ಬೆಂಬೆಲೆ ಕೊಟ್ಟರೂ ಹೇಳ ಹೆಸರಿಲ್ಲದಂತಾಯ್ತು!
Team Udayavani, Oct 25, 2019, 1:03 PM IST
ಧಾರವಾಡ: ಪ್ರತಿ ವರ್ಷ ಹೆಸರು ಬೆಳೆಗೆ ಬೆಂಬಲ ಬೆಲೆ ಕೊಡಿ ಎಂದು ದುಂಬಾಲು ಬಿದ್ದರೂ ರೈತರಿಗೆ ಸರ್ಕಾರದಿಂದ ಸಕಾಲಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿರಲಿಲ್ಲ. ಆದರೆ ಈ ವರ್ಷ ಬೆಂಬಲ ಬೆಲೆಯಡಿ ಹೆಸರು ಕಾಳು ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಪ್ರಕ್ರಿಯೆ ಮುಕ್ತಾಯಗೊಂಡು ಖರೀದಿ ಪ್ರಕ್ರಿಯೆಗೆ ಚಾಲನೆ ದೊರೆತಿದ್ದರೂ, ಹೆಸರು ಬೆಳೆ ಇಲ್ಲದೇ ಇರುವುದರಿಂದ ರೈತರಿಂದ ಉತ್ತಮ ಸ್ಪಂದನೆ ದೊರೆಯದಂತಾಗಿದೆ.
ಕಳೆದ ಬಾರಿ 1.35 ಲಕ್ಷ ರೈತರು ಹೆಸರು ಬೆಳೆ ಮಾರಾಟಕ್ಕಾಗಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿದ್ದರು. ಆದರೆ ಈ ಸಲ ಇಡೀ ರಾಜ್ಯದಲ್ಲಿ ನೋಂದಣಿ ಮಾಡಿದ ರೈತರ ಸಂಖ್ಯೆ ಕೇವಲ 29,311. ನೆರೆ ಹೊಡೆತಕ್ಕೆ ಹೆಸರು ಕೈಗೆ ಬಾರದೇ ಹಾಳಾಗಿದ್ದು, ಅಳಿದುಳಿದ ಬೆಳೆಗೆ ಗುಣಮಟ್ಟದ ನಿಯಮಗಳ ಸಹವಾಸ ಬೇಡವೇ ಬೇಡ ಎನ್ನುತಿದ್ದಾರೆ.
ಈಗ ಹೆಸರು ಬೆಳೆ ಮಾರಾಟ ಮಾಡಿದರೆ ಬೆಳೆ ವಿಮೆ ಸಿಗದು ಎಂಬ ಲೆಕ್ಕಾಚಾರದಿಂದಲೂ ಹೆಸರು ಮಾರಾಟಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಕಳೆದ ಬಾರಿ ರಾಜ್ಯದಲ್ಲಿ 23 ಸಾವಿರ ಮೆಟ್ರಿಕ್ ಟನ್ ಹೆಸರು ಖರೀದಿಗೆ ಚಾಲನೆ ನೀಡಿ, ಜಿಲ್ಲೆಗಳ ಆಯಾ ಕೇಂದ್ರಗಳಿಗೆ ಇಂತಿಷ್ಟು ಪ್ರಮಾಣ ನಿಗದಿ ಮಾಡಿ ಅಷ್ಟೇ ಖರೀದಿ ಮಾಡುವಂತೆ ಸೂಚಿಸಲಾಗಿತ್ತು. ಆದರೆ ರೈತರಿಂದ ಖರೀದಿ ಪ್ರಮಾಣ ಹೆಚ್ಚಿಸುವಂತೆ ಒತ್ತಡ ಹೆಚ್ಚಾಗಿದ್ದರಿಂದ ರಾಜ್ಯ ಸರ್ಕಾರ ಒಟ್ಟು 27,500 ಮೆಟ್ರಿಕ್ ಟನ್ ಹೆಸರು ಖರೀದಿ ಮಾಡಿತ್ತು. ಈ ಸಲ ನೆರೆ ಹೊಡೆತಕ್ಕೆ ಹೆಸರು ಬೆಳೆ ಕೈ ಕೊಟ್ಟಿರುವುದನ್ನು ಅರಿತಿರುವ ಕೇಂದ್ರ ಸರ್ಕಾರವು ರಾಜ್ಯದಿಂದ 12 ಸಾವಿರ ಮೆಟ್ರಿಕ್ ಟನ್ ಖರೀದಿಗೆ ಅಷ್ಟೇ ಅವಕಾಶ ಮಾಡಿ ಕೊಟ್ಟಿದೆ. ಇದಲ್ಲದೇ ರಾಜ್ಯದ ಯಾವ ಖರೀದಿ ಕೇಂದ್ರಗಳಿಗೂ ಇಂತಿಷ್ಟೇ ಪ್ರಮಾಣದಲ್ಲಿ ಖರೀದಿಸುವಂತೆ ನಿಗದಿಯನ್ನೂ ಮಾಡಿಲ್ಲ. ಆರಂಭಗೊಳ್ಳದ ಖರೀದಿ: ಅ.2ರಿಂದ ಹೆಸರು ನೋಂದಣಿ ಆರಂಭಗೊಂಡು 9ರೊಳಗೆ ಮುಕ್ತಾಯಗೊಳ್ಳಬೇಕಿತ್ತು. ಆದರೆ ಹೆಸರು ನೋಂದಣಿ ಮಾಡಬೇಕಾದ ಸಾಫ್ಟ್‌ವೇರ್ ತಡವಾಗಿ ಬಂದಿದ್ದರಿಂದ ಅ.8ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿತ್ತು. ಹೀಗಾಗಿ ಅ.19ರವರೆಗೆ ನೋಂದಣಿಗೆ ಅವಕಾಶ ಮಾಡಿಕೊಡಲಾಗಿತ್ತು. ಅದರಂತೆ ಈಗ ನೋಂದಣಿ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅ.20ರಿಂದಲೇ ಖರೀದಿ ಆರಂಭ ಮಾಡುವಂತೆ ಎಲ್ಲ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಅ.20 ರವಿವಾರ ರಜೆ ಹಿನ್ನೆಲೆಯಲ್ಲಿ ಸೋಮವಾರದಿಂದ ಖರೀದಿ ಪ್ರಕ್ರಿಯೆ ಆರಂಭಗೊಂಡಿದ್ದರೂ ರೈತರಿಂದ ಸ್ಪಂದನೆ ಲಭಿಸಿದಂತಾಗಿದೆ.
ರೈತರು ಮಾರಾಟ ಮಾಡಿದ ಹೆಸರನ್ನು ತುಂಬಿ ಇಡಲು ಖಾಲಿ ಚೀಲಗಳು ಕೇಂದ್ರಗಳಿಗೆ ಬಂದಿದ್ದು, ಆದರೆ ಹೆಸರು ಮಾರಾಟಕ್ಕೆ ಕೇಂದ್ರಗಳತ್ತ ಹೆಜ್ಜೆ ಹಾಕಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಇದಲ್ಲದೇ ಖರೀದಿ ಕೇಂದ್ರಗಳಲ್ಲಿ ಗ್ರೇಡಿಂಗ್ ಕಾರ್ಯ ಮಾಡಲು ನೇಮಕಗೊಂಡ ಕೃಷಿ ಇಲಾಖೆ ಸಿಬ್ಬಂದಿಯೂ ಕೇಂದ್ರಗಳತ್ತ ಮುಖ ಮಾಡಿಲ್ಲ. ಹೀಗಾಗಿ ಖರೀದಿ ಕೇಂದ್ರಗಳಿಗೆ ಬರುವ ರೈತರಿಂದ ಮಾದರಿ ಕಾಳನ್ನು ತೆಗೆದುಕೊಂಡು, ಅವರ ಮಾಹಿತಿ ಪಡೆದು ಸಂಗ್ರಹಿಸಿ ಇಟ್ಟಿಕೊಳ್ಳುವ ಕೆಲಸವಷ್ಟೇ ಕೇಂದ್ರದ ಸಿಬ್ಬಂದಿ ಮಾಡುತ್ತಿದ್ದಾರೆ. ಗ್ರೇಡಿಂಗ್ ಕಾರ್ಯ ಮುಗಿದ ಬಳಿಕವೇ ಗುಣಮಟ್ಟದ ಹೆಸರು ಕಾಳಿನ ಖರೀದಿ ಆರಂಭಗೊಳ್ಳಲಿದ್ದು, ಸಂಬಂಧಪಟ್ಟವರು ಇತ್ತ ಲಕ್ಷ್ಯ ವಹಿಸಬೇಕಿದೆ.
ಗುಣಮಟ್ಟದ ಕೊರತೆ : ಎಫ್‌ಎಕ್ಯೂ ಗುಣಮಟ್ಟದ ಕಾಳು ಖರೀದಿಸುವ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿದ ರೈತರು ತಂದ ಕಾಳಿನಲ್ಲಿ ಅತಿಯಾದ ಮಳೆ ಹಿನ್ನೆಲೆಯಲ್ಲಿ ತೇವಾಂಶ ಹೆಚ್ಚಾಗಿದೆ. ಇದೇ ಕಾರಣವೊಡ್ಡಿ ಕಾಳು ತಿರಸ್ಕರಿಸುತ್ತಿರುವುದು ರೈತರ ಕೆಂಗಣ್ಣಿಗೆ ಗುರಿ ಆಗಿದೆ. ಹುಬ್ಬಳ್ಳಿಯ ಅಮರಗೋಳದ ಖರೀದಿ ಕೇಂದ್ರದಲ್ಲಿ ಮಂಗಳವಾರ ಈ ಕಾರಣದಿಂದಲೇ ರೈತರು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ರೀತಿಯ ಗಲಾಟೆಗಳು ಬಹುತೇಕ ಎಲ್ಲ ಕೇಂದ್ರಗಳಲ್ಲಿ ನಡೆಯುತ್ತಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.