಕಾನೂನು ವಿದ್ಯಾರ್ಥಿಯಾಗಿದ್ದಾಗ ಗುರುದೇವ ವಾಣಿಜ್ಯ ವಿದ್ಯಾಲಯದಲ್ಲಿ ಟೈಪಿಂಗ್ ಕಲಿಯಲು ಅವಕಾಶ ಲಭಿಸಿದ್ದು ನನ್ನ ಸುದೈವ. ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಟೈಪಿಂಗ್ ಜಾಗದಲ್ಲಿ ಕಂಪ್ಯೂಟರ್ ಬಂದಿರಬಹುದು, ಆದರೆ, ಟೈಪಿಂಗ್ ಹಾಗೂ ಶಾರ್ಟ್‌ಹ್ಯಾಂಡ್ ರಾಜಕೀಯ ಜೀವನದಲ್ಲಿ ಹಲವು ಬಾರಿ ಪ್ರಯೋಜನಕ್ಕೆ ಬಂದಿದೆ.
ಕಲಿತ ಯಾವುದೇ ವಿದ್ಯೆ ಹಾಳಾಗುವುದಿಲ್ಲ. ಉಪಯೋಗಕ್ಕೆ ಬಂದೇ ಬರುತ್ತದೆ ಎಂದರು. ಸಂಸ್ಥೆ ಕಟ್ಟಿ ಬೆಳೆಸುವುದು ಕಷ್ಟದ ಕೆಲಸ. ಗುರುದೇವ ವಾಣಿಜ್ಯ ವಿದ್ಯಾಲಯವನ್ನು ಕಳೆದ 50 ವರ್ಷಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿ, ಸಮಯಕ್ಕೆ ಗೌರವ ನೀಡುವುದನ್ನು ಕಲಿತರೆ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಪಡೆಯಬಹುದು. ಸಮಯ ಹಾಳು ಮಾಡುವ ಪರಿಪಾಠ ಯುವಕರಲ್ಲಿ ಬೆಳೆಯುತ್ತಿರುವುದು ಬೇಸರದ ಸಂಗತಿ ಎಂದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಮೂರುಸಾವಿರ ಮಠದ ಶ್ರೀ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ ಮಾತನಾಡಿ, ಜಿ.ಆರ್. ಅಂದಾನಿಮಠ ಅವರು ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದಾರೆ.
ಇಲ್ಲಿ ಕಲಿತ ಸಹಸ್ರಾರು ವಿದ್ಯಾರ್ಥಿಗಳಲ್ಲಿ ಸಮಯ ಪರಿಪಾಲನೆ ಹಾಗೂ ಶಿಸ್ತು ಬೆಳೆಸುವಲ್ಲಿ ಸಂಸ್ಥೆ ಮಹತ್ತರ ಪಾತ್ರ ವಹಿಸಿದೆ ಎಂದರು. ಜಿ.ಆರ್. ಅಂದಾನಿಮಠ, ಅಬ್ದುಲ್ ಕರೀಮ್, ಆರ್.ಬಿ. ಗದಗಕರ, ಎಸ್.ಆರ್. ಭಾಂಡಗೆ, ಪ್ರಭಾವತಿ ಕೋಟಕರ, ಲಿಂಗರಾಜ ಇಂಗಳಹಳ್ಳಿ, ಕಿರಣ ಅಂದಾನಿಮಠ, ಸಿ.ಪಿ. ಪಡಚಣ್ಣವರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.