ತಹಸೀಲ್ದಾರ ಗೈರು: ಸಭೆ ಮುಂದಕ್ಕೆ


Team Udayavani, Jun 23, 2017, 3:15 PM IST

hub1.jpg

ಧಾರವಾಡ: ಪಡಿತರ ಚೀಟಿ ಹಾಗೂ ಪಡಿತರ ವಿತರಣೆಯಲ್ಲಿ ಕಂಡು ಬರುತ್ತಿರುವ ನ್ಯೂನತೆಗಳ ಕುರಿತಂತೆ ಚರ್ಚಿಸಿ, ಪರಿಹಾರ ಕಂಡುಕೊಳ್ಳುವಲ್ಲಿ ತಾಪಂ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಗೆ ತಹಶೀಲ್ದಾರ ಪ್ರಕಾಶ ಕುದರಿ ಬಾರದ ಹಿನ್ನೆಲೆಯಲ್ಲಿ ತಹಶೀಲ್ದಾರರ ಸಮ್ಮುಖದಲ್ಲೇ ಸಭೆ ಕೈಗೊಳ್ಳಲು ಮುಂದಿನ ದಿನಾಂಕ ನಿಗದಿಗೊಳಿಸುವಂತೆ ನಿರ್ಧರಿಸಿ ಸಭೆ ಅಂತ್ಯಗೊಳಿಸಲಾಯಿತು. 

ತಾಪಂ ಅಧ್ಯಕ್ಷ ಮಲ್ಲಪ್ಪ ಭಾವಿಕಟ್ಟಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಧಾರವಾಡ ತಾಪಂ ವ್ಯಾಪ್ತಿಯ ತಾಪಂ ಸದಸ್ಯರು, ಜಿಪಂ ಸದಸ್ಯರು, ಗ್ರಾಪಂ ಪ್ರತಿನಿಧಿಗಳು, ಪಿಡಿಒ ಸೇರಿದಂತೆ ಆಹಾರ ಇಲಾಖೆಯ ಅಧಿಕಾರಿಗಳು, ಪಡಿತರ ಅಂಗಡಿ ಮಾಲೀಕರು ಪಾಲ್ಗೊಂಡಿದ್ದರು. ಮುಖ್ಯವಾಗಿ ತಹಶೀಲ್ದಾರ ಪ್ರಕಾಶ ಕುದರಿ ಆಗಮಿಸಬೇಕಿತ್ತು.

ಆದರೆ ತಹಶೀಲ್ದಾರರು ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡ ಕಾರಣ ಸಭೆಗೆ ಗೈರಾಗಬೇಕಾಯಿತು. ಕೊನೆಗೆ ತಹಶೀಲ್ದಾರರು ಸಭೆಗೆ ಬರಲು ಆಗುವುದಿಲ್ಲ ಎಂಬ ಸಂದೇಶ ಕಳುಹಿಸಿದ ಬಳಿಕ ಅವರ ಸಮ್ಮುಖದಲ್ಲಿ ಮುಂದಿನ ಸಭೆ ಕೈಗೊಳ್ಳಲು ನಿರ್ಧರಿಸಿ ಸಭೆ ಮುಕ್ತಾಯಗೊಳಿಸಲಾಯಿತು. 

ಇದಕ್ಕೂ ಮುನ್ನ ಆಧಾರ ಕಾರ್ಡ್‌ ಲಿಂಕ್‌ ಆಗದ ಪಡಿತರ ಚೀಟಿದಾರರಿಗೆ ಮೇ ತಿಂಗಳಿಂದ ಪಡಿತರ ಸ್ಥಗಿತಗೊಳಿಸಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಇದಲ್ಲದೇ ಹೊಸದಾಗಿ ಪಡಿತರ ಚೀಟಿಗಾಗಿ ಹಾಕಿರುವ ಎಲ್ಲ ಅರ್ಜಿಗಳನ್ನು ಇತ್ಯರ್ಥಪಡಿಸಿ, ಒಂದು ತಿಂಗಳೊಳಗೆ ಪಡಿತರ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಇನ್ಸ್‌ಪೆಕ್ಟರ್‌ ಹಿರೇಮಠ ಅವರಿಗೆ ಸೂಚಿಸಲಾಯಿತು. 

ಸೀಮೆಎಣ್ಣೆ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನ್ಯಾಯಬೆಲೆ ಅಂಗಡಿ ಮಾಲೀಕರು ಸಭೆಯ ಗಮನ ಸೆಳೆದರೆ, ಗ್ರಾಹಕರಿಗೆ ಸೀಮೆ ಎಣ್ಣೆ ಪೂರೈಕೆಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು ಧ್ವನಿ ಎತ್ತಿದರು. ಗ್ಯಾಸ್‌ ಇಲ್ಲದವರಿಗೆ 3 ಲೀಟರ್‌ ಹಾಗೂ ಗ್ಯಾಸ್‌ ಇದ್ದವರಿಗೆ 1 ಲೀಟರ್‌ ಸೀಮೆಎಣ್ಣೆ ನೀಡುವಂತೆ ಆದೇಶ ಮಾಡಿದ್ದರೂ ಅದು ಅನುಷ್ಠಾನ ಆಗಿಲ್ಲ.

ಇದರಿಂದ ಗ್ರಾಮೀಣ ಪ್ರದೇಶ ಜನರಿಗೆ ತೊಂದರೆ ಆಗುತ್ತಿದೆ ಎಂದು ಸಭೆಯ ಗಮನ ಸೆಳೆಯಲಾಯಿತು. ಇದಕ್ಕೆ ಉತ್ತರಿಸಿದ ಆಹಾರ ಇಲಾಖೆಯ ಇನ್ಸ್‌ಪೆಕ್ಟರ್‌ ಹಿರೇಮಠ, ಈ ಬಗ್ಗೆ ಸರಕಾರದ ಆದೇಶ ಬಂದಿದ್ದು, ಅದಕ್ಕಾಗಿ ಈಗಾಗಲೇ 11 ಸಾವಿರ ಅರ್ಜಿಗಳು ಸೀಮೆಎಣ್ಣೆಗಾಗಿ ಬಂದಿದೆ.

ಅವುಗಳೆಲ್ಲವನ್ನೂ ಜಿಲ್ಲಾಧಿಕಾರಿಗಳಿಗೆ ಕಳುಹಿಸಿದ್ದು, ಅವರಿಂದ ಸರಕಾರಕ್ಕೆ ಹೋಗಿ ಅನುಮೋದನೆಗೊಂಡು ಬಂದರೆ ಸೀಮೆಎಣ್ಣೆ ಪೂರೈಸಲಾಗುವುದು ಎಂದು ಸ್ಪಷ್ಟಪಡಿಸಿದರು. ಜಿಪಂ ಸದಸ್ಯರಾದ ಕೆ.ಸಿ.ಪುಡಕಲಕಟ್ಟಿ, ನಿಂಗಪ್ಪ ಘಾಟಿನ, ತಾಪಂ ಉಪಾಧ್ಯಕ್ಷ ಮುತ್ತಪ್ಪ ನಾಯ್ಕರ, ಸ್ಥಾಯಿ ಸಮಿತಿ ಅಧ್ಯಕ್ಷ ಫಕ್ಕೀರಪ್ಪ ಬುಡ್ಡಿಕಾಯಿ, ತಾಪಂ ಇಒ ಜಿ.ಡಿ.ಜೋಶಿ ಸೇರಿದಂತೆ ಹಲವರು ಇದ್ದರು.  

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.